Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಆರ್‌ಸಿಬಿ vs ಎಸ್‌ಆರ್‌ಹೆಚ್: ಸಂಭಾವ್ಯ ತಂಡಗಳು ಹಾಗೂ ಮಾಹಿತಿ

IPL 2020: Royal Challengers Bangalore Vs Sunrisers Hyderabad: Best possible XI

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಎರಡೂ ತಂಡಗಳು ಅದ್ಭುತ ಆಟಗಾರರನ್ನು ಹೊಂದಿರುವುದು ಅಭಿಮಾನಿಗಳು ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸುತ್ತಿದ್ದಾರೆ.

ಆರ್‌ಸಿಬಿ ತಂಡದ ಆರಂಭಿಕನಾಗಿ ಆರೋನ್ ಫಿಂಚ್ ಕಣಕ್ಕಿಳಿಯಲಿದ್ದಾರೆ. ಆದರೆ ಇನ್ನೋರ್ವ ಆರಂಭಿಕ ಆಟಗಾರನ ಸ್ಥಾನಕ್ಕೆ ಯುವ ಆಟಗಾರ ದೇವದತ್ ಪಡಿಕ್ಕಲ್ ಅವಕಾಶ ಗಿಟ್ಟಿಸಿಕೊಳ್ಳುತ್ತಾರೋ ಇಲ್ಲ ಪಾರ್ಥೀವ್ ಪಟೇಲ್ ಆಡಲಿದ್ದಾರ ಕಾದು ನೋಡಬೇಕಿದೆ. ಆಲ್‌ರೌಂಡರ್ ಕ್ರಿಸ್ ಮೋರಿಸ್ ವೇಗಿಗಳಾದ ಉಮೇಶ್ ಯಾದವ್ ಹಾಗೂ ನವ್‌ದೀಪ್ ಸೈನಿಗೆ ಬೆಂಬಲವಾಗಿರಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಯುಜುವೇಂದ್ರ ಚಾಹಲ್, ಮೊಯಿನ್ ಅಲಿ ಹಾಗೂ ವಾಶಿಂಗ್ಟನ್ ಸುಂದರ್ ಅವರನ್ನು ಹೊಂದಿದ್ದಾರೆ.

ಇನ್ನು ಸನ್ ರೈಸರ್ಸ್ ಹೈದರಾವಾದ್ ಪರವಾಗಿ ಕಳೆದ ಬಾರಿಯಂತೆಯೇ ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಜಾನಿ ಬೇರ್‌ಸ್ಟೋವ್ ಕಣಕ್ಕಿಳಿಯಲಿದ್ದಾರೆ. ಹಿಂದಿನ ಆವೃತ್ತಿಯಲ್ಲಿ ಭರ್ಜರಿ ಆಟ ಈ ಇಬ್ಬರು ಆಟಗಾರರಿಂದ ಬಂದಿತ್ತು. ಮನೀಶ್ ಪಾಂಡೆ ಮಂದ್ಯಮ ಕ್ರಮಾಂಕದಲ್ಲಿ ಆಧಾರವಾಲಿದ್ದಾರೆ. ಈ ಮಧ್ಯೆ ಕೇನ್ ವಿಲಿಯಮ್ಸನ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಕಷ್ಟವಾಗಲಿದೆ. ಉಳಿದಿರುವ ಎರಡು ವಿದೇಶಿ ಆಟಗಾರರ ಸ್ಥಾನಕ್ಕೆ ಅಪ್ಘಾನ್ ಸ್ಪಿನ್ನರ್‌ಗಳಾದ ರಶೀದ್ ಖಾನ್ ಹಾಗೂ ಮೊಹಮದ್ ನಬಿ ಆಡುವ ಸಾಧ್ಯತೆ ಹೆಚ್ಚಿದೆ.

ಸಂಭಾವ್ಯ ತಂಡ, ಆರ್‌ಸಿಬಿ: ಆರೋನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಶಿವಮ್ ದುಬೆ, ಮೊಯೀನ್ ಅಲಿ, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್, ಉಮೇಶ್ ಯಾದವ್.

ಸಂಭಾವ್ಯ ತಂಡ ಎಸ್‌ಆರ್‌ಹೆಚ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ವಿರಾಟ್ ಸಿಂಗ್, ವಿಜಯ್ ಶಂಕರ್, ಮೊಹಮ್ಮದ್ ನಬಿ, ರಶೀದ್ ಖಾನ್, ಅಭಿಷೇಕ್ ಶರ್ಮಾ, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.

Story first published: Tuesday, October 6, 2020, 15:55 [IST]
Other articles published on Oct 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+