ಐಪಿಎಲ್ 2020: ಚೆನ್ನೈ ವಿರುದ್ದ ವಿಶೇಷ ದಾಖಲೆ ಬರೆದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದಾರೆ. 52 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ ಅಜೇಯ 90 ರನ್‌ಗಳನ್ನು ದಾಖಲಿಸಿದರು. ಕೊಹ್ಲಿಯ ಈ ಪ್ರದರ್ಶನದಿಂದಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು.
ಈ ಪಂದ್ಯದಲ್ಲಿ 90 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಐಪಿಎಲ್ ಇತಿಹಾಸದಲ್ಲಿ ನಾಯಕನೊಬ್ಬ ಗಳಿಸಿದ ಅತಿ ಹೆಚ್ಚಿನ ಸ್ಕೋರ್ ಎಂಬ ದಾಖಲೆಯನ್ನು ಕೊಹ್ಲಿ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
ಈ ಬಾರಿಯ ಐಪಿಎಲ್ ಆವೃತ್ತಿಯ ಆರಂಭದಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿರಲಿಲ್ಲ. ರನ್‌ಗಳಿಸಲು ಸಾಕಷ್ಟು ಪರದಾಡಿದ್ದ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 72 ರನ್‌ಗಳಿಸುವ ಮೂಲಕ ಲಯಕ್ಕೆ ಮರಳಿದ್ದರು. ಡೆಲ್ಲಿ ವಿರುದ್ಧವೂ ಕೊಹ್ಲಿ 43 ರನ್‌ಗಳ ಕೊಡುಗೆಯನ್ನು ನೀಡಿದ್ದರಾದರೂ ಆ ಪಂದ್ಯದಲ್ಲಿ ಗೆಲುವು ಸಾಧ್ಯವಾಗಿರಲಿಲ್ಲ.
ಆರ್‌ಸಿಬಿ ಇನ್ನಿಂಗ್ಸ್‌ನ ಮೊದಲಾರ್ಧದಲ್ಲಿ ವಿರಾಟ್ ಪಡೆ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿತ್ತು. ಮೊದಲ 11 ಓವರ್‌ಗಳಲ್ಲಿ ಕೇವಲ 65 ರನ್ ಗಳಿಸಲಷ್ಟೇ ಆರ್‌ಸಿಬಿ ಶಕ್ತವಾಗಿತ್ತು. ಫಿಂಚ್, ಎಬಿಡಿವಿಲಿಯರ್ಸ್ ವಿಕೆಟ್ ಬೇಗನೆ ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಎಚ್ಚರಿಕೆಯ ಆಟದ ಮೂಲಕ ಕೊಹ್ಲಿ ವಿಕೆಟ್ ಕಳೆದುಕೊಳ್ಳದಂತೆ ನೋಡಿಕೊಂಡಿದ್ದಲ್ಲದೆ ಅಂತಿಮ ಹಂತದಲ್ಲಿ ಅಬ್ಬರಿಸುವ ಮೂಲಕ ರನ್ ವೇಗ ಹೆಚ್ಚಿಸಿ ಸವಾಲಿನ ಗುರಿಯನ್ನು ನೀಡುವಲ್ಲಿ ಯಶಸ್ವಿಯಾದರು.
ಆರ್‌ಸಿಬಿ ಅಂತಿಮ ಐದು ಓವರ್‌ಗಳಲ್ಲಿ ಭರ್ಜರಿ ಬ್ಯಾಟೀಂಗ್ ಪ್ರದರ್ಶಿಸಿತು. ಅಂತಿಮ ಐದು ಒವರ್‌ಗಳಲ್ಲಿ 74 ರನ್ ದೋಚುವಲ್ಲಿ ಆರ್‌ಸಿಬಿ ಯಶಸ್ವಿಯಾಯಿತು. ವಿರಾಟ್ ಕೊಹ್ಲಿ ಮೊದಲ 49 ರನ್‌ಗಳನ್ನು ಗಳಿಸಲು 38 ಎಸೆತಗಳನ್ನು ತೆಗೆದುಕೊಂಡಿದ್ದರೆ ಬಳಿಕ 14 ಎಸೆತಗಳಲ್ಲಿ 41 ರನ್ ಸಿಡಿಸಲು ಯಶಸ್ವಿಯಾದರು. ಈ ಮೂಲಕ ನಾಯಕನ ಆಟವನ್ನು ಪ್ರದರ್ಶಿಸುವಲ್ಲಿ ಕೊಹ್ಲಿ ಯಶಸ್ವಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications