Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಆರ್‌ಸಿಬಿ vs ಆರ್‌ಆರ್: ಹೆಡ್ ಟು ಹೆಡ್ ಹಣಾಹಣಿಯಲ್ಲಿ ಯಾರ ಮೇಲುಗೈ?

Ipl 2020, Rcb Vs Rr Head-to-head Records And Players To Watch Out For

ಅಬುಧಾಬಿಯ ಶೇಕ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಶನಿವಾರ ಮುಖಾಮುಖಿಯಾಗಲಿದೆ. ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳ ಕಾದಾಟದ ದಾಖಲೆ ಹೇಗಿದೆ? ಯಾರು ಮೇಲುಗೈ ಸಾಧಿಸಿದ್ದಾರೆ ಎಂಬುದನ್ನು ಈ ವರದಿಯಲ್ಲಿ ನೊಡೋಣ.

ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ ಸರಿಯಾಗಿ 20 ಬಾರಿ ಪರಸ್ಪರ ಮುಖಾಮುಖಿಯಾಗಿದೆ. ಈ ಹಣಾಹಣಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಮುನ್ನಡೆಯನ್ನು ಪಡೆದುಕೊಂಡಿದೆ. ರಾಜಸ್ಥಾನ್ ರಾಯಲ್ಸ್ ತಂಡ 10 ಪಂದ್ಯಗಳಲ್ಲಿ ಗೆಲುವನ್ನು ಕಂಡಿದ್ದರೆ 8 ಪಂದ್ಯಗಳಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. 2 ಪಂದ್ಯ ಮಳೆಯ ಕಾರಣದಿಂದ ರದ್ದಾಗಿದೆ.

ಕಳೆದ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೊದಲ ಪಂದ್ಯದಲ್ಲಿ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಜೋಸ್ ಬಟ್ಲರ್ ಅರ್ಧ ಶತಕ ಹಾಗೂ ಶ್ರೇಯಸ್ ಗೋಪಾಲ್ ಅವರ 3 ವಿಕೆಟ್ ಸಾಧನೆಯಿಂದ 7 ವಿಕೆಟ್‌ಗಳ ಗೆಲುವನ್ನು ಸಾಧಿಸಿತ್ತು. ಆದರೆ ಬೆಂಗಳೂರನಲ್ಲಿ ನಡೆದ ಎರಡನೇ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ ಕಾರಣ ಫಲಿತಾಂಶವಿಲ್ಲದೆ ಪಂದ್ಯ ರದ್ದಾಗಿತ್ತು.

ಎರಡು ತಂಡಗಳ ಮುಖಾಮುಖಿಯ ಸಂದರ್ಭದಲ್ಲಿ ಆರ್‌ಸಿಬಿಯ ಅನುಭವಿ ಆಟಗಾರ ಎಬಿ ಡಿವಿಲಿಯರ್ಸ್ ಪ್ರದರ್ಶನ ಅದ್ಭುತವಾಗಿದೆ. ಡಿವಿಲಿಯರ್ಸ್ 13 ಇನ್ನಿಂಗ್ಸ್‌ಗಳಲ್ಲಿ ಆರ್‌ಆರ್ ವಿರುದ್ಧ ಕಣಕ್ಕಿಳಿದಿದ್ದು 417 ರನ್ ಗಳಿಸಿದ್ದಾರೆ. ಗಮನಾರ್ಹ ಸಂಗತಿಯೆಂದರೆ ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಡಿವಿಲಿಯರ್ಸ್ ಆರ್‌ಆರ್ ತಂಡದ ಕನ್ನಡಿಗ ಬೌಲರ್ ಶ್ರೇಯಸ್ ಗೋಪಾಲ್‌ಗೆ ವಿಕೆಟ್ ಒಪ್ಪಿಸಿದ್ದಾರೆ.

ಎರಡು ತಂಡಗಳ ಮುಖಾಮುಖಿಯಲ್ಲಿ ಬೌಲರ್‌ಗಳಲ್ಲಿ ಹೆಚ್ಚು ಯಶಸ್ಸು ಗಳಿಸಿದ ಆಟಗಾರ ಕನ್ನಡಿಗ ಶ್ರೇಯಸ್ ಗೋಪಾಲ್ ಆವರೇ ಆಗಿದ್ದಾರೆ. ಕೇವಲ ನಾಲ್ಕು ಪಂದ್ಯದಲ್ಲಿ ಶ್ರೇಯಸ್ ಗೋಪಾಲ್ 12 ವಿಕೆಟ್ ಪಡೆದಿದ್ದಾರೆ. ಕಳೆದ ಆವೃತ್ತಿಯಲ್ಲಿ ಮುಖಾಮುಖಿಯಾಗಿದ್ದ ವೇಳೆ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ.

Story first published: Tuesday, October 6, 2020, 16:40 [IST]
Other articles published on Oct 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+