ಐಪಿಎಲ್ 2020: ರೈನಾ ಹೆಸರಿನಲ್ಲಿರುವ 2 ದಾಖಲೆ ಮುಡಿಗೇರಿಸಿಕೊಳ್ಳಲು ರೋಹಿತ್ ಸಜ್ಜು

ಈ ಬಾರಿಯ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಈ ಬಾರಿಯ ಆವೃತ್ತಿಯಲ್ಲಿ ಭಾರೀ ಏರಿಳಿತವನ್ನ ಕಂಡಿದ್ದಾರೆ. ಎರಡು ಪಂದ್ಯಗಳಲ್ಲಿ ಅರ್ಧ ಶತಕವನ್ನು ಬಾರಿಸಿ ಮಿಂಚಿದ್ದರೂ ಉಳಿದ ಮೂರು ಪಂದ್ಯಗಳಲ್ಲಿ ಅಂತಾ ಪ್ರದರ್ಶನ ರೋಹಿತ್ ಬ್ಯಾಟ್‌ನಿಂದ ಬಂದಿಲ್ಲ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧ ಶತಕವನ್ನು ಬಾರಿಸಲು ಸಫಲರಾದರೆ ರೋಹಿತ್ ಐಪಿಎಲ್‌ನ ವಿಶೇಷ ದಾಖಲೆಯನ್ನು ಬರೆಯಲಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧ ಶತಕವನ್ನು ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಹಾಗೂ ಸುರೇಶ್ ರೈನಾ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಆದರೆ ಇಂದಿನ ಪಂದ್ಯದಲ್ಲಿ ಈ ಅರ್ಧ ಶತಕವನ್ನು ಬಾರಿಸುವಲ್ಲಿ ರೋಹಿತ್ ರೈನಾ ಅವರನ್ನು ಹಿಂದಿಕ್ಕಲಿದ್ದಾರೆ. ಸದ್ಯ ಇಬ್ಬರೂ ಆಟಗಾರರು ತಲಾ 39 ಅರ್ಧ ಶತಕವನ್ನು ಬಾರಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಒಟ್ಟಾರೆ ಅರ್ಧ ಶತಕ ದಾಖಲಿಸಿದ ಪಟ್ಟಿಯಲ್ಲೂ ರೋಹಿತ್ ಈ ಮೂಲಕ ಎರಡನೇ ಸ್ಥಾನಕ್ಕೆ ಏರಲಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಎಲ್ಲಾ ಆಟಗಾರರ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಅತಿ ಹೆಚ್ಚು ಅರ್ಧ ಶತಕವನ್ನು ದಾಖಲಿಸಿದ ಸಾಧನೆಯನ್ನು ಮಾಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಬ್ಯಾಟ್‌ನಿಂದ ಈವರೆಗೆ 45 ಅರ್ಧಶತಕಗಳು ದಾಖಲಾಗಿದೆ.
ಇನ್ನು ಇದೇ ಪಂದ್ಯದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ಹಿರಿಯ ಆಟಗಾರ ಸುರೇಶ್ ರೈನಾ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಹಿಂದಿಕ್ಕಲಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಕಣಕ್ಕಿಳಿದಿರುವ ಆಟಗಾರರ ಪಟ್ಟಿಯಲ್ಲಿ ಸುರೇಶ್ ರೈನಾ ಹಾಗೂ ರೋಹಿತ್ ಶರ್ಮಾ ಸಮಬಲವನ್ನು ಸಾಧಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಕಣಕ್ಕಿಳಿದಿರುವ ಆಟಗಾರರ ಪಟ್ಟಿಯಲ್ಲಿ ಎರಡನೇ ಆಟಗಾರ ಎಂಬ ಖ್ಯಾತಿಗೆ ಒಳಗಾಗಲಿದ್ದಾರೆ.
ಕಳೆದ ಕೆಲವೇ ಪಂದ್ಯಗಳ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಸುರೇಶ್ ರೈನಾ ಹೆಸರಿನಲ್ಲಿದ್ದ ಈ ದಾಖಲೆಯನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದರು. ಈಗ ರೋಹಿತ್ ಶರ್ಮಾ ರೈನಾ ದಾಖಲೆಯನ್ನು ಹಿಂದಿಕ್ಕುವ ಸಂದರ್ಭ ಬಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications