ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಅಪಾರವಾದ ಒತ್ತಡದಲ್ಲಿರುವ ಟಾಪ್ 3 ನಾಯಕರು

IPL 2021: 3 Captains who will be under huge pressure
IPLನಲ್ಲಿ ಕಳಪೆ ಪ್ರದರ್ಶನ ನೀಡಿರೋ ಈ 3 ನಾಯಕರಿಗೆ ಸಂಕಷ್ಟ | Oneindia Kannada

ಇದೇ ವರ್ಷ ಏಪ್ರಿಲ್ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಭಾರತದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಿದ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೊರಡಿಸಿತು.

ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತೀಯಾರ್ಧ ಸಾಕಷ್ಟು ಕುತೂಹಲಗಳನ್ನು ಹುಟ್ಟು ಹಾಕಿದ್ದು ಸ್ಥಗಿತಗೊಂಡಿದ್ದ ಟೂರ್ನಿಯ ಉಳಿದ 31 ಪಂದ್ಯಗಳು ಮುಂದುವರಿಯಲಿವೆ.

ರಹಾನೆ, ಪೂಜಾರರನ್ನು ತಂಡದಿಂದ ಹೊರಗಿಟ್ಟು ಈ ಯುವ ಆಟಗಾರನಿಗೆ ಸ್ಥಾನ ಕೊಡಿ ಎಂದ ಮಾಜಿ ಕ್ರಿಕೆಟಿಗರಹಾನೆ, ಪೂಜಾರರನ್ನು ತಂಡದಿಂದ ಹೊರಗಿಟ್ಟು ಈ ಯುವ ಆಟಗಾರನಿಗೆ ಸ್ಥಾನ ಕೊಡಿ ಎಂದ ಮಾಜಿ ಕ್ರಿಕೆಟಿಗ

ಇನ್ನು ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ಕೆಲ ಆಟಗಾರರು ಅಲಭ್ಯರಾಗಿದ್ದರೆ, ಮತ್ತೊಂದಷ್ಟು ನೂತನ ಆಟಗಾರರು ತಂಡವನ್ನು ಸೇರ್ಪಡೆಗೊಂಡಿದ್ದು ಅಲಭ್ಯರಾದ ಸ್ಥಾನವನ್ನು ತುಂಬಲಿದ್ದಾರೆ.

ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?

 3. ಇಯಾನ್ ಮಾರ್ಗನ್

3. ಇಯಾನ್ ಮಾರ್ಗನ್

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಿಲ್ಲ. 7 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಸದ್ಯ ಸಂಕಷ್ಟದಲ್ಲಿರುವ ಆಟಗಾರ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 7 ಪಂದ್ಯಗಳನ್ನು ಆಡಿರುವ ಇಯಾನ್ ಮಾರ್ಗನ್ ಗಳಿಸಿದ್ದು ಕೇವಲ 92. ಹೀಗಾಗಿ ಮುಂದುವರೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಇದೇ ರೀತಿ ಕಳಪೆ ಪ್ರದರ್ಶನವನ್ನು ನೀಡಿದರೆ ಇಯಾನ್ ಮಾರ್ಗನ್ ನಾಯಕ ಸ್ಥಾನದಿಂದ ಕೆಳಗಿಳಿಯುವುದು ಬಹುತೇಕ ಖಚಿತ ಎನ್ನಬಹುದು.

2. ಎಂಎಸ್ ಧೋನಿ

2. ಎಂಎಸ್ ಧೋನಿ


ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಕೂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಂಕಾಗಿದ್ದು ಇದುವರೆಗೂ ನಡೆದಿರುವ 7 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಪಂದ್ಯಗಳಲ್ಲಿ ಎಂಎಸ್ ಧೋನಿ ಗಳಿಸಿರುವುದು ಕೇವಲ 37 ರನ್. ಹೀಗಾಗಿ ಇದೇ ರೀತಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿಯೂ ಎಂಎಸ್ ಧೋನಿ ಕಳಪೆ ಪ್ರದರ್ಶನ ನೀಡಿದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ.

1. ವಿರಾಟ್ ಕೊಹ್ಲಿ

1. ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದಾಗಿನಿಂದಲೂ ಇಂದಿನವರೆಗೂ ಸಹ ಕೇವಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಾತ್ರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಸದ್ಯ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡುತ್ತಿಲ್ಲ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿ 198 ಸಾಧಾರಣ ರನ್ ಬಾರಿಸಿರುವ ವಿರಾಟ್ ಕೊಹ್ಲಿ ಕೂಡ ಸದ್ಯ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!

Story first published: Tuesday, August 24, 2021, 12:15 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X