ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಾರ್ನರ್ ಅಲ್ಲ, ರೈನಾ ಅಲ್ಲ ಎಬಿ ಡಿವಿಲಿಯರ್ಸ್ ಐಪಿಎಲ್ ಕಿಂಗ್ ಎನ್ನುತ್ತಿವೆ ಈ ಅಂಕಿ ಅಂಶ

IPL 2021 : Ab de villiers becomes the fastest batsman to complete 5000 runs in IPL in terms of balls faced

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 22ನೇ ಪಂದ್ಯ ಮಂಗಳವಾರ ( ಏಪ್ರಿಲ್ 27 ) ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆಯಿತು. ಟೂರ್ನಿಯಲ್ಲಿ ಸಮಬಲವನ್ನು ಸಾಧಿಸಿದ್ದ ಎರಡೂ ತಂಡಗಳ ನಡುವೆ ರೋಚಕ ಪಂದ್ಯ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಬಿ ಡಿವಿಲಿಯರ್ಸ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. 172 ರನ್‌ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೊನೆಯ ಹಂತದವರೆಗೂ ಹೋರಾಟ ನಡೆಸಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು, ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ರನ್‌ನ ರೋಚಕ ಜಯ ಸಾಧಿಸಿತು.

ಪಂದ್ಯದಲ್ಲಿ 42 ಎಸೆತಗಳಿಗೆ ಅಜೇಯ 75 ರನ್ ಬಾರಿಸಿದ ಎಬಿ ಡಿವಿಲಿಯರ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಹಾಗೂ ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಎಬಿ ಡಿವಿಲಿಯರ್ಸ್ ಐಪಿಎಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲನ್ನು ಮುಟ್ಟಿದ್ದಾರೆ. ಹೌದು ಎಬಿ ಡಿವಿಲಿಯರ್ಸ್ 5000 ಐಪಿಎಲ್ ರನ್‌ಗಳನ್ನು ಪೂರೈಸಿದರು, ಹೀಗೆ 5000 ಐಪಿಎಲ್ ರನ್ ಪೂರೈಸುವ ಮೂಲಕ ಎಬಿ ಡಿವಿಲಿಯರ್ಸ್ ತಾನು ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್‌ಗಿಂತ ಡೇಂಜರಸ್ ಬ್ಯಾಟ್ಸ್‌ಮನ್ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 5000 ರನ್ ಪೂರೈಸಿದ ಆಟಗಾರ ಎಂಬ ಸಾಧನೆಯನ್ನು ಎಬಿ ಡಿವಿಲಿಯರ್ಸ್ ಮಾಡಿದ್ದಾರೆ. ಕೇವಲ 3288 ಎಸೆತಗಳಲ್ಲಿ ಎಬಿ ಡಿವಿಲಿಯರ್ಸ್ 5000 ಐಪಿಎಲ್ ರನ್‌ಗಳನ್ನು ಪೂರೈಸಿ ಅತಿ ಕಡಿಮೆ ಎಸೆತಗಳಲ್ಲಿ 5000 ರನ್ ಪೂರೈಸಿದ ಆಟಗಾರ ಎಂಬ ಹೊಸ ಮೈಲಿಗಲ್ಲನ್ನು ನೆಟ್ಟಿದ್ದಾರೆ. ಎಬಿಡಿ ವಿಲಿಯರ್ಸ್ ಹೊರತುಪಡಿಸಿ ಡೇವಿಡ್ ವಾರ್ನರ್ 3544 ಎಸೆತಗಳಲ್ಲಿ 5000 ರನ್ ಪೂರೈಸಿದ್ದರು ಹಾಗೂ ಸುರೇಶ್ ರೈನಾ 3620 ಎಸೆತಗಳಲ್ಲಿ 5000 ಐಪಿಎಲ್ ರನ್‌ಗಳನ್ನು ಪೂರೈಸಿದ್ದರು.

Story first published: Wednesday, April 28, 2021, 20:32 [IST]
Other articles published on Apr 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X