ಐಪಿಎಲ್ 2021: ದುಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡ ಎಬಿಡಿ

ಇದೇ ವರ್ಷದ ಏಪ್ರಿಲ್ 9 ನೇ ತಾರೀಕಿನಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಪಂದ್ಯಗಳವರೆಗೆ ಯಾವುದೇ ಅಡಚಣೆಯಿಲ್ಲದೆ ನಡೆಯಿತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಈ ಹಿಂದೆಯೇ ತೀರ್ಮಾನಿಸಿತ್ತು. ಬಿಸಿಸಿಐ ತೀರ್ಮಾನದಂತೆ ಸೆಪ್ಟೆಂಬರ್ 19 ರಿಂದ ಯುಎಈಯಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದ್ದು ವಿವಿಧ ತಂಡಗಳ ಆಟಗಾರರಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ.

'ಆತ ತಂಡದಲ್ಲಿ ಯಾಕಿದ್ದಾನೋ ಅರ್ಥವಾಗುತ್ತಿಲ್ಲ'; ಭಾರತದ ಆಟಗಾರನ ವಿರುದ್ಧ ವ್ಯಂಗ್ಯವಾಡಿದ ಕನೇರಿಯಾ!'ಆತ ತಂಡದಲ್ಲಿ ಯಾಕಿದ್ದಾನೋ ಅರ್ಥವಾಗುತ್ತಿಲ್ಲ'; ಭಾರತದ ಆಟಗಾರನ ವಿರುದ್ಧ ವ್ಯಂಗ್ಯವಾಡಿದ ಕನೇರಿಯಾ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಲವೊಂದಿಷ್ಟು ಆಟಗಾರರು ಮುಂದುವರಿಯಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗೆ ಅಲಭ್ಯರಾದ ಕಾರಣ ಅವರ ಸ್ಥಾನಕ್ಕೆ ಕೆಲ ಹೊಸ ಆಟಗಾರರ ಆಗಮನವಾಗಿದೆ. ಇನ್ನು ಟೂರ್ನಿಯ ಆರಂಭಕ್ಕೆ ಇನ್ನೆರಡು ವಾರಗಳು ಮಾತ್ರ ಬಾಕಿ ಉಳಿದಿದ್ದು ಈಗಾಗಲೇ ಎಲ್ಲಾ ತಂಡಗಳ ಒಂದಷ್ಟು ಆಟಗಾರರು ದುಬೈ ತಲುಪಿದ್ದು ಅಭ್ಯಾಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಎಇ ಪ್ರಯಾಣವನ್ನು ಕೈಗೊಂಡು ದುಬೈ ತಲುಪಿ ಕ್ವಾರಂಟೈನ್ ನಿಯಮವನ್ನು ಅನುಸರಿಸಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಟಗಾರ, ಮಿಸ್ಟರ್ 360 ಎಂದೇ ಖ್ಯಾತಿಯನ್ನು ಪಡೆದಿರುವ ಎಬಿ ಡಿವಿಲಿಯರ್ಸ್ ಯುಎಇಯನ್ನು ತಲುಪಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

ಎಬಿ ಡಿವಿಲಿಯರ್ಸ್ ತಾವು ದುಬೈ ತಲುಪಿರುವುದನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಫೋಟೋವೊಂದನ್ನು ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಎಬಿ ಡಿವಿಲಿಯರ್ಸ್ ದುಬೈ ತಲುಪಿರುವ ವಿಷಯವನ್ನು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಎಬಿ ಡಿವಿಲಿಯರ್ಸ್ ಅವರ ಫೋಟೋವೊಂದನ್ನು ಟ್ವೀಟ್ ಮಾಡುವ ಮೂಲಕ ಹಚ್ಚಿಕೊಂಡಿದೆ. 'ಎಬಿ ಡಿವಿಲಿಯರ್ಸ್ ನಮ್ಮ ತಂಡವನ್ನು ಸೇರಿಕೊಂಡಿದ್ದು ನಮ್ಮ ಉತ್ಸಾಹದ ಮಟ್ಟ ಮತ್ತಷ್ಟು ಹೆಚ್ಚಿದೆ' ಎಂದು ಬರೆದುಕೊಳ್ಳುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೋಟೋವನ್ನು ಟ್ವೀಟ್ ಮಾಡಿದೆ.

ಮುಂದುವರೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ತಂಡದ ಮೊದಲ ಪಂದ್ಯ ಯಾವಾಗ?

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಆಟಗಾರರು: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಮೊಹಮ್ಮದ್ ಸಿರಾಜ್, ಯಜುರ್ವೇದ ಚಾಹಲ್, ಕೈಲ್ ಜೆಮಿಸನ್, ಕ್ರಿಶ್ಚಿಯನ್, ವನಿಂದು ಹಸರಂಗ, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜಾರ್ಜ್ ಗಾರ್ಟನ್, ದುಷ್ಮಂತ ಚಮೀರಾ, ಕೆಎಸ್ ಭಾರತ್, ಸುಯಾಶ್, ಅಜರುದ್ದೀನ್, ರಜತ್ ಪಾಟಿದಾರ್, ನವದೀಪ್ ಸೈನಿ, ಹರ್ಷಲ್ ಪಟೇಲ್, ವಾಷಿಂಗ್ಟನ್ ಸುಂದರ್, ಸಚಿನ್ ಬೇಬಿ, ಪವನ್ ದೇಶಪಾಂಡೆ, ಎಸ್ ಅಹ್ಮದ್.

For Quick Alerts
ALLOW NOTIFICATIONS
For Daily Alerts
Story first published: Monday, September 6, 2021, 14:10 [IST]
Other articles published on Sep 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X