ರೋಹಿತ್ ಶರ್ಮಾ, ಎಂಎಸ್ ಧೋನಿ ದಾಖಲೆ ಸರಿದೂಗಿಸಲಿದ್ದಾರೆ ಕೊಹ್ಲಿ

ದುಬೈ: ಕ್ರಿಕೆಟ್ ಜಗತ್ತಿನಲ್ಲಿ ಸಾಲು ಸಾಲು ದಾಖಲೆಗಳನ್ನು ನಿರ್ಮಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಅವಕಾಶವಿದೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಶನಿವಾರ (ಅಕ್ಟೋಬರ್ 10) ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 25ನೇ ಪಂದ್ಯದಲ್ಲಿ, ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಹ್ಲಿಗೆ ದಾಖಲೆ ನಿರ್ಮಿಸಲು ಅವಕಾಶವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕರಾಗಿರುವ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲೇನಾದರೂ 7 ಸಿಕ್ಸರ್‌ಗಳನ್ನು ಬಾರಿಸಿದರೆ ಅವರ ಹೆಸರಿನಲ್ಲಿ ದಾಖಲೆ ನಿರ್ಮಾಣವಾಗಲಿದೆ. ಐಪಿಎಲ್‌ನ ಸಿಕ್ಸರ್ ದಾಖಲೆ ಪಟ್ಟಿಯಲ್ಲಿ ಕೊಹ್ಲಿ ಹೆಸರು ಗಿಟ್ಟಿಸಿಕೊಳ್ಳಲಿದ್ದಾರೆ.
ಕೊಹ್ಲಿ ಇನ್ನು ಕೇವಲ 7 ಸಿಕ್ಸರ್‌ಗಳನ್ನು ಬಾರಿಸಿದರೆ, ಐಪಿಎಲ್‌ನಲ್ಲಿ 200+ ಸಿಕ್ಸರ್ ದಾಖಲೆ ಪಟ್ಟಿಗೆ ವಿರಾಟ್ ಹೆಸರೂ ಸೇರಿಕೊಳ್ಳಲಿದೆ.

ದಾಖಲೆ ಸನಿಹದಲ್ಲಿ ಕೊಹ್ಲಿ
174 ಐಪಿಎಲ್ ಇನ್ನಿಂಗ್ಸ್‌ಗಳನ್ನು ಆಡಿರುವ ವಿರಾಟ್ ಕೊಹ್ಲಿ 37.72ರ ಸರಾಸರಿಯಲ್ಲಿ 5545 ರನ್ ಬಾರಿಸಿದ್ದಾರೆ. ಇದರಲ್ಲಿ 37 ಅರ್ಧ ಶತಕಗಳು ಸೇರಿವೆ. 489 ಫೋರ್ಸ್, 193 ಸಿಕ್ಸರ್‌ಗಳನ್ನೂ ಬಾರಿಸಿದ್ದಾರೆ. ಇನ್ನು 7 ಸಿಕ್ಸರ್ ಬಾರಿಸಿದರೆ ಐಪಿಎಲ್‌ನಲ್ಲಿ 200 ಸಿಕ್ಸರ್ ಪೂರ್ಣಗೊಳ್ಳಲಿದೆ.

ರೋಹಿತ್, ಧೋನಿ ದಾಖಲೆ
ಐಪಿಎಲ್‌ನಲ್ಲಿ 200+ ಸಿಕ್ಸರ್ ಬಾರಿಸಿದ ದಾಖಲೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಹೆಸರಿನಲ್ಲಿದೆ. ಕೊಹ್ಲಿ ಇನ್ನು 7 ಸಿಕ್ಸರ್‌ಗಳನ್ನು ಬಾರಿಸಿದರೆ, ಐಪಿಎಲ್‌ನಲ್ಲಿ 200 ಸಿಕ್ಸರ್ ಬಾರಿಸಿದ ಮೂರನೇ ಭಾರತೀಯನಾಗಿ ಗುರುತಿಸಿಕೊಳ್ಳಲಿದ್ದಾರೆ.

ಮುಂಚೂಣಿಯಲ್ಲಿ ಗೇಲ್
ಐಪಿಎಲ್‌ನಲ್ಲಿ ಅತೀ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 326 ಸಿಕ್ಸ್ ಬಾರಿಸಿದ್ದಾರೆ. ಐಪಿಎಲ್ 200+ ಸಿಕ್ಸರ್ ಒಟ್ಟಾರೆ ಪಟ್ಟಿಯಲ್ಲಿ ಕ್ರಿಸ್ ಗೇಲ್ (326), ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ (219), ಎಂಎಸ್ ಧೋನಿ (213), ರೋಹಿತ್ ಶರ್ಮಾ (208) ಇದ್ದಾರೆ.

ಟಿ20ಯಲ್ಲಿ ವಿಶೇಷ ದಾಖಲೆ
ಹಿಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದರು. ಟಿ20ಯಲ್ಲಿ 9000 ರನ್ ಬಾರಿಸಿದ ವಿಶ್ವದ 7ನೇ ಬ್ಯಾಟ್ಸ್‌ಮನ್ ಆಗಿ ಕೊಹ್ಲಿ ಗುರುತಿಸಿಕೊಂಡಿದ್ದರು. ಈ ದಾಖಲೆ ಪಟ್ಟಿಯಲ್ಲಿ ಕ್ರಿಸ್ ಗೇಲ್ (13,296 ರನ್), ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ (10,370), ಪಾಕಿಸ್ತಾನದ ಶೋಯೆಬ್ ಮಲಿಕ್ (9,926), ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ (9,922), ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (9,451), ಆ್ಯರನ್ ಫಿಂಚ್ (9,148) ಇದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications