For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ನೆಟ್ ಪ್ರಾಕ್ಟೀಸ್‌ನಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸಿದ ಎಬಿಡಿ; ವಿಡಿಯೋ ನೋಡಿ

IPL 2021: Ab de villiers starts Net practice for the 2nd leg of the tournament

ಇದೇ ವರ್ಷ ಏಪ್ರಿಲ್ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆಯಿಲ್ಲದೆ ನಡೆದಿತ್ತು. ಆದರೆ ತದನಂತರ ವಿವಿಧ ತಂಡಗಳ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಕ್ಷಣವೇ ನಿರ್ಧಾರವನ್ನು ತೆಗೆದುಕೊಂಡ ಬಿಸಿಸಿಐ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತೀಯಾರ್ಧ ಸಾಕಷ್ಟು ಕುತೂಹಲಗಳನ್ನು ಹುಟ್ಟು ಹಾಕಿದ್ದು ಸ್ಥಗಿತಗೊಂಡಿದ್ದ ಟೂರ್ನಿಯ ಉಳಿದ 31 ಪಂದ್ಯಗಳು ಮುಂದುವರಿಯಲಿವೆ.

ಹೀಗೆ ಇದೇ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗುತ್ತಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದ ಕುರಿತು ಸಾಕಷ್ಟು ದೊಡ್ಡಮಟ್ಟದ ನಿರೀಕ್ಷೆಗಳು ಮತ್ತು ಕುತೂಹಲಗಳು ಹುಟ್ಟಿಕೊಂಡಿದ್ದು ಸಾಕಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿವೆ. ಸದ್ಯ ಇಂಟರ್‌ನೆಟ್‌ನಲ್ಲಿ ದೊಡ್ಡ ಮಟ್ಟದಲ್ಲಿ ಟ್ರೆಂಡ್ ಆಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಆಡುವುದಕ್ಕೋಸ್ಕರ ಎಲ್ಲಾ ತಂಡದ ಆಟಗಾರರು ಯುಎಇ ತಲುಪಿದ್ದು ತಮ್ಮ ತಮ್ಮ ತರಬೇತಿಗಳನ್ನು ಹಾಗೂ ತಾಲೀಮುಗಳನ್ನು ಶುರುಮಾಡಿಕೊಂಡಿದ್ದಾರೆ.

ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧ ಆರಂಭವಾಗಲು ದಿನಗಣನೆ ಆರಂಭವಾಗಿದ್ದು ಇತ್ತೀಚೆಗಷ್ಟೇ ದುಬೈ ತಲುಪಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿರುವ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಇಂದು ( ಸೆಪ್ಟೆಂಬರ್ 13 ) ನೆಟ್ ಪ್ರಾಕ್ಟೀಸ್ ಆರಂಭಿಸಿದ್ದಾರೆ. ಹೌದು, ಎಬಿ ಡಿವಿಲಿಯರ್ಸ್ ಮೈದಾನಕ್ಕಿಳಿದು ತಾಲೀಮು ನಡೆಸುತ್ತಿದ್ದು ಮುಂದುವರೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೆವರು ಹರಿಸಿ ಅಭ್ಯಾಸ ನಡೆಸುತ್ತಿದ್ದಾರೆ. ಎಬಿ ಡಿವಿಲಿಯರ್ಸ್ ನೆಟ್ ಪ್ರಾಕ್ಟೀಸ್ ನಡೆಸುತ್ತಿರುವ ವಿಶೇಷ ವಿಡಿಯೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವುದರ ಮೂಲಕ ಹಂಚಿಕೊಂಡಿದೆ. ತುಂಬಾ ದಿನಗಳ ನಂತರ ಬ್ಯಾಟ್ ಹಿಡಿದು ಮೈದಾನದಲ್ಲಿ ತರಬೇತಿಯನ್ನು ಮಾಡುತ್ತಿರುವುದರ ಕುರಿತು ಸಂತಸ ವ್ಯಕ್ತಪಡಿಸಿದ ಎಬಿ ಡಿವಿಲಿಯರ್ಸ್ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಪಂದ್ಯ ಯಾವಾಗ?

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಯಶಸ್ವೀ ಪ್ರದರ್ಶನ ನೀಡಿದ ತಂಡಗಳ ಪೈಕಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಒಂದು. ಐಪಿಎಲ್ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯಗಳಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಸೋಲನ್ನನುಭವಿಸಿದ್ದು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.

Story first published: Monday, September 13, 2021, 21:13 [IST]
Other articles published on Sep 13, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+