ಯುಎಇಯಲ್ಲಿ ಐಪಿಎಲ್ ಮುಂದುವರೆದಾಗ ಈ 3 ತಂಡಗಳು ಕಂಗಾಲಾಗುವುದು ಖಚಿತ!

ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳು ಯುಎಇಯಲ್ಲಿ ಸೆಪ್ಟೆಂಬರ್ ಮೂರನೇ ವಾರದಿಂದ ಮುಂದುವರಿಯಲಿದೆ. ಏಪ್ರಿಲ್ 9ರಂದು ಭಾರತದಲ್ಲಿ ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಟೂರ್ನಿಯನ್ನು ಮುಂದೂಡಲಾಗಿತ್ತು.
ಆ ಪಂದ್ಯದಿಂದ ನಾನು ಕೆಟ್ಟವನಾಗಿ ತಂಡದಿಂದ ಹೊರಬಿದ್ದೆ, ಎಷ್ಟೋ ರಾತ್ರಿ ನಿದ್ರೆ ಮಾಡಿರಲಿಲ್ಲ: ರವೀಂದ್ರ ಜಡೇಜಾ
ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಐಪಿಎಲ್ ಟೂರ್ನಿ ಮುಂದುವರಿಯಲಿದೆ ಎನ್ನಲಾಗುತ್ತಿದ್ದು ಕೆಲ ತಂಡಗಳಿಗೆ ಇದು ಸಾಮಾನ್ಯ ವಿಷಯವಾಗಿದ್ದರೆ ಇನ್ನೂ ಕೆಲವು ತಂಡಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೌದು ಕಳೆದ ಬಾರಿಯ ಐಪಿಎಲ್ ಟೂರ್ನಿ ಕೂಡ ಕೊರೊನಾವೈರಸ್ ಕಾರಣದಿಂದಾಗಿ ಸಂಪೂರ್ಣವಾಗಿ ಯುಎಇಯಲ್ಲಿಯೇ ನಡೆದಿತ್ತು. ಯುಎಇಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ಕಳೆದ ಬಾರಿಯ ಐಪಿಎಲ್ ಟೂರ್ನಿ ಮುಗಿದಿತ್ತು. ಆದರೆ ಯಶಸ್ಸಿನ ಉತ್ತುಂಗದಲ್ಲಿದ್ದ ಕೆಲವು ತಂಡಗಳು ಯುಎಇ ಈ ನೆಲದಲ್ಲಿ ಮುಗ್ಗರಿಸಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದವು.
ಐಪಿಎಲ್‌ನಲ್ಲಿ ಕೊಹ್ಲಿ ಮಾತು ಕೇಳದೇ ಜೆಮಿಸನ್ ಒಳ್ಳೆಯ ಕೆಲಸ ಮಾಡಿದ್ದಾನೆ; ಟಿಮ್ ಸೌಥಿ ಪ್ರಶಂಸೆ
ಹೀಗೆ ಕಳೆದ ಬಾರಿ ಯುಎಇಯಲ್ಲಿ ಹೇಳಿಕೊಳ್ಳುವಂಥ ಪ್ರದರ್ಶನ ನೀಡದ ಕೆಲ ತಂಡಗಳು ಈ ಬಾರಿ ಕೂಡ ಅದೇ ರೀತಿಯ ಕಳಪೆ ಪ್ರದರ್ಶನ ನೀಡಲಿವೆಯಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ರೀತಿ ಚರ್ಚೆಗೀಡಾಗಿರುವ ತಂಡಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ..

1. ರಾಜಸ್ಥಾನ್ ರಾಯಲ್ಸ್
ಈ ಬಾರಿಯ ಐಪಿಎಲ್ ಟೂರ್ನಿ ಯುಎಇಗೆ ಸ್ಥಳಾಂತರವಾಗಿರುವುದು ಖಂಡಿತವಾಗಿಯೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಖುಷಿಯ ವಿಚಾರವಾಗಿಲ್ಲ. ಏಕೆಂದರೆ ಕಳೆದ ಬಾರಿ ಯುಎಇಯಲ್ಲಿ ನಡೆದಿದ್ದ ಟೂರ್ನಿಯಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡು ಟೂರ್ನಿಯಿಂದ ರಾಯಲ್ಸ್ ಹೊರಬಿದ್ದಿತ್ತು. ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್ ಟೂರ್ನಿ ಮುಂದುವರೆದ ಸಂದರ್ಭಕ್ಕೆ ತಂಡದ ಪ್ರಮುಖ ಆಟಗಾರರಾದ ಜೋಸ್ ಬಟ್ಲರ್, ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್ ಅಲಭ್ಯರಾಗಲಿರುವ ಕಾರಣ ಐಪಿಎಲ್ ಮುಂದುವರಿಕೆ ರಾಜಸ್ಥಾನ್ ತಂಡಕ್ಕೆ ತಲೆನೋವಾಗಿ ಪರಿಣಮಿಸಲಿದೆ.

2. ಕೊಲ್ಕತ್ತಾ ನೈಟ್ ರೈಡರ್ಸ್
ಕಳೆದ ಬಾರಿ ಯುಎಇಯಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ತಂಡ ಐದನೇ ಸ್ಥಾನ ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು. ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್ ಟೂರ್ನಿ ಮುಂದುವರಿದಾಗ ತಂಡದ ಪ್ರಮುಖ ಆಟಗಾರರಾದ ನಾಯಕ ಇಯಾನ್ ಮಾರ್ಗನ್ ಹಾಗೂ ಪ್ಯಾಟ್ ಕಮ್ಮಿನ್ಸ್ ಅಲಭ್ಯರಾಗುವ ಪರಿಸ್ಥಿತಿಯಿದ್ದು ತಂಡಕ್ಕೆ ಹಿನ್ನಡೆಯಾಗುವುದು ಖಚಿತ.

3. ಚೆನ್ನೈ ಸೂಪರ್ ಕಿಂಗ್ಸ್
ಸತತವಾಗಿ ಹತ್ತು ವರ್ಷಗಳ ಕಾಲ ಪ್ಲೇ ಆಫ್ ಪ್ರವೇಶ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಬಾರಿ ಯುಎಇಯಲ್ಲಿ ನಡೆದ ಐಪಿಎಲ್ ಆವೃತ್ತಿಯಲ್ಲಿ ಮಾತ್ರ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಟೂರ್ನಿಯಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಹೀಗಾಗಿ ಪ್ರಸ್ತುತ ಟೂರ್ನಿಯಲ್ಲಿ ಗೆಲುವಿನ ಹಾದಿಯಲ್ಲಿರುವ ಚೆನ್ನೈ ತಂಡಕ್ಕೆ ಯುಎಇ ಮುಳುವಾಗಲಿದೆಯಾ ಎಂಬುದನ್ನು ಕಾದು ನೋಡಬೇಕು. ಅಷ್ಟೆ ಅಲ್ಲದೆ ತಂಡದ ಪ್ರಮುಖ ಆಟಗಾರರಾದ ಮೊಯಿನ್ ಅಲಿ ಹಾಗೂ ಸ್ಯಾಮ್ ಕರನ್ ಅಲಭ್ಯತೆ ಕೂಡ ತಂಡಕ್ಕೆ ತಲೆನೋವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications