ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ ವಿರುದ್ಧವೂ ಮುಂದುವರಿದ ವಿರಾಟ್ ಕೊಹ್ಲಿ ಫ್ಲಾಪ್ ಶೋ

Ipl 2020: Rcb Vs Mi: Virat Kohli Bad Form Continues

ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಸತತ ಮೂರನೇ ಪಂದ್ಯದಲ್ಲೂ ವಿಫಲರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮರಳಿ ಫಾರ್ಮ್‌ ಕಂಡುಕೊಳ್ಳುವ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದರು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು ಕೊಹ್ಲಿ ಮುಂಬೈ ಇಂಡಿಯನ್ಸ್ ಬೌಲಿಂಗ್ ಮುಂದೆ ಮಂಕಾಗಿ ವಿಕೆಟ್ ಕಳೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿ ಕೇವಲ ಮೂರು ರನ್‌ಗಳಿಸಲಷ್ಟೇ ಶಕ್ತರಾದರು. ದೀಪಕ್ ಚಾಹರ್ ಎಸೆತದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾಗೆ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ ಟೂರ್ನಿಯ ಮೂರನೇ ಪಂದ್ಯದಲ್ಲೂ ಅಗ್ಗಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ದಾಖಲೆ ಸನಿಹದಲ್ಲಿದ್ದಾರೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕ್ವಿಂಟನ್ ಡಿ ಕಾಕ್ದಾಖಲೆ ಸನಿಹದಲ್ಲಿದ್ದಾರೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕ್ವಿಂಟನ್ ಡಿ ಕಾಕ್

ಸುದೀರ್ಘಕಾಲದಿಂದ ಫಾರ್ಮ್‌ನಲ್ಲಿಲ್ಲದ ವಿರಾಟ್ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್ ಮೊರೆಹೋದರು. ಮೊದಲಿಗೆ ಕ್ರೀಸ್‌ಗೆ ಕಚ್ಚಿನಿಂತುಕೊಳ್ಳುವ ಲೆಕ್ಕಾಚಾರದಲ್ಲಿದ್ದಂತೆ ಕಂಡರು ಕೊಹ್ಲಿ. ಆದರೆ ಮುಂಬೈ ಬೌಲರ್‌ಗಳು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಹೆಚ್ಚಿನ ಅವಕಾಶ ನೀಡದಂತೆ ಮಾಡುವಲ್ಲಿ ಸಫಲರಾಗಿದ್ದಾರೆ.

ವಿರಾಟ್ ಕೊಹ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 14 ರನ್‌ಗಳಿಸಿದ್ದರು. ಬಳಿಕ ನಡೆದ ಕಿಂಗ್ಸ್ ಇಲವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ 5ಎಸೆತಗಳನ್ನು ಎದುರಿಸಿ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿ ಹೊರನಡೆದಿದ್ದರು. ಈಗ ಮುಂಬೈ ವಿರುದ್ಧದ ಮೂರನೇ ಪಂದ್ಯದಲ್ಲೂ ಕೊಹ್ಲಿ ಪ್ರದರ್ಶನ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಬೆಂಗಳೂರು-ಮುಂಬೈ ಮುಖಾಮುಖಿಯ ಸೋಲು-ಗೆಲುವಿನ ಅಂಕಿ-ಅಂಶಗಳುಬೆಂಗಳೂರು-ಮುಂಬೈ ಮುಖಾಮುಖಿಯ ಸೋಲು-ಗೆಲುವಿನ ಅಂಕಿ-ಅಂಶಗಳು

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಸುದೀರ್ಘಕಾಲದಿಮದ ಫಾರ್ಮ್‌ಕಳೆದುಕೊಂಡಿದ್ದರು. ಕಳೆದ ಫೆಬ್ರವರಿಯಲ್ಲಿ ಅಂತ್ಯವಾದ ನ್ಯೂಜಿಲೆಂಡ್‌ನಲ್ಲಿ ನಡೆದ ಸರಣಿಯಲ್ಲಿ ಕೊಹ್ಲಿ ಸಂಪೂರ್ಣವಾಗಿ ವೈಫಲ್ಯವನ್ನು ಕಂಡಿದ್ದರು. ವಿಶ್ವಕಪ್‌ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಸರಣಿಯಲ್ಲಿ ಶತಕಗಳಿಸಿದ್ದೇ ಕೊನೆ ಬಳಿಕ ಕೊಹ್ಲಿ ಬ್ಯಾಟ್‌ನಿಂದ ಶತಕ ಒಂದೇ ಒಂದು ಶತಕ ದಾಖಲಾಗಿರಲಿಲ್ಲ. ಈ ಕಳಪೆ ಫಾರ್ಮ್ ಈಗ ಐಪಿಎಲ್‌ನಲ್ಲೂ ಮುಂದುವರಿದಿದೆ.

Story first published: Tuesday, September 29, 2020, 10:12 [IST]
Other articles published on Sep 29, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X