For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಎಸ್‌ಆರ್‌ಹೆಚ್ vs ಸಿಎಸ್‌ಕೆ, ಹೆಡ್-ಟು-ಹೆಡ್ ಮಾಹಿತಿ

IPL 2020 Sunrisers Hyderabad vs Chennai Super Kings Head to Head Records and Players to Watch Out for

ಐಪಿಎಲ್‌ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸನ್‌ರೈಸರ್ಸ್ ಹೈದರಾಬಾದ್ ತಡ ಎರಡನೇ ಬಾರಿಗೆ ಎದಿರಾಳಿಯಾಗಿದೆ.ಯುಎಇನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಇಳಿಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾಗ ಹೈದರಾಬಾದ್ ಚೆನ್ನೈಗೆ ಸೋಲಿನ ರುಚಿ ತೀರಿಸುವಲ್ಲಿ ಯಶಸ್ವಿಯಾಗಿತ್ತು.

ಐಪಿಎಲ್ ಇತಿಹಾಸದ್ಲಲಿ ಈವರೆಗೆ ಈ ಎರಡು ತಂಡಗಳು 13 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಚೆನ್ನೈ ಮೇಲುಗೈ ಸಾಧಿಸಿದ್ದು 9-4ರ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಈ ಬಾರಿಯ ಟೂರ್ನಿಯಲ್ಲಿ ಹೈದರಾಬಾದ್ ಗೆಲುವು ಸಾಧಿಸಿರುವುದು ತಂಡದ ಹುಮ್ಮಸ್ಸು ಹೆಚ್ಚಿಸಿದೆ.

ಅಕ್ಟೋಬರ್ 2 ರಂದು ನಡದದ ಮೊದಲ ಮುಖಾಮುಖಿಯಲ್ಲಿ ಹೈದರಾಬಾದ್ ತಂಡದ ಪ್ರಿಯಮ್ ಗಾರ್ಗ್ ಅಜೇಯ ಅರ್ಧ ಶತಕ ಹಾಗೂ ರಶೀದ್ ಖಾನ್ ನಿಯಂತ್ರಿತ ಬೌಲಿಂಗ್ ದಾಳಿಯಿಂದಾಗಿ ಚೆನ್ನೈ ತಂಡದ ವಿರುದ್ಧ ಗೆಲುವನ್ನು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 164/5 ಗಳಿಸಿತು. ಇದನ್ನು ಬೆನ್ನಟ್ಟಿದ ಸಿಎಸ್‌ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು.

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಬಾರಿ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಒಂದು ಬಾರಿ ಟ್ರೋಫಿಗೆ ಮುತ್ತಿಕ್ಕಿದೆ. ಟೂರ್ನಿಯಲ್ಲಿ ಎರಡೂ ತಂಡಗಳು 53 ಶೇಕಡಾಕ್ಕಿಂತ ಹೆಚ್ಚಿನ ಗೆಲುವಿನ ಸರಾಸರಿಯನ್ನು ಹೊಂದಿದೆ.

ಸಿಎಸ್‌ಕೆ ಕಳೆದ ಐದು ಪಂದ್ಯಗಳಲ್ಲಿ ಒಂದು ಪಮದ್ಯವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು ನಾಲ್ಕರಲ್ಲಿ ಸೋಲು ಕಂಡಿದೆ. ಎಸ್‌ಆರ್‌ಹೆಚ್ ತಂಡ 3 ಪಂದ್ಯಗಳಲ್ಲಿ ಗೆದ್ದಿದ್ದು 2 ಸೋಲುಕಂಡಿದೆ. ಅಂಕಪಟ್ಟಿಯಲ್ಲಿ ಎಸ್‌ಆರ್‌ಹೆಚ್ ಆರು ಅಂಕಗಳನ್ನು ಹೊಂದಿದ್ದು ಐದನೇ ಸ್ಥಾನದಲ್ಲಿದೆ. ಚೆನ್ನೈ ತಂಡ ನಾಲ್ಕು ಅಂಕಗಳನ್ನು ಮಾತ್ರವೇ ಹೊಂದಿದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

Story first published: Tuesday, October 13, 2020, 12:20 [IST]
Other articles published on Oct 13, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+