ಐಪಿಎಲ್: ದಾಖಲೆಗಾಗಿ ಎಂಎಸ್ ಧೋನಿ ಪಟ್ಟಿ ಸೇರಿದ ರೋಹಿತ್ ಶರ್ಮಾ

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ 200ನೇ ಪಂದ್ಯವಾಡಿದ ಆಟಗಾರನಾಗಿ ರೋಹಿತ್ ಗುರುತಿಸಿಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 200ನೇ ಪಂದ್ಯಕ್ಕಾಗಿ ಮೈದಾನಕ್ಕಿಳಿದಿದ್ದರು. ಇದೇ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಹೆಸರಿನಲ್ಲಿದೆ. ಎಂಎಸ್ ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳನ್ನಾಡಿದ್ದಾರೆ.
ಐಪಿಎಲ್‌ನಲ್ಲಿ 200+ ಪಂದ್ಯದ ದಾಖಲೆ ಧೋನಿ ಮತ್ತು ರೋಹಿತ್ ಇಬ್ಬರು ಭಾರತೀಯರ ಹೆಸರಿನಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ವಿರಾಟ್ ಕೊಹ್ಲಿ ಕೂಡ 200 ಪಂದ್ಯಗಳ ಹತ್ತಿರದಲ್ಲಿದ್ದಾರೆ. ಕೊಹ್ಲಿ 192 ಪಂದ್ಯಗಳನ್ನಾಡಿದ್ದಾರೆ.
ಐಪಿಎಲ್‌ನಲ್ಲಿ 200 ಪಂದ್ಯ 194 ಇನ್ನಿಂಗ್ಸ್‌ಗಳನ್ನಾಡಿರುವ ರೋಹಿತ್ ಶರ್ಮಾ 31.1ರ ಸರಾಸರಿಯಲ್ಲಿ 5162 ರನ್ ಬಾರಿಸಿದ್ದಾರೆ. ಇದರಲ್ಲಿ 38 ಅರ್ಧ ಶತಕಗಳು ಸೇರಿವೆ. 1 ಶತಕ, 209 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications