ಕ್ರಿಸ್ ಗೇಲ್ ಯಾವಾಗ ಮರಳುತ್ತಾರೆ?: ಪಂಜಾಬ್ ನಾಯಕ ಕೆಎಲ್ ರಾಹುಲ್ ಪ್ರತಿಕ್ರಿಯೆ

ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡುತ್ತಿದೆ. ಆದರೆ ಕಿಂಗ್ಸ್ ಇಲವೆನ್ ಪಂಜಾಬ್ ತಂಡದಲ್ಲಿರುವ ಸ್ಪೋಟಕ ಆಟಗಾರ ಕ್ರೀಸ್ ಗೇಲ್ ಮಾತ್ರ ಈವರೆಗೂ ಕಣಕ್ಕೆ ಇಳಿದಿಲ್ಲ. ಇದು ಕ್ರಿಸ್ ಗೇಲ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನು ತಂದಿದೆ.
ತಂಡ ಅದ್ಭುತ ಪ್ರದರ್ಶನವನ್ನು ನೀಡಿದ್ದರೂ ಗೇಲ್ ಬಗ್ಗೆ ಅಭಿಮಾನಿಗಳು ಪ್ರಶ್ನಿಸುತ್ತಲೇ ಇದ್ದಾರೆ. ಹೀಗಾಗಿ ಈ ಬಗ್ಗೆ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಕ್ರಿಸ್ ಗೇಲ್ ಯಾವಾಗ ತಂಡದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ರಾಹುಲ್ ಸ್ಪಷ್ಟವಾಗಿ ಹೇಳದೊದ್ದರೂ ಅಭಿಮಾನಿಗಳು ನಿರಾಶರಾಗಬೇಕಿಲ್ಲ ಎಂದು ತಿಳಿಸಿದ್ದಾರೆ.

ಅದ್ಭುತ ಪ್ರದರ್ಶನ ನೀಡುತ್ತಿದೆ ಪಂಜಾಬ್
ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಈ ಬಾರಿಯ ಟೂರ್ನಿಯಲ್ಲಿ ಸರ್ವಾಂಗೀಣ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಈವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ನೆರವಾಗಿದ್ದಾರೆ. ಹೀಗಾಗಿ ಬ್ಯಾಟಿಂಗ್ ದಿಗ್ಗಜ ಕ್ರಿಸ್ ಗೇಲ್ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯದಿದ್ದರೂ ಉಳಿದ ಆಟಗಾರರು ತಮ್ಮ ಪ್ರದರ್ಶನದ ಮೂಲಕ ತಂಡಕ್ಕೆ ನೆರವಾಗಿದ್ದಾರೆ.

ಸರಿಯಾದ ಸಂದರ್ಭದಲ್ಲಿ ಗೇಲ್ ಕಣಕ್ಕೆ
ಸರಿಯಾದ ಸಂದರ್ಭದಲ್ಲಿ ಕ್ರಿಸ್‌ಗೇಲ್ ತಂಡದಲ್ಲಿ ಆಡಲು ಕಣಕ್ಕಿಳಿಯಲಿದ್ದಾರೆ. ಆ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಕಣಕ್ಕಿಳಿಯದೆ ಕುಳಿತುಕೊಳ್ಳುವುದು ಕಠಿಣ ಸಂದರ್ಭ. ಆದರೆ ಈ ಅವಕಾಶವನ್ನು ನಾವು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲು ಹೆಮ್ಮೆಯೆನಿಸುತ್ತದೆ ಎಂದು ಕೆಎಲ್ ರಾಹುಲ್ ಆರ್‌ಸಿಬಿ ವಿರುದ್ದದ ಪಂದ್ಯಕ್ಕೂ ಮುನ್ನ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮೊದಲ ಪಂದ್ಯ ಟೈ
ಟೂರ್ನಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಗೆಲ್ಲಿಸುವ ಹಂತಕ್ಕೆ ಪಂದ್ಯವನ್ನು ತೆಗೆದುಕೊಂಡು ಹೋಗಿದ್ದರು. ಆದರೆ ದುರದೃಷ್ಟವಶಾತ್ ಆ ಪಂದ್ಯದ ಟೈ ಆಗಿ ಸೂಪರ್ ಓವರ್‌ನಲ್ಲಿ ಶರಣಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕದ ನೆರವಿನಿಂದ ಕಿಂಗ್ಸ್ ತಂಡ ದೊಡ್ಡ ಅಂತರದ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications