ಐಪಿಎಲ್ 2020: ರಾಜಸ್ಥಾನ್ vs ಡೆಲ್ಲಿ: ಶಾರ್ಜಾದಲ್ಲೂ ಸ್ಮಿತ್ ಪಡೆಗೆ ಶಾಕ್ ಕೊಟ್ಟ ಶ್ರೇಯಸ್ ಹುಡುಗರು

ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿಯಾಗಿ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ 46 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್‌ಮನ್‌ಗಳು ಡೆಲ್ಲಿ ಬೌಲರ್‌ಗಳ ದಾಳಿಯನ್ನು ಎದುರಿಸಲು ವಿಫಲರಾದರು.
ಶಾರ್ಜಾದಲ್ಲಿ ನಡೆದ ಹಿಂದಿನ ಪಂದ್ಯಗಳಿಗೆ ಹೋಲಿಸಿದರೆ ಇಂದು ನಡೆದ ಪಂದ್ಯದಲ್ಲಿ ಬೌಲರ್‌ಗಳು ಮೇಲುಗೈಯನ್ನು ಸಾಧಿಸಿದ್ದು ವಿಶೇಷವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ 8 ವಿಕೆಟ್ ಪಡೆಯುವಲ್ಲಿ ರಾಜಸ್ಥಾನ್ ತಂಡದ ಬೌಲರ್‌ಗಳು ಯಶಸ್ವಿಯಾದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಡೆಲ್ಲಿ ಬೌಲರ್‌ಗಳು ರಾಜಸ್ಥಾನ್ ದಾಂಡಿಗರನ್ನು ಸೊಲ್ಲೆತ್ತದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.
ಶಾರ್ಜಾ ಕ್ರೀಡಾಂಗಣದಲ್ಲಿ ಈ ಹಿಂದಿನ ಎರಡು ಪಂದ್ಯಗಳನ್ನು ಭರ್ಜರಿಯಾಗಿ ಗೆದ್ದ ಆತ್ಮವಿಶ್ವಾಸದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಇಂದಿನ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದಕ್ಕೆ ಪೂರಕವಾಗಿ ರಾಜಸ್ಥಾನ್ ಬೌಲರ್‌ಗಳು ಉತ್ತಮ ಬೌಲಿಂಗ್ ಪ್ರದರ್ಶನವನ್ನೂ ಮಾಡಿದ್ದರು. ಜೋಫ್ರಾ ಆರ್ಚರ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ ಅದ್ಭುತ ದಾಳಿಯನ್ನು ಸಂಘಟಿಸಿದರು. ಆದರೆ ಹೇಟ್ಮೆರ್, ಸ್ಟೋಯ್ನಿಸ್ ಜೋಡಿ ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಡೆಲ್ಲಿ 184 ರನ್‌ಗಳನ್ನು ದಾಖಲಿಸುವಲ್ಲಿ ಯಶಸ್ವಿಯಾಯಿತು.
ಇದನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳಲು ಆರಂಭಿಸಿತು. ಡೆಲ್ಲಿ ಬೌಲಿಂಗ್ ಪಡೆಯ ಬಿಗುದಾಳಿಗೆ ರಾಜಸ್ಥಾನ್ ದಾಂಡಿಗರು ಸೂಕ್ತ ಉತ್ತರ ನೀಡಲು ವಿಫಲರಾದರು. ಶಾರ್ಜಾದಲ್ಲಿ ರಾಜಸ್ಥಾನ್ ರನ್ ಹೊಳೆಯೇ ಹರಿಸಲಿದೆ ಎಂದುಕೊಂಡಿದ್ದ ಅಭಿಮಾನಿಗಳಿಗೆ ಅದಕ್ಕೆ ವ್ಯತಿರಿಕ್ತವಾದ ಪ್ರದರ್ಶನ ನೀಡಿ ಆಘಾತ ನೀಡಿತು. ಅಂತಿಮವಾಗಿ 138 ರನ್‌ಗ:ಇಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು.
ಡೆಲ್ಲಿ ತಂಡದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನವನ್ನು ನೀಡಿತು. ಕಣಕ್ಕಿಳಿದ ಪ್ರತಿ ಬೌಲರ್ ಕೂಡ ಕನಿಷ್ಠ ಒಂದು ವಿಕೆಟ್ ಪಡೆದಿರುವುದು ವಿಶೇಷ. ಕಗಿಸೋ ರಬಡ ಮೂರು ವಿಕೆಟ್ ಪಡೆದರೆ, ಅಶ್ವಿನ್ ಹಾಗೂ ಸ್ಟೋಯ್ನಿಸ್ ತಲಾ ಎರಡು ವಿಕೆಟ್ ಪಡೆದರು. ಉಳಿದಂತೆ ನಾಟ್ಜೆ, ಹರ್ಷಲ್ ಪಟೇಲ್ ಹಾಗೂ ಅಕ್ಸರ್ ಪಟೇಲ್ ತಲಾ ಒಂದು ವಿಕೆಟ್ ಖಾತೆಗೆ ಸೇರಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications