Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ರಾಜಸ್ಥಾನ್ ರಾಯಲ್ಸ್‌ಗೆ ಕೊಲ್ಕತಾ ನೈಟ್ ರೈಡರ್ಸ್ ಸವಾಲು

Ipl 2020, Rr Vs Kkr: Preview, Probable Xi

ಐಪಿಎಲ್ ಅಂಗಳದಲ್ಲಿ ಇಂದು ಮತ್ತೊಂದು ಕಾಳಗ ನಡೆಯಲಿದ್ದು ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಆಡಿರುವ 2 ಪಂದ್ಯಗಳಲ್ಲಿ ಸತತ 2 ಗೆಲುವುಗಳನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ಇಂದಿನ ಪಂದ್ಯದಲ್ಲೂ ಗೆದ್ದು ಬೀಗುವ ವಿಶ್ವಾಸದಲ್ಲಿದೆ. ರಾಜಸ್ಥಾನ್ ರಾಯಲ್ಸ್ ಈವರೆಗಿನ ಎರಡು ಪಂದ್ಯಗಳನ್ನು ಶಾರ್ಜಾದಲ್ಲಿ ಆಡಿತ್ತು. ಇಂದಿನ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳು ಉತ್ತಮ ಲಯದಲ್ಲಿರುವುದು ನಾಯಕನನ್ನು ನಿರಾಳನನ್ನಾಗಿಸಿದೆ. ಸ್ವತ: ನಾಯಕ ಸ್ಮಿತ್ ಕೂಡ ಎರಡು ಪಂದ್ಯಗಳಲ್ಲೂ ಉತ್ತಮ ಪ್ರದರ್ಶವನ್ನು ನೀಡಿದ್ದಾರೆ. ಸಂಜು ಸ್ಯಾಮ್ಸನ್ ಸ್ಪೋಟಕ ಪ್ರದರ್ಶನ ಇಂದಿನ ಪಂದ್ಯದಲ್ಲೂ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಹಾಗೂ ಇನ್ನೊಂದು ಪಂದ್ಯದಲ್ಲಿ ಸೋಲು ಕಂಡಿದೆ. ಸದ್ಯ ನೆಟ್‌ರನ್‌ರೇಟ್ ಆಧಾರದಲ್ಲಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಇಂದಿನ ಪಂದ್ಯದಲ್ಲಿ ಗೆದ್ದರೆ ಟಾಪ್ 4 ಗೆ ಸೇರಿಕೊಳ್ಳುವ ಅವಕಾಶ ಕೆಕೆಆರ್‌ಗೆ ಇದೆ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಜೋಸ್ ಬಟ್ಲರ್, ಸ್ಟೀವ್ ಸ್ಮಿತ್, ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಟಾಮ್ ಕರ್ರನ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಜೋಫ್ರಾ ಆರ್ಚರ್, ಅಂಕಿತ್ ರಾಜ್‌ಪೂತ್

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಶುಬ್ಮನ್ ಗಿಲ್, ಸುನಿಲ್ ನರೈನ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್, ಇಯಾನ್ ಮಾರ್ಗಾನ್, ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ವರುಣ್ ಚಕ್ರವರ್ತಿ, ಶಿವಂ ಮಾವಿ, ಕುಲದೀಪ್ ಯಾದವ್

Story first published: Tuesday, October 6, 2020, 15:00 [IST]
Other articles published on Oct 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+