ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು!

ಬೆಂಗಳೂರು: 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಜಯ ದಾಖಲಿಸಿದೆ. ಸನ್ ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ ಗೆಲುವು ದಾಖಲಿಸುವುದರೊಂದಿಗೆ ಆರ್‌ಸಿಬಿ ತಂಡ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಸೋಮವಾರ (ಸೆಪ್ಟೆಂಬರ್ 21) ನಡೆದ ಐಪಿಎಲ್ 3ನೇ ಪಂದ್ಯದಲ್ಲಿ ಆರ್‌ಸಿಬಿ ತಂಡ ಎಸ್‌ಆರ್‌ಎಚ್ ವಿರುದ್ಧ 10 ರನ್‌ಗಳ ರೋಚಕ ಜಯ ಗಳಿಸಿತ್ತು.
ಕನ್ನಡಿಗ ದೇವದತ್ ಪಡಿಕ್ಕಲ್ 56, ಆ್ಯನ್ ಫಿಂಚ್ 29, ಎಬಿ ಡಿ ವಿಲಿಯರ್ಸ್ 51 ರನ್ ಮತ್ತು ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅದ್ಭುತ ಬೌಲಿಂಗ್ (3 ವಿಕೆಟ್) ನೊಂದಿಗೆ ಬೆಂಗಳೂರು ಆಡಿದ ಮೊದಲ ಪಂದ್ಯದಲ್ಲೇ ಶುಭಾರಂಭ ಕಂಡಿತ್ತು.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟ
ಐಪಿಎಲ್ 3ನೇ ಪಂದ್ಯದ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಆರ್‌ಸಿಬಿ ಅಗ್ರ ಸ್ಥಾನಕ್ಕೇರಿದೆ. ಪಾಯಿಂಟ್ಸ್ ಟೇಬಲ್‌ನಲ್ಲಿ ತಂಡಗಳ ಸ್ಥಾನ-ಮಾನಗಳ ಮಾಹಿತಿ ಇಲ್ಲಿದೆ.

ಅಗ್ರಸ್ಥಾನಕ್ಕೇರಲು ರನ್‌ರೇಟ್ ಕಾರಣ
ಸೋಮವಾರ ದಿನದಾಂತ್ಯಕ್ಕೆ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆಲುವು ದಾಖಲಿಸಿದ್ದವು. ಆದರೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಕಾರಣ ರನ್‌ರೇಟ್. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವು ಆರ್‌ಸಿಬಿಯನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ತಂದು ನಿಲ್ಲಿಸಿದೆ.

+0.500 ನೆಟ್ ರನ್ ರೇಟ್
ಸದ್ಯ ಐಪಿಎಲ್ ಅಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿರುವ ಆರ್‌ಸಿಬಿ ಆಡಿರುವ 1 ಪಂದ್ಯದಲ್ಲಿ ಗೆದ್ದು 2 ಅಂಕಗಳನ್ನು ಕಲೆ ಹಾಕಿದೆ. +0.500 ನೆಟ್ ರನ್‌ರೇಟ್ ಹೊಂದಿದೆ. ದ್ವಿತೀಯ ಸ್ಥಾನದಲ್ಲಿರುವ ಸಿಎಸ್‌ಕೆ 2 ಅಂಕಗಳೊಂದಿಗೆ +0.486 ರನ್ ರೇಟ್ ಗಳಿಸಿದೆ. ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ 2 ಅಂಕ ಕಲೆ ಹಾಕಿದೆ.

ಕೊನೇ ಸ್ಥಾನದಲ್ಲಿ ಹೈದರಾಬಾದ್
ಸದ್ಯ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್, 5ನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, 6 ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್, 7ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಮತ್ತು 8ನೇ ಸ್ಥಾನದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇವೆ.

ಆರ್‌ಸಿಬಿ ಕೆಳಗಿಳಿಯುವ ಸಾಧ್ಯತೆ
ಐಪಿಎಲ್ ಪಾಯಿಂಟ್ಸ್ ಟೇಬಲ್‌ನಲ್ಲಿ ಆರ್‌ಸಿಬಿ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೆಳಗಿಳಿಸುವ ಸಾಧ್ಯತೆಯಿದೆ. ಈಗಾಗಲೇ ಒಂದು ಪಂದ್ಯದಲ್ಲಿ ಗೆದ್ದು ದ್ವಿತೀಯ ಸ್ಥಾನದಲ್ಲಿರುವ ಸಿಎಸ್‌ಕೆ ಮಂಗಳವಾರದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ ಗೆದ್ದರೆ ಅಂಕಪಟ್ಟಿಯಲ್ಲಿ ಸಿಎಸ್‌ಕೆ ಮೊದಲ ಸ್ಥಾನಕ್ಕೇರಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications