Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಸ್ಪಿನ್ನರ್ ಯುಜುವೇಂದ್ರ ಚಾಹಲ್ ಹೊಸ ಮೈಲಿಗಲ್ಲು

IPL 2020: Yuzvendra Chahal completes 200 wickets in t20 cricket

ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೆಗ್ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳನ್ನು ಪೂರೈಸಿಕೊಂಡಿದ್ದಾರೆ. ಗುರುವಾರ (ಅಕ್ಟೋಬರ್ 15) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 31ನೇ ಪಂದ್ಯದಲ್ಲಿ ಚಾಹಲ್ ಈ ಸಾಧನೆ ತೋರಿದ್ದಾರೆ.

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಯುಜುವೇಂದ್ರ ಚಾಹಲ್ ವಿಶೇಷ ಸಾಧನೆ ತೋರಿದ್ದಾರೆ. ಪಂಜಾಬ್ ಇನ್ನಿಂಗ್ಸ್‌ನಲ್ಲಿ ಮಯಾಂಕ್ ವಿಕೆಟ್ ಪಡೆಯುವುದರೊಂದಿಗೆ ಚಾಹಲ್ ದಾಖಲೆ ಪೂರೈಸಿಕೊಂಡಿದ್ದಾರೆ.

ಆರಂಭಿಕರಾಗಿ ಬಂದಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಚಾಹಲ್ ಅವರ 7.6ನೇ ಓವರ್‌ನಲ್ಲಿ ಬೌಲ್ಡ್ ಆಗಿ 45 ರನ್‌ಗೆ ನಿರ್ಗಮಿಸಿದರು. ಈ ವಿಕೆಟ್ ಸಿಗುತ್ತಲೇ ಚಾಹಲ್ ಹೆಸರಿನಲ್ಲಿ ದಾಖಲೆ ನಿರ್ಮಾಣವಾಗಿದೆ. ಈ ಬಾರಿಯ ಐಪಿಎಲ್‌ನಲ್ಲಿ ಚಾಹಲ್ 8 ಪಂದ್ಯಗಳಲ್ಲಿ 11 ವಿಕೆಟ್ ಪಡೆದಂತಾಗಿದೆ.

ಐಪಿಎಲ್‌ನಲ್ಲಿ ಒಟ್ಟಿಗೆ 91 ಇನ್ನಿಂಗ್ಸ್‌ಗಳನ್ನಾಡಿರುವ ಯುಜುವೇಂದ್ರ ಚಾಹಲ್ 7.78ರ ಎಕಾನಮಿಯಲ್ಲಿ 111 ವಿಕೆಟ್ ಪಡೆದುಕೊಂಡಿದ್ದಾರೆ. ಚಾಹಲ್ ಬೆಸ್ಟ್ ಬೌಲಿಂಗ್ ಫಿಗರ್ ಎಂದರೆ 25 ರನ್‌ಗೆ 4 ವಿಕೆಟ್. ಈ ಬಾರಿಯ ಸೀಸನ್‌ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರಲ್ಲಿ ಚಾಹಲ್ ಸದ್ಯ 4ನೇ ಸ್ಥಾನದಲ್ಲಿದ್ದಾರೆ.

Story first published: Friday, October 16, 2020, 10:10 [IST]
Other articles published on Oct 16, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+