For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ರಾಜಸ್ಥಾನ್ vs ಹೈದರಾಬಾದ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

IPL 2020: RR vs SRH Match 40 Toss Report and Playing 11

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇ ಆಫ್ ಹಂತಕ್ಕೇರಲು ಇಂದಿನ ಪಂದ್ಯದಲ್ಲಿ ಕಠಿಣ ಹೋರಾಟವನ್ನು ನಡೆಸಲಿದೆ. ಇಂದಿನ ಪಂದ್ಯದ ಗೆಲುವು ಎರಡೂ ತಂಡಗಳಗೂ ಅತಿ ಮುಖ್ಯವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ 6ನೇ ಸ್ಥಾನದಲ್ಲಿದ್ದರೆ ಸನ್‌ರೈಸರ್ಸ್ ಹೈದರಾಬಾದ್ 7ನೇ ಸ್ಥಾನದಲ್ಲಿದೆ. ಮುಂದಿನ ಹಂತಕ್ಕೇರಲು ಗೆಲುವಿನ ಜೊತೆಗೆ ಈ ಎರಡೂ ತಂಡಗಳು ರನ್‌ರೇಟ್‌ನಲ್ಲೂ ಪ್ರಗತಿಯನ್ನು ಕಾಣಬೇಕಿದೆ. ಹಾಗಾಗಿ ಎರಡು ತಡಗಳು ಕೂಡ ಜಿದ್ದಾಜಿದ್ದಿನ ಹೋರಾಟವನ್ನು ನಡೆಸುವ ನಿರೀಕ್ಷೆಯಿದೆ.

ಈ ನಿರ್ಣಾಯಕ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ಯಾವುದೇ ಬದಲಾವಣೆಯನ್ನು ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಆದರೆ ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಜೇಸನ್ ಹೋಲ್ಡರ್ ಈ ಪಂದ್ಯದ ಮೂಲಕ ಈ ಬಾರಿಯ ಆವೃತ್ತಿಯಲ್ಲಿ ಕಣಕ್ಕಿಳಿಯುತ್ತಿದ್ದರೆ ನದೀಮ್ ಕೂಡ ತಂಡಲ್ಲಿ ಮತ್ತೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ಬೆನ್ ಸ್ಟೋಕ್ಸ್, ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತೇವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಪ್ರಿಯಮ್ ಗರ್ಗ್, ಮನೀಶ್ ಪಾಂಡೆ, ವಿಜಯ್ ಶಂಕರ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್

Story first published: Thursday, October 22, 2020, 19:23 [IST]
Other articles published on Oct 22, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+