ಐಪಿಎಲ್ 2020: ಬೆಂಗಳೂರು vs ರಾಜಸ್ಥಾನ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ಐಪಿಎಲ್‌ನ 33ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಪಂದ್ಯದಲ್ಲಿ ಆರ್‌ಸಿಬಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋಲು ಕಂಡಿತ್ತು.ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳುವ ಉತ್ಸಾಹದಲ್ಲಿ ಆರ್‌ಸಿಬಿ ಇದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳು ಇದ್ದರೂ ಸರ್ವಾಂಗೀಣ ಪ್ರದರ್ಶನ ಬಾರದಿರುವುದು ತಂಡಕ್ಕೆ ಹಿನ್ನೆಡೆಯಾಗಿದೆ.
ಇಂದಿನ ಪಂದ್ಯದಲ್ಲಿ ಆರ್‌ಸಿಬಿಯಲ್ಲಿ ಎರಡು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಿರಾಜ್ ಹಾಗೂ ಶಿವಮ್ ದುಬೆ ಇಂದಿನ ಪಂದ್ಯದಿಂದ ಹೊರಗುಳಿದಿದ್ದು ಗುರ್‌ಕೀರತ್ ಸಿಂಗ್ ಮನ್ ಹಾಗೂ ಶಹ್ಬಾಜ್ ಅಹ್ಮದ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶಹ್ಬಾಜ್ ಅಹ್ಮದ್ ಮೊದಲ ಆರಿಗೆ ಆರ್‌ಸಿಬಿ ಪರವಾಗಿ ಕಣಕ್ಕಿಳಿಯುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಆರೊನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಶಹಬಾಜ್ ಅಹ್ಮದ್, ಇಸುರು ಉದಾನಾ, ನವದೀಪ್ ಸೈನಿ, ಯುಜುವೇಂದ್ರ ಚಾಹಲ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications