For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ಅಂಕ ಪಟ್ಟಿ: ಪಂಜಾಬ್ ಸೋಲಿಸಿ 3ನೇ ಸ್ಥಾನಕ್ಕೇರಿದ ಹೈದರಾಬಾದ್

IPL 2020: Statistics: Highest Run Scorers, Wicket taker, Points Table on Oct 09

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 09ರಂದು ಕಿಂಗ್ಸ್ ಎಲೆವನ್ ಪಂಜಾಬ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ನಂತರ ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..

ಅಂಕಪಟ್ಟಿಯಲ್ಲಿ ಚಾಂಪಿಯನ್ ತಂಡ ಮುಂಬೈ ಇಂಡಿಯನ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದರೆ. ಕೊಹ್ಲಿ ಪಡೆ ಮೂರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ತಂಡವನ್ನು ಸೋಲಿಸಿದ ಬಳಿಕ ಹೈದರಾಬಾದ್ ಮೂರನೇ ಸ್ಥಾನಕ್ಕೆ ಜಿಗಿದಿದೆ. ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

IPL 2020: Statistics: Highest Run Scorers, Wicket taker, Points Table on Oct 09


ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ

ಅಂಕಪಟ್ಟಿ ಅಕ್ಟೋಬರ್ 09ರಂತೆ:
ಪಂಜಾಬ್ ವಿರುದ್ಧ ಹೈದರಾಬಾದ್ ಗೆಲುವು ಸಾಧಿಸಿದ ಬಳಿಕ ವಾರ್ನರ್ ಪಡೆ ಮೂರನೇ ಸ್ಥಾನಕ್ಕೇರಿದೆ. ಪಂಜಾಬ್ 4 ಸೋಲಿನೊಂದಿಗೆ ಕೊನೆ ಸ್ಥಾನದಲ್ಲಿದ್ದರೆ, 6 ಪಂದ್ಯಗಳಿಂದ 4 ಗೆಲುವು ಸಾಧಿಸಿರುವ ಮುಂಬೈ ರನ್ ಸರಾಸರಿ(+1.488)ಯೊಂದಿಗೆ ಅಗ್ರಸ್ಥಾನದಲ್ಲಿದೆ. ದೆಹಲಿ 4 ಜಯ ದಾಖಲಿಸಿದ್ದರೂ ಮುಂಬೈಗಿಂತ ಉತ್ತಮ ರನ್ ಸರಾಸರಿ(+1.060) ಹೊಂದಿಲ್ಲದ ಕಾರಣ 2ನೇ ಸ್ಥಾನದಲ್ಲಿದೆ. ಮೂರನೇ ಸ್ಥಾನಕ್ಕೇರುವ ಹೈದರಾಬಾದ್(0.232) ಹಾಗೂ ಕೋಲ್ಕತ್ತಾ (+0.002) ಹಾಗೂ ಬೆಂಗಳೂರು (-1.355) ಮೊದಲ ಐದು ಸ್ಥಾನಗಳಲ್ಲಿವೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ (313ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ (12 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ

Story first published: Friday, October 9, 2020, 12:37 [IST]
Other articles published on Oct 9, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+