ಐಪಿಎಲ್ 2020: ಸಿಕ್ಸ್‌ನಲ್ಲಿ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ದಾಖಲೆ

ದುಬೈ: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಕ್ಸ್‌ಗಾಗಿ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ಪರ ಅತ್ಯಧಿಕ ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಆಗಿ ಶರ್ಮಾ ಗುರುತಿಸಿಕೊಂಡಿದ್ದಾರೆ. ಎಂಐ ಪರ ರೋಹಿತ್ 150 ಸಿಕ್ಸರ್‌ಗಳನ್ನು ಬಾರಿಸಿದಂತಾಗಿದೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರೋಹಿತ್ ಈ ಅಪೂರ್ವ ದಾಖಲೆ ನಿರ್ಮಿಸಿದ್ದಾರೆ.
ಮುಂಬೈ ಇಂಡಿಯನ್ಸ್ ಪರ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್ ಕೀರನ್ ಪೊಲಾರ್ಡ್ ಹೆಸರಿನಲ್ಲಿದೆ. ಐಪಿಎಲ್‌ನಲ್ಲಿ ಪೊಲಾರ್ಡ್ ಒಟ್ಟಾರೆ 151 ಪಂದ್ಯಗಳಲ್ಲಿ 182 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ರೋಚಕ ಹಣಾಹಣಿಯ ಚಿತ್ರಣ ಇಲ್ಲಿದೆ

ಬಾರಿಸಿದ್ದು ಒಂದೇ ಸಿಕ್ಸರ್
ಸೋಮವಾರ (ಸೆಪ್ಟೆಂಬರ್ 8) ನಡೆದ ಐಪಿಎಲ್ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರೋಹಿತ್ 8 ಎಸೆತಗಳಿಗೆ 1 ಸಿಕ್ಸ್ ಕೂಡ ಸೇರಿ 8 ರನ್ ಬಾರಿಸಿ ಔಟಾದರು. ಇದರೊಂದಿಗೆ ರೋಹಿತ್ ಹೆಸರಿನಲ್ಲಿ ಮೈಲಿಗಲ್ಲು ಸ್ಥಾಪಿಸಲ್ಪಟ್ಟಿದೆ.

ಗೇಲ್, ಡಿ ವಿಲಿಯರ್ಸ್
ಐಪಿಎಲ್‌ನಲ್ಲಿ 200+ ಸಿಕ್ಸರ್‌ಗಳನ್ನು ಬಾರಿಸಿದ 4ನೇ ಬ್ಯಾಟ್ಸ್‌ಮನ್ ಆಗಿಯೂ ರೋಹಿತ್ ಗುರುತಿಸಿಕೊಂಡಿದ್ದಾರೆ. ರೋಹಿತ್ ಬಿಟ್ಟರೆ ಕ್ರಿಸ್ ಗೇಲ್, ಎಬಿ ಡಿ ವಿಲಿಯರ್ಸ್ ಮತ್ತು ಎಂಎಸ್ ಧೋನಿ ಈ ಪಟ್ಟಿಯಲ್ಲಿದ್ದಾರೆ.

ದೇವದತ್, ಫಿಂಚ್, ಎಬಿಡಿ ಉತ್ತಮ ಆಟ
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೇವದತ್ ಪಡಿಕ್ಕಲ್ 54 (40 ಎಸೆತ), ಆ್ಯರನ್ ಫಿಂಚ್ 52 (35 ಎಸೆತ), ಎಬಿ ಡಿವಿಲಿಯರ್ಸ್ 55 (24 ಎಸೆತ), ಶಿವಂ ದೂಬೆ 27 ರನ್ ಕೊಡುಗೆಯೊಂದಿಗೆ 20 ಓವರ್‌ಗೆ 3 ವಿಕೆಟ್ ಕಳೆದು 201 ರನ್ ಗಳಿಸಿತು.

ಸೂಪರ್ ಓವರ್‌ನಲ್ಲಿ ಆರ್‌ಸಿಬಿಗೆ ಜಯ
ಗುರಿ ಬೆನ್ನಟ್ಟಿದ ಮುಂಬೈನಿಂದ ರೋಹಿತ್ ಶರ್ಮಾ 8, ಹಾರ್ದಿಕ್ ಪಾಂಡ್ಯ 15, ಇಶಾನ್ ಕಿಶನ್ 99, ಕೀರನ್ ಪೊಲಾರ್ಡ್ 60 ರನ್ ಸೇರಿಸಿದರು. ಮುಂಬೈ ತಂಡ 20 ಓವರ್‌ಗೆ 5 ವಿಕೆಟ್ ನಷ್ಟದಲ್ಲಿ 201 ರನ್ ಗಳಿಸಿತು. ಸೂಪರ್ ಓವರ್‌ನಲ್ಲಿ ಮುಂಬೈ 7 ರನ್ ಗಳಿಸಿದರೆ, ಆರ್‌ಸಿಬಿ 8 ರನ್ ಬಾರಿಸಿ ಪಂದ್ಯ ಗೆದ್ದಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications