ಐಪಿಎಲ್ 2020: ರಾಜಸ್ಥಾನ್ vs ಡೆಲ್ಲಿ, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

ಐಪಿಎಲ್‌ನ 13ನೇ ಆವೃತ್ತಿಯ 23ನೇ ಪಂದ್ಯ ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಬೃಹತ್ ಮೊತ್ತವನ್ನು ಗಳಿಸಿ ತಂಡದ ಗೆಲುವಿಗಾಗಿ ಪ್ರಯತ್ನಿಸಲಿದೆ.
ಮೊದಲ ಎರಡು ಪಂದ್ಯಗಳನ್ನು ಗೆದ್ದ ಬಳಿಕ ಮತ್ತೆ ಆ ಪ್ರದರ್ಶನವನ್ನು ಮರುಕಳಿಸಲು ರಾಜಸ್ಥಾನ್ ರಾಯಲ್ಸ್‌ಗೆ ಸಾಧ್ಯವಾಗಿಲ್ಲ. ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡಿರುವ ಆರ್‌ಆರ್ ಇಂದಿನ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ನಡೆಸಲಿದೆ. ಮತ್ತೊಂದು ಕಡೆ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ.
ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಎರಡು ಬದಲಾವಣೆಗಳು ಆಗಿದೆ. ಅಂಕಿತ್ ರಜಪೂತ್ ಹಾಗೂ ಟಾಮ್ ಕರ್ರನ್ ತಂಡದಿಂದ ಹೊರಗುಳಿದಿದ್ದು ಆಂಡ್ರೋ ಟೈ ಹಾಗೂ ವರುಣ್ ಆರೋನ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ಡೆಲ್ಲಿ ತಂಡ ಯಾವುದೇ ಬದಲಾವಣೆಯನ್ನೂ ಮಾಡಿಕೊಳ್ಳದೆ ಕಳೆದ ಪಂದ್ಯದ ತಂಡವನ್ನೇ ಮುಂದುವರಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮಿಯರ್, ರವಿಚಂದ್ರನ್ ಅಶ್ವಿನ್, ಆಕ್ಸಾರ್ ಪಟೇಲ್, ಹರ್ಷಲ್ ಪಟೇಲ್, ಕಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ಮಹಿಪಾಲ್ ಲೋಮರ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಆಂಡ್ರ್ಯೂ ಟೈ, ಶ್ರೇಯಾಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ವರುಣ್ ಆರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications