ಐಪಿಎಲ್ 2020: ಪಂಜಾಬ್ vs ರಾಜಸ್ಥಾನ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

ಐಪಿಎಲ್ ಅಂಗಳದಲ್ಲಿ ಐವತ್ತನೇ ಕದನಕ್ಕೆ ಚಾಲನೆ ದೊರೆತಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ಹಣಾಹಣಿ ನಡೆಯುತ್ತಿದೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ಸತತ ಗೆಲುವುಗಳನ್ನು ಸಾಧಿಸಿಕೊಂಡು ಸಾಕಷ್ಟು ವಿಶ್ವಾಸದಲ್ಲಿದೆ. ಇಂದಿನ ಪಂದ್ಯದಲ್ಲೂ ಈ ಆತ್ಮವಿಶ್ವಾದೊಂದಿಗೆ ಕಣಕ್ಕಿಳಿಯುತ್ತಿದೆ. ಜೊತೆಗೆ ಟಾಪ್ ನಾಲ್ಕರಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಪಂಜಾಬ್ ಇಲ್ಲಿ ಸ್ಥಾನವನ್ನು ಗಟ್ಟಿಮಾಡಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ಮತ್ತೊಂದೆಡೆ ಆರ್‌ಆರ್ ತಂಡ ಟೂರ್ನಿಯಲ್ಲಿ ಮುಂದಿನ ಹಂತಕ್ಕೇರಬೇಕಾದರೆ ಇಂದಿನ ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಿದೆ. ಮತ್ತೆ ಗೆಲುವಿನ ಲಯಕ್ಕೆ ಆರ್‌ಆರ್ ಮರಳಿರುವುದು ತಂಡದ ಉತ್ಸಾಹ ಮೂಡಿಸಿದೆ.
ಇಂದಿನ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಒಂದು ಬದಲಾವನೆಯನ್ನು ಮಾಡಿಕೊಳ್ಳಲಾಗಿದೆ. ಅಂಕಿತ್ ರಜಪೂತ್ ಆಡುವ ಬಳಗದಿಂದ ಹೊರಬಿದ್ದಿದ್ದು ವರುಣ್ ಅರೋನ್ ಆಡುವ ಬಳಗದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಪಂಜಾಬ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಗೆಲುವಿನ ತಂಡವನ್ನೇ ಉಳಿಸಿಕೊಂಡಿದ್ದಾರೆ ನಾಯಕ ಕೆಎಲ್ ರಾಹುಲ್.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ವರುಣ್ ಆರೋನ್, ಕಾರ್ತಿಕ್ ತ್ಯಾಗಿ
ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಯಿಂಗ್ 11: ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಮಂದೀಪ್ ಸಿಂಗ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications