Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಫೈನಲ್ ಒತ್ತಡ ಕಡಿಮೆ ಮಾಡಲು ವಿಚಿತ್ರ ಡ್ಯಾನ್ಸ್‌ನ ಮೊರೆ ಹೋದ ಡೆಲ್ಲಿ ಬಾಯ್ಸ್

IPL 2020: Shreyas Iyer, Marcus Stoinis and Shikhar Dhawan pull off hilarious dance

ಡೆಲ್ಲಿ ಕ್ಯಾಪಿಟಲ್ಸ್13 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಡೆಲ್ಲಿಗೆ ಎದುರಾಳಿಯಾಗಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ಇದೇ ಮುಂಬೈ ವಿರುದ್ಧ ಸೋಲು ಕಂಡಿದ್ದ ಮತ್ತೊಮ್ಮೆ ಫೈನಲ್‌ನಲ್ಲಿ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಮಂಗಳವಾರ ಈ ಹಣಾಹಣಿ ನಡೆಯಲಿದೆ.

ಈ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರು ರಿಲ್ಯಾಕ್ಸ್ ಆಗಿದ್ದಾರೆ. ಅದರಲ್ಲೂ ನಾಯಕ ಶ್ರೇಯಸ್ ಐಯ್ಯರ್, ಶಿಖರ್ ಧವನ್ ಹಾಗೂ ಮಾರ್ಕಸ್ ಸ್ಟೋಯ್ಸಿನ್ ತಮ್ಮದೇ ಆದ ರೀತಿಯಲ್ಲಿ ಪಂದ್ಯಕ್ಕೂ ಮುನ್ನ ಒತ್ತಡವನ್ನು ಕಡಿಮೆ ಮಾಡಿಕೊಂಡಿದ್ದಾರೆ.

ಹೌದು. ಯುವ ಆಟಗಾರರೇ ಹೆಚ್ಚಾಗಿರುವ ಡೆಲ್ಲಿ ತಂಡದಲ್ಲಿ ಮನರಂಜನೆಗೇನು ಕಡಿಮೆಯಿಲ್ಲ. ಹಾಗಾಗಿಯೇ ವಿಚಿತ್ರ ನೃತ್ಯವನ್ನು ಮಾಡುವ ಮೂಲಕ ತಮ್ಮ ಒತ್ತಡವನ್ನು ಕಡಿಮೆ ಮಾಡಿಕೊಂಡಿದ್ದಾರೆ ಡೆಲ್ಲಿ ಆಟಗಾರರು. ಈ ಮೂಲಕ ರಿಲ್ಯಾಕ್ಸ್ ಆಗಯವ ಪ್ರಯತ್ನ ಮಾಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ವಿಚಿತ್ರ ನೃತ್ಯದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶ್ರೇಯಸ್ ಐಯ್ಯರ್, ಶಿಖರ್ ಧವನ್ ಹಾಗೂ ಮಾರ್ಕಸ್ ಸ್ಟೋಯ್ನಿಸ್ ಈ ನೃತ್ಯದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

Story first published: Monday, November 9, 2020, 20:49 [IST]
Other articles published on Nov 9, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+