
ದುಬೈ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ ಕನಿಷ್ಠ 1 ವಾರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ದೂರ ಉಳಿಯಲಿದ್ದಾರೆ ಎಂದು ತಂಡದ ನಾಯಕ ಶ್ರೇಯಸ್ ಐಯ್ಯರ್ ಹೇಳಿದ್ದಾರೆ. ಗಾಯಕ್ಕೀಡಾಗಿರುವ ಪಂತ್‌ಗೆ ಕನಿಷ್ಠ 1 ವಾರ ವಿಶ್ರಾಂತಿ ಬೇಕಿದೆ ಎಂದು ಅಯ್ಯರ್ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಶಾರ್ಜಾ ಸ್ಟೇಡಿಯಂನಲ್ಲಿ ನಡೆದಿದ್ದ ಐಪಿಎಲ್ 23ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಆಡಿದ್ದವು. ಈ ವೇಳೆ ಪಂತ್ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಭಾನುವಾರ ನಡೆದಿದ್ದ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ಪಂತ್ ಮೈದಾನಕ್ಕಿಳಿದಿರಲಿಲ್ಲ
ಶುಕ್ರವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ 46 ರನ್‌ಗಳಿಂದ ಗೆದ್ದಿದ್ದರೆ, ಭಾನುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು 5 ವಿಕೆಟ್‌ಗಳಿಂದ ಸೋತು ಅಂಕಪಟ್ಟಿಯಲ್ಲಿ ಡೆಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿತ್ತು.
'ನಮಗೆ ರಿಷಭ್ ಪಂತ್ ಬಗ್ಗೆ ಏನೂ ಮಾಹಿತಿಯಿಲ್ಲ. ಆತನಿಗೆ ಕನಿಷ್ಠ 1 ವಾರ ವಿಶ್ರಾಂತಿ ಬೇಕೆಂದು ವೈದ್ಯರು ಹೇಳಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಮೇಲೆ ಪಂತ್ ಖಂಡಿತನಾವಿಯೂ ಬಲಿಷ್ಠರಾಗಿ ಮೈದಾನಕ್ಕಿಳಿಯಲಿದ್ದಾರೆ,' ಎಂದು ಶ್ರೇಯಸ್ ಐಯ್ಯರ್ ತಿಳಿಸಿದ್ದಾರೆ.