ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್

ಕಳೆದ ಬಾರಿ ಯುಎಇಯಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆವೃತ್ತಿಯಲ್ಲಿ ಕಳಪೆ ಪ್ರದರ್ಶನವನ್ನು ನೀಡಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ ಪ್ಲೇ ಆಫ್ ಹಂತವನ್ನು ಬಹುತೇಕ ಪ್ರವೇಶಿಸಿದೆ.

ಚೆನ್ನೈ ವಿರುದ್ಧದ ಸೋಲಿಗೆ ಕಾರಣರಾದ ಆಟಗಾರರು ಯಾರೆಂದು ತುಟಿ ಬಿಚ್ಚಿದ ವಿರಾಟ್ ಕೊಹ್ಲಿಚೆನ್ನೈ ವಿರುದ್ಧದ ಸೋಲಿಗೆ ಕಾರಣರಾದ ಆಟಗಾರರು ಯಾರೆಂದು ತುಟಿ ಬಿಚ್ಚಿದ ವಿರಾಟ್ ಕೊಹ್ಲಿ

ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಸದ್ಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಟೂರ್ನಿಯಲ್ಲಿ ಇದುವರೆಗೂ ಒಟ್ಟು 9 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಪಂದ್ಯಗಳಲ್ಲಿ ಜಯ ಸಾಧಿಸಿ, ಕೇವಲ 2 ಪಂದ್ಯಗಳಲ್ಲಿ ಮಾತ್ರ ಸೋತಿದ್ದು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಆಕ್ರಮಿಸಿಕೊಂಡಿದೆ.

ಟಿ20 ವಿಶ್ವಕಪ್ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಹೇಗೆ ಸ್ಥಾನ ಸಿಕ್ಕಿತು?; ಮಾಜಿ ಕ್ರಿಕೆಟಿಗನ ಅಸಮಾಧಾನಟಿ20 ವಿಶ್ವಕಪ್ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಹೇಗೆ ಸ್ಥಾನ ಸಿಕ್ಕಿತು?; ಮಾಜಿ ಕ್ರಿಕೆಟಿಗನ ಅಸಮಾಧಾನ

ಹೀಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಉಳಿದಿರುವ 5 ಪಂದ್ಯಗಳ ಪೈಕಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಸಾಧಿಸಿದರೆ ಸಾಕಾಗಿದೆ. ಒಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತ್ಯದ್ಭುತ ಪ್ರದರ್ಶನ ನೀಡಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಯಾವುದೇ ದೊಡ್ಡ ಇನ್ನಿಂಗ್ಸ್ ಕಟ್ಟದೇ ಕಡಿಮೆ ರನ್ ಗಳಿಸಿದ್ದಾರೆ. ಈ ಕುರಿತಾಗಿ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮಾತನಾಡಿದ್ದು ಎಂಎಸ್ ಧೋನಿ ಹೆಚ್ಚಿನ ರನ್ ಗಳಿಸಲು ಈ ಕೆಳಕಂಡಂತೆ ಸಲಹೆ ನೀಡಿದ್ದಾರೆ.

ಚೆನ್ನೈ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆದ ನಂತರ ಧೋನಿ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಿಕೊಳ್ಳಬೇಕು

ಚೆನ್ನೈ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆದ ನಂತರ ಧೋನಿ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಿಕೊಳ್ಳಬೇಕು

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 9 ಪಂದ್ಯಗಳನ್ನಾಡಿರುವ ಎಂಎಸ್ ಧೋನಿ ಒಟ್ಟು 51 ರನ್‌ಗಳನ್ನು ಗಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೌತಮ್ ಗಂಭೀರ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡ ಕೂಡಲೇ ಮುಂಬರಲಿರುವ ಪಂದ್ಯಗಳಲ್ಲಿ ಎಂಎಸ್ ಧೋನಿ ಆರನೇ ಅಥವಾ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಬದಲು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟಿಂಗ್ ಮಾಡಬೇಕಿದೆ ಎಂದಿದ್ದಾರೆ. ಈ ರೀತಿ ಮಾಡುವುದರಿಂದ ಪ್ಲೇ ಆಫ್ ಸುತ್ತಿನ ಪಂದ್ಯಗಳಲ್ಲಿ ತಂಡಕ್ಕೆ ಆಸರೆಯಾಗುವಂತಹ ಬ್ಯಾಟಿಂಗ್ ಪ್ರದರ್ಶನವನ್ನು ನೀಡಲು ಎಂಎಸ್ ಧೋನಿಗೆ ಸಹಕಾರಿಯಾಗಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಐಪಿಎಲ್ ಟೂರ್ನಿಯಲ್ಲಿಯೂ ಧೋನಿ ನೀರಸ ಪ್ರದರ್ಶನ

ಕಳೆದ ಐಪಿಎಲ್ ಟೂರ್ನಿಯಲ್ಲಿಯೂ ಧೋನಿ ನೀರಸ ಪ್ರದರ್ಶನ

ಇನ್ನು 2020ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಕೂಡ ಧೋನಿ ದೊಡ್ಡಮಟ್ಟದ ರನ್ ಕಲೆಹಾಕುವಲ್ಲಿ ವಿಫಲರಾಗಿದ್ದರು. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 14 ಪಂದ್ಯಗಳನ್ನಾಡಿದ್ದ ಎಂಎಸ್ ಧೋನಿ 200 ರನ್‌ಗಳನ್ನು ಮಾತ್ರ ಕಲೆ ಹಾಕಿದ್ದರು.

ಧೋನಿಗೆ ಅವಕಾಶಗಳು ಹೆಚ್ಚಿವೆ

ಧೋನಿಗೆ ಅವಕಾಶಗಳು ಹೆಚ್ಚಿವೆ

ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡ ನಂತರ ಎಂಎಸ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಪ್ಲೇ ಆಫ್ ಸುತ್ತಿನ ಪಂದ್ಯಗಳಲ್ಲಿ ಚೆನ್ನಾಗಿ ಆಡಲು ಬ್ಯಾಟಿಂಗ್ ಅಭ್ಯಾಸವನ್ನು ಮಾಡಿಕೊಳ್ಳಬೇಕು ಎಂದು ಸಲಹೆಯನ್ನು ನೀಡಿರುವ ಗೌತಮ್ ಗಂಭೀರ್ 'ನಾಯಕನಾಗಿರುವ ಕಾರಣ ಎಂಎಸ್ ಧೋನಿ ಯಾವುದೇ ಕ್ರಮಾಂಕದಲ್ಲಿ ಬೇಕಾದರೂ ಕಣಕ್ಕಿಳಿಯಬಹುದಾದಂತಹ ಅವಕಾಶಗಳನ್ನು ಹೊಂದಿದ್ದಾರೆ, ಹೀಗಾಗಿ ಅವರು ಯಾವುದೇ ಅಡ್ಡಿಯಿಲ್ಲದೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು' ಎಂದಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Saturday, September 25, 2021, 14:15 [IST]
Other articles published on Sep 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X