ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: 3 ಸ್ಟಾರ್ ಆಟಗಾರರು ರಾಜಸ್ಥಾನ್‌ಗೆ ಕೈಕೊಡುವುದು ನಿಶ್ಚಿತ

IPL 2021: 3 star England players of Rajastan Royals doubt for UAE Leg

ಬೆಂಗಳೂರು ಆಗಸ್ಟ್ 5: ಕೊರೊನಾವೈರಸ್‌ನಿಂದಾಗಿ ಮುಂದೂಡಲ್ಪಟ್ಟಿರುವ ಐಪಿಎಲ್ ಟೂರ್ನಿ ಮುಂದುವರಿಸಲು ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್‌ನ ಉಳಿದ ಪಂದ್ಯಗಳು ಆರಂಭವಾಗಲಿದೆ. ಆದರೆ ಅಂತಾರಾಷ್ಟ್ರೀಯ ಪಂದ್ಯಗಳ ಕಾರಣದಿಂದಾಗಿ ಕೆಲ ರಾಷ್ಟ್ರಗಳ ಆಟಗಾರರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸುವುದು ಅನುಮಾನವಾಗಿದೆ.

ಇದೇ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸಲು ಅನುಮತಿ ದೊರೆಯುವುದು ಅನುಮಾನ ಎನ್ನಲಾಗಿತ್ತು. ಆದರೆ ಬಿಸಿಸಿಐ ನಡೆಸಿದ ಮಾತುಕತೆಯ ಬಳಿಕ ಈಗ ಇಸಿಬಿ ಆಟಗಾರರನ್ನು ಐಪಿಎಲ್‌ನ ಮುಂದುವರಿದ ಭಾಗಕ್ಕೆ ಕಳುಹಿಸಲು ಒಪ್ಪಿಸಿ ಸೂಚಿಸಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಹಾಗಿದ್ದರೂ ಇಂಗ್ಲೆಂಡ್‌ನ ಪ್ರಮುಖ ಆಟಗಾರರನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ಈ ಬಾರಿ ಐಪಿಎಲ್‌ನ ಉಳಿದ ಪಂದ್ಯಗಳಲ್ಲಿ ಆಟಗಾರರ ಸೇವೆಯಿಂದ ವಂಚಿವಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಭಾರತ vs ಇಂಗ್ಲೆಂಡ್ 1st ಟೆಸ್ಟ್: ಆರಂಭಿಕರಾಗಿ ರೋಹಿತ್-ರಾಹುಲ್ ವಿಶೇಷ ಸಾಧನೆಭಾರತ vs ಇಂಗ್ಲೆಂಡ್ 1st ಟೆಸ್ಟ್: ಆರಂಭಿಕರಾಗಿ ರೋಹಿತ್-ರಾಹುಲ್ ವಿಶೇಷ ಸಾಧನೆ

ಬೇರೆ ಬೇರೆ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್‌ನಿಂದ ರಾಜಸ್ಥಾನ ರಾಯಲ್ಸ್ ತಂಡದಲ್ಲಿರುವ ಇಂಗ್ಲೆಂಡ್‌ನ ಆಟಗಾರರು ವಂಚಿತವಾಗುವ ಸಾಧ್ಯತೆ ಬಹುತೇಕ ನಿಶ್ಚಿತ. ಇಂಗ್ಲೆಂಡ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಆಲ್‌ರೌಂಡರ್ ಆಗಿರುವ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಇಂಗ್ಲೆಂಡ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಹಾಗೂ ವಿಕೆಟ್ ಕೀಪರ್ ಜೋಸ್ ಬಟ್ಲರ್ ಕೂಡ ಅಲಭ್ಯವಾಗುವ ಬಗ್ಗೆ ವರದಿಯಾಗುತ್ತಿದೆ. ಇನ್ನು ಗಾಯದ ಕಾರಣದಿಂದಾಗಿ ವಿಶ್ರಾಂತಿಯಲ್ಲಿರುವ ಜೋಫ್ರ ಆರ್ಚರ್ ಈ ಬಾರಿಯ ಐಪಿಎಲ್‌ನ ಉಳಿದ ಪಮದ್ಯಗಳಿಂದ ಸಂಪೂರ್ಣವಾಗಿ ಭಾಗವಿಸುವುದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ಆಲ್‌ರೌಂಡರ್ ಬೆನ್ ಸ್ಟೋಕ್ಸ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್‌ರೌಂಡರ್ ಆಗಿರುವ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಇಂಗ್ಲೆಂಡ್ ತಂಡದ ಆಟಗಾರರಿಗೆ ಭಾಗವಹಿಸಲು ಅನುಮತಿ ದೊರೆತರೂ ಪಾಲ್ಗೊಳ್ಳುವುದು ಅನುಮಾನವಾಗಿದೆ. ಬೆನ್ ಸ್ಟೋಕ್ಸ್ ತಮ್ಮ ಬೆರಳಿನ ಗಾಯದ ಕಾರಣದಿಂದಾಗಿ ಹಾಗೂ ಮಾನಸಿಕ ಆರೋಗ್ಯವನ್ನು ಮುಂದಿಟ್ಟುಕೊಂಡು ಕ್ರಿಕೆಟ್‌ನಿಂದ ಅನಿರ್ದಿಷ್ಟಾವಧಿ ವಿಶ್ರಾಂತಿಯನ್ನು ಪಡೆದಿದ್ದಾರೆ. ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದರೂ ಕೊನೆಯ ಕ್ಷಣದಲ್ಲಿ ಸರಣಿಯಿಂದ ಬೆನ್ ಸ್ಟೋಕ್ಸ್ ಹಿಂದಕ್ಕೆ ಸರಿದರು. ಹೀಗಾಗಿ ಐಪಿಎಲ್‌ನಲ್ಲಿ ಭಾಗವಹಿಸುವ ಬಗ್ಗೆಯೂ ಅನುಮಾನಗಳಿವೆ.

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್: ಈ ಬಾರಿಯ ಐಪಿಎಲ್ ಆವೃತ್ತಿಯ ಮೊದಲಾರ್ಧದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಜೋಸ್ ಬಟ್ಲರ್ ಐಪಿಎಲ್‌ನ ಉಳಿದ ಪಂದ್ಯಗಳಿಂದ ಬ್ರೇಕ್ ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಕಾರಣ ಬೆನ್ ಸ್ಟೋಕ್ಸ್ ಹಾಗೂ ಅವರ ಪತ್ನಿ ಸೆಪ್ಟೆಂಬರ್ ತಿಂಗಳಿನಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕುಟುಂಬದ ಜೊತೆಗೆ ಕಾಲ ಕಳೆಯಲು ಬಟ್ಲರ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ಬಗ್ಗೆ ಬಟ್ಲರ್ ಅಥವಾ ರಾಜಸ್ಥಾನ್ ಫ್ರಾಂಚೈಸಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಸಂಕಷ್ಟದಲ್ಲಿ ಟೀಮ್ ಇಂಡಿಯಾದ ಗೋಡೆಯಾಗಿ ನಿಂತ ಕೆ ಎಲ್ ರಾಹುಲ್ | Oneindia Kannada

ವೇಗದ ಬೌಲರ್ ಜೋಫ್ರಾ ಆರ್ಚರ್: ಇನ್ನು ರಾಜಸ್ಥಾನ ರಾಯಲ್ಸ್ ಹಾಗೂ ಇಂಗ್ಲೆಂಡ್ ತಮಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೆನ್ನು ನೋವಿನ ಸಮಸ್ಯೆ ಅವರನ್ನು ಸತತವಾಗಿ ಕಾಡುತ್ತಿದೆ. ಇದೇ ಕಾರಣದಿಂದಾಗಿ ಆರ್ಚರ್ ಸುದೀರ್ಘ ಕಾಲದಿಂದ ಅಂತಾರಾಷ್ಟ್ರೀಯ ಪಂದ್ಯದಿಂದಲೂ ವಿಶ್ರಾಂತಿಯನ್ನು ಪಡೆದಿದ್ದಾರೆ. ಗುರುವಾರ ಈ ಬಗ್ಗೆ ಮತ್ತೊಂದು ಮಹತ್ವದ ಮಾಹಿತಿಯನ್ನು ಅವರು ನೀಡಿದ್ದಾರೆ. ಮುಂಬರುವ ಐಪಿಎಲ್ ಸಹಿತ ಟಿ20 ವಿಶ್ವಕಪ್ ಹಾಗೂ ಆಶಸ್ ಸರಣಿಯಿಂದಲೂ ಹೊರಗುಳಿಯುವುದಾಗಿ ಜೋಫ್ರಾ ಆರ್ಚರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಜೋಪ್ರಾ ಆರ್ಚರ್ ಸೇವೆಯಿಂದಲೂ ರಾಜಸ್ಥಾನ್ ರಾಯಲ್ಸ್ ವಂಚಿತವಾಗಲಿದೆ.

Story first published: Thursday, August 5, 2021, 21:49 [IST]
Other articles published on Aug 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X