
ಐಪಿಎಲ್ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಪಡೆಗೆ 160 ರನ್‌ಗಳ ಗುರಿಯನ್ನು ನೀಡಿದೆ. ಆರಂಭದಲ್ಲಿ ಬೃಹತ್ ಮೊತ್ತದ ಗುರಿ ನೀಡುವ ಲಕ್ಷಣ ತೋರಿದ್ದ ಮುಂಬೈ ಬಳಿಕ ಆರ್‌ಸಿಬಿ ಬೌಲಿಂಗ್ ದಾಳಿಗೆ ಮೆತ್ತಗಾಯಿತು.
ಆರ್‌ಸಿಬಿ ತಂದ ಪರವಾಗಿ ಯುವ ವೇಗಿ ಹರ್ಷದ್ ಪಟೇಲ್ ಅದ್ಭುತ ದಾಳಿಯನ್ನು ಸಂಘಟಿಸಿದರು. ಐದು ವಿಕೆಟ್ ಕಿತ್ತ ಪಟೇಲ್ ಮುಂಬೈ ಇಂಡಿಯನ್ಸ್‌ನ ಮಧ್ಯಮ ಕ್ರಮಾಂಕಕ್ಕೆ ದೊಡ್ಡ ಆಘಾತವನ್ನು ನೀಡಿದ್ದಾರೆ. ಈ ಮೂಲಕ ಮುಂಬೈ ತಂಡಕ್ಕೆ ಕಂಟಕವಾದರು.
ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಹಣಾಹಣಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಕ್ರಿಸ್ ಲಿನ್ ಆರಂಭಿಕನಾಗಿ ರೋಹಿತ್ ಶರ್ಮಾಗೆ ಸಾಥ್ ನೀಡಲಿದ್ದಾರೆ. ಕ್ವಿಂಟನ್ ಡಿಕಾಕ್ ಈ ಪಂದ್ಯದಲ್ಲಿ ಆಡುತ್ತಿಲ್ಲವಾದ್ದರಿಂದ ಲಿನ್ ಅವಕಾಶ ಪಡೆದುಕೊಂಡಿದ್ದಾರೆ. ಇಶಾನ್ ಕಿಶನ್, ಸೂರ್ಯಕುಮಾರ್ ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಲವಾಗಿರಲಿದ್ದಾರೆ. ಕಿರಾನ್ ಪೊಲಾರ್ಡ್ ಹಾಗೂ ಕೃನಾಲ್ ಪಾಂಡ್ಯ ಕೆಳ ಕ್ರಮಾಂಕದಲ್ಲಿ ತಂಡಕ್ಕೆ ಸಾಥ್ ನೀಡಲಿದ್ದಾರೆ. ಬೌಲಿಂಗ್‌ನಲ್ಲಿ ಟ್ರೆಂಟ್ ಬೋಲ್ಟ್ ಹಾಗೂ ಬೂಮ್ರಾ ಆರ್‌ಸಿಬಿಗೆ ಕಾಡಲಿದ್ದಾರೆ.
ಆರ್‌ಸಿಬಿ ತಂಡದ ಆಡುವ ಬಳಗದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಂಡಿಲ್ಲ. ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿರುವ ಪಡಿಕ್ಕಲ್ ಹೊರಗುಳಿದಿದ್ದಾರೆ. ಅನುಭವಿಗಳಾದ ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಜೊತೆಗೆ ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಅಜರುದ್ದೀನ್, ಕೈಲ್ ಜ್ಯಾಮಿಸನ್ ಹೊಸದಾಗಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ:
ರೋಹಿತ್ ಶರ್ಮಾ (ನಾಯಕ), ಕ್ರಿಸ್ ಲಿನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ, ಮಾರ್ಕೊ ಜಾನ್ಸೆನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ರಜತ್ ಪಾಟಿದಾರ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ ವೆಲ್, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ವಾಷಿಂಗ್ಟನ್ ಸುಂದರ್, ಕೈಲ್ ಜಾಮಿಸನ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್