ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಕೊಹ್ಲಿ ರಾಜೀನಾಮೆ ನಂತರ ಆರ್‌ಸಿಬಿ ನಾಯಕ ಯಾರು? ರೇಸ್‌ನಲ್ಲಿದ್ದಾರೆ ಈ 3 ಆಟಗಾರರು

IPL 2021: 3 players who can replace Virat Kohli as the Royal challengers Bangalore Captain

ಇತ್ತೀಚೆಗಷ್ಟೇ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ಟಿ ಟ್ವೆಂಟಿ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಪ್ರಕಟಿಸಿದ್ದ ವಿರಾಟ್ ಕೊಹ್ಲಿ ಇದೀಗ ಪ್ರಸ್ತುತ ಐಪಿಎಲ್ ಆವೃತ್ತಿಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದಲೂ ಕೆಳಗಿಳಿಯುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಟೀಮ್ ಇಂಡಿಯಾ ಮೆಂಟರ್ ಆಗಿ ಎಂಎಸ್ ಧೋನಿ ಆಯ್ಕೆ ಸರಿಯೇ?; ತುಟಿ ಬಿಚ್ಚಿದ ವಿರೇಂದ್ರ ಸೆಹ್ವಾಗ್ಟೀಮ್ ಇಂಡಿಯಾ ಮೆಂಟರ್ ಆಗಿ ಎಂಎಸ್ ಧೋನಿ ಆಯ್ಕೆ ಸರಿಯೇ?; ತುಟಿ ಬಿಚ್ಚಿದ ವಿರೇಂದ್ರ ಸೆಹ್ವಾಗ್

ಹೌದು, ಸೆಪ್ಟೆಂಬರ್ 19ರ ಭಾನುವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ವಿರಾಟ್ ಕೊಹ್ಲಿ ಮಾತನಾಡಿರುವ ವಿಡಿಯೋ ಒಂದನ್ನು ಪೋಸ್ಟ್ ಮಾಡಿತ್ತು. ಈ ವಿಡಿಯೋದಲ್ಲಿ ಮಾತನಾಡಿದ್ದ ವಿರಾಟ್ ಕೊಹ್ಲಿ 'ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಇದೇ ನನ್ನ ಕೊನೆಯ ಆವೃತ್ತಿ, ಮುಂದಿನ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯಲಿದ್ದು ನನ್ನ ಐಪಿಎಲ್ ಜೀವನದವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿ ಆಡುತ್ತೇನೆ' ಎಂದು ಹೇಳಿಕೆಯನ್ನು ನೀಡುವುದರ ಮೂಲಕ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯುವ ಸುದ್ದಿಯನ್ನು ಹಂಚಿಕೊಂಡರು.

ಇನ್ನು 2011ರ ಸಮಯದಲ್ಲಿ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ನಿಭಾಯಿಸಿದ್ದ ವಿರಾಟ್ ಕೊಹ್ಲಿ ಬೆಂಗಳೂರು ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಆಯ್ಕೆಯಾದದ್ದು 2013ರಲ್ಲಿ. ಹೀಗೆ 2013ರಿಂದ ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ತಂಡವನ್ನು ಒಟ್ಟು 132 ಪಂದ್ಯಗಳಲ್ಲಿ ಮುನ್ನಡೆಸಿದ್ದು, 60 ಪಂದ್ಯದಲ್ಲಿ ಬೆಂಗಳೂರು ತಂಡ ಜಯಗಳಿಸಿದ್ದರೆ, 65 ಪಂದ್ಯಗಳಲ್ಲಿ ಸೋಲುಂಡಿದೆ ಮತ್ತು 3 ಪಂದ್ಯಗಳು ಟೈನೊಂದಿಗೆ ಅಂತ್ಯಗೊಂಡಿವೆ. ಹೀಗೆ ವಿರಾಟ್ ಕೊಹ್ಲಿ ನಾಯಕತ್ವದಡಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೇಳಿಕೊಳ್ಳುವಂತಹ ಯಶಸ್ಸನ್ನು ಸಾಧಿಸಿಲ್ಲ, 2016ರಲ್ಲಿ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಫೈನಲ್ ಪ್ರವೇಶಿಸಿದ್ದು ಬಿಟ್ಟರೆ ಉಳಿದ ಆವೃತ್ತಿಗಳಲ್ಲಿ ಉತ್ತಮ ಹಂತವನ್ನು ಹೆಚ್ಚಾಗಿ ತಲುಪಿಲ್ಲ, ಅದರಲ್ಲಿಯೂ ಟ್ರೋಫಿಯನ್ನು ಗೆಲ್ಲದೇ ಇರುವುದು ಕೊಹ್ಲಿ ನಾಯಕತ್ವಕ್ಕೆ ದೊಡ್ಡ ಮಟ್ಟದ ಹಿನ್ನಡೆಯಾಗಿದೆ.

ಭಾರತ ಟಿ ಟ್ವೆಂಟಿ ನಾಯಕತ್ವಕ್ಕೆ ವಿದಾಯದ ನಂತರ ಆರ್‌ಸಿಬಿ ನಾಯಕತ್ವಕ್ಕೂ ಕೊಹ್ಲಿ ಗುಡ್‌ಬೈ!: ಶರ್ಮಾಭಾರತ ಟಿ ಟ್ವೆಂಟಿ ನಾಯಕತ್ವಕ್ಕೆ ವಿದಾಯದ ನಂತರ ಆರ್‌ಸಿಬಿ ನಾಯಕತ್ವಕ್ಕೂ ಕೊಹ್ಲಿ ಗುಡ್‌ಬೈ!: ಶರ್ಮಾ

ಇನ್ನು ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ ಆವೃತ್ತಿಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಣೆ ಮಾಡಿದ ಕೂಡಲೇ ಕೊಹ್ಲಿ ಬಳಿಕ ಬೆಂಗಳೂರು ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಎದ್ದಿದ್ದು ಆ ಸ್ಥಾನಕ್ಕೆ ಈ ಕೆಳಕಂಡ ಮೂವರು ಆಟಗಾರರ ಹೆಸರುಗಳು ಹೆಚ್ಚಾಗಿ ಕೇಳಿಬರುತ್ತಿವೆ.

3. ಎಬಿ ಡಿವಿಲಿಯರ್ಸ್

3. ಎಬಿ ಡಿವಿಲಿಯರ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದ ಬಳಿಕ ನಾಯಕ ಸ್ಥಾನಕ್ಕೆ ಮಿಸ್ಟರ್ 360 ಎಂದೇ ಖ್ಯಾತಿಯನ್ನು ಪಡೆದಿರುವ ಎಬಿ ಡಿವಿಲಿಯರ್ಸ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಬೆಂಗಳೂರು ಫ್ರಾಂಚೈಸಿ ಜತೆ ಹಲವಾರು ವರ್ಷಗಳ ಒಡನಾಟವನ್ನು ಹೊಂದಿರುವ ಎಬಿ ಡಿವಿಲಿಯರ್ಸ್ ತಂಡದ ಆಟಗಾರರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಇನ್ನು ಬೆಂಗಳೂರು ತಂಡದ ಪರ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರರ ಪೈಕಿ ದ್ವಿತೀಯ ಸ್ಥಾನ ಪಡೆದುಕೊಂಡಿರುವ ಎಬಿ ಡಿವಿಲಿಯರ್ಸ್ ಕಷ್ಟದ ಸಮಯದಲ್ಲಿ ಬೆಂಗಳೂರು ತಂಡಕ್ಕೆ ಹಲವಾರು ಬಾರಿ ಆಸರೆಯಾಗಿದ್ದಾರೆ. ನಾಯಕತ್ವದಲ್ಲಿಯೂ ಉತ್ತಮ ಅನುಭವವನ್ನು ಹೊಂದಿರುವ ಎಬಿ ಡಿವಿಲಿಯರ್ಸ್ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿದ ನಂತರ ಬೆಂಗಳೂರು ತಂಡದ ನಾಯಕತ್ವವನ್ನು ವಹಿಸಿಕೊಳ್ಳುವ ಸಾಧ್ಯತೆಗಳಿವೆ.

2. ಯಜುವೇಂದ್ರ ಚಾಹಲ್

2. ಯಜುವೇಂದ್ರ ಚಾಹಲ್

ಕಳೆದ ಐದಾರು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರವನ್ನು ಯುಜುವೇಂದ್ರ ಚಾಹಲ್ ಕೂಡ ವಹಿಸಿದ್ದಾರೆ. 106 ಐಪಿಎಲ್ ಪಂದ್ಯಗಳನ್ನು ಆಡಿರುವ ಯಜುವೇಂದ್ರ ಚಾಹಲ್ 125 ವಿಕೆಟ್‍ಗಳನ್ನು ಪಡೆದಿದ್ದಾರೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಜೊತೆ ಒಳ್ಳೆಯ ಬಾಂಧವ್ಯವನ್ನು ಹೊಂದಿರುವ ಯುಜುವೇಂದ್ರ ಚಹಾಲ್ ನಾಯಕ ಸ್ಥಾನವನ್ನು ವಹಿಸಿಕೊಳ್ಳಲು ಅರ್ಹರಾಗಿರುವ ಆಟಗಾರರ ಪಟ್ಟಿಯಲ್ಲಿದ್ದಾರೆ.

ರಾಜೀನಾಮೆ ಬಗ್ಗೆ ಕೋಚ್ ಬಳಿ ಕೊಹ್ಲಿ ತೋಡಿಕೊಂಡ ನೋವು ಅಷ್ಟಿಷ್ಟಲ್ಲ | Oneindia Kannada
1. ದೇವದತ್ ಪಡಿಕ್ಕಲ್

1. ದೇವದತ್ ಪಡಿಕ್ಕಲ್

ಕಳೆದೆರೆಡು ಐಪಿಎಲ್ ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಎನಿಸಿಕೊಂಡಿರುವ ದೇವದತ್ ಪಡಿಕ್ಕಲ್ ಇನ್ನೂ ಯುವ ಆಟಗಾರನಾಗಿರುವ ಕಾರಣ ನಾಯಕ ಸ್ಥಾನಕ್ಕೇರುವ ಸಾಧ್ಯತೆಗಳು ಹೆಚ್ಚಿವೆ. ಐಪಿಎಲ್ 2020ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 473 ರನ್ ಬಾರಿಸಿ ಮಿಂಚಿದ್ದ ದೇವದತ್ ಪಡಿಕ್ಕಲ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ 195 ರನ್ ಗಳಿಸಿದ್ದಾರೆ.


ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ಯಾರಾಗಬಹುದು ಎಂಬ ಚರ್ಚೆಗಳಲ್ಲಿ ಈ ಮೂವರ ಹೆಸರುಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಹ್ಲಿ ಬಳಿಕ ಯಾವ ಆಟಗಾರನಿಗೆ ನಾಯಕಪಟ್ಟವನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Story first published: Monday, September 20, 2021, 10:22 [IST]
Other articles published on Sep 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X