ಐಪಿಎಲ್ 2020: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಕಾದಾಟ

ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡುತ್ತಾ ಮಿಂಚುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಇಂದು ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದು ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ಎದುರಾಳಿಯಾಗಿದೆ. ಆಡಿರುವ ಎರಡು ಪಂದ್ಯಗಳಲ್ಲಿ ಸೋಲುಕಂಡಿರುವ ಹೈದರಾಬಾದ್ ಟೂರ್ನಿಯ ಮೊದಲ ಗೆಲುವಿಗಾಗಿ ಇಂದು ಹೋರಾಟವನ್ನು ನಡೆಸಲಿದೆ.
ಉತ್ತಮ ಆಟಗಾರರನ್ನು ಹೊಂದಿರುವ ಸನ್‌ರೈಸರ್ಸ್ ಹೈದರಾಬಾದ್ ಆರ್‌ಸಿಬಿ ಹಾಗೂ ಕೆಕೆಆರ್ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿ ಆಡಿ ಸೋಲು ಕಂಡಿತ್ತು. ಈ ಮೂಲಕ ಅಂಕಪಟ್ಟಿಯಲ್ಲಿ ವಾರ್ನರ್ ಪಡೆ ಕೊನೆಯ ಸ್ಥಾನದಲ್ಲಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಈವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಗೆಲುವು ಕಂಡಿದ್ದು ಈ ಮೂಲಕ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನವನ್ನು ಪಡೆದುಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ನಾಯಕ ಡೇವಿಡ್ ವಾರ್ನರ್ ಫಾರ್ಮ್ ಚಿಂತೆಗೀಡುಮಾಡಿದೆ. ಮೊದಲ ಎರಡು ಪಂದ್ಯಗಳಲ್ಲಿ ವಾಋ್ನ್ ಬ್ಯಾಟ್‌ನಿಂದ ಹೇಳಿಕೊಳ್ಳುವಂತಾ ಪ್ರದರ್ಶನ ಬಂದಿಲ್ಲ. ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ 6 ಎಸೆತಗಳಲ್ಲಿ 6 ರನ್‌ಗಳಿಸಿ ಔಟಾಗಿದ್ದ ವಾರ್ನರ್, ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 30 ಎಸೆತಗಳಲ್ಲಿ 36 ರನ್‌ಗಳಿಸಿದ್ದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ನೀರಸ ಪ್ರದರ್ಶನ ನೀಡುತ್ತಿರುವುದು ತಂಡಕ್ಕೆ ದುಬಾರಿಯಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿಮ್ರಾನ್ ಹೆಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಆಕ್ಸರ್ ಪಟೇಲ್, ಕಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ, ಅಮಿತ್ ಮಿಶ್ರಾ, ಇಶಾಂತ್ ಶರ್ಮಾ.
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್, ಜಾನಿ ಬೈರ್‌ಸ್ಟೋವ್, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್ / ಮೊಹಮ್ಮದ್ ನಬಿ, ವೃದ್ಧಿಮಾನ್ ಸಹಾ, ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್ / ಬೆಸಿಲ್ ಥಾಂಪಿ, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications