ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಮೈದಾನಕ್ಕೆ ತೆರಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಬಲಿಸಿದ ಸುದೀಪ್ ದಂಪತಿ

IPL 2021: Actor Sudeep and Priya Sudeep watched RCB vs KKR match in Abudhabi

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಪುನರ್ ಆರಂಭಿಸಲಾಗಿದೆ. ಹೀಗೆ ಮುಂದುವರಿದಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಮೊದಲನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಿದವು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಕನ್ನಡ ಚಲನಚಿತ್ರರಂಗ ನಟ ಕಿಚ್ಚ ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಸುದೀಪ್ ಮೈದಾನಕ್ಕೆ ಆಗಮಿಸಿ ವೀಕ್ಷಿಸಿದ್ದರು. ಕಿಚ್ಚ ಸುದೀಪ್ ಮತ್ತು ಪ್ರಿಯಾ ಸುದೀಪ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವನ್ನು ವೀಕ್ಷಿಸಲು ಮೈದಾನಕ್ಕೆ ಬಂದಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇದಾದ ಬಳಿಕ ಸೆಪ್ಟೆಂಬರ್ 21ರ ಸೋಮವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ನಡೆಯಿತು. ಈ ಪಂದ್ಯವನ್ನು ವೀಕ್ಷಿಸಲು ಕಿಚ್ಚ ಸುದೀಪ್ ಮತ್ತು ಪ್ರಿಯಾ ಸುದೀಪ್ ದಂಪತಿ ಮೈದಾನಕ್ಕೆ ಆಗಮಿಸಿದ್ದರು. ಕಿಚ್ಚ ಸುದೀಪ್ ಮತ್ತು ಪ್ರಿಯಾ ಸುದೀಪ್ ಇಬ್ಬರೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜರ್ಸಿಯನ್ನು ತೊಟ್ಟು ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

sudeep

ಕೋಲ್ಕತ್ತಾ ವಿರುದ್ಧ ಹೀನಾಯವಾಗಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು

ವಿರಾಟ್ ಕೊಹ್ಲಿ ಆಡಿದ 200ನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋಲುಂಡಿದೆ. ಹೌದು, ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 20ರ ಸೋಮವಾರದಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅಬುಧಾಬಿಯ ಶೈಖ್ ಝಾಯೆದ್ ಕ್ರೀಡಾಂಗಣದಲ್ಲಿ ಆಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಭಾಗದ ತನ್ನ ಮೊದಲನೇ ಪಂದ್ಯದಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಜೊತೆಗೆ ಹೀನಾಯ ಸೋಲನ್ನು ಅನುಭವಿಸಿದೆ. ಬೆಂಗಳೂರು ಮತ್ತು ಕೊಲ್ಕತ್ತಾ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು 19 ಓವರ್‌ಗಳಲ್ಲಿ 92 ರನ್ ಗಳಿಸಿ ಆಲ್ ಔಟ್ ಆಯಿತು. ಇನ್ನು ಬೆಂಗಳೂರು ತಂಡ ನೀಡಿದ 93 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿ 9 ವಿಕೆಟ್‍ಗಳ ಭರ್ಜರಿ ಗೆಲುವನ್ನು ಸಾಧಿಸಿತು.

Story first published: Tuesday, September 21, 2021, 16:58 [IST]
Other articles published on Sep 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X