ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಐತಿಹಾಸಿಕ ಸಾಧನೆಗೆ ಅಮಿತ್ ಮಿಶ್ರಾ ಮತ್ತಷ್ಟು ಸನಿಹ

IPL 2021: Amit Mishra eye on Historical IPL milestones in IPL

ಐಪಿಎಲ್‌ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಅನುಭವಿ ಸ್ಪಿನ್ನರ್ ಅಮಿತ್‌ಮಿಶ್ರಾ ಐತಿಹಾಸಿಕ ಸಾಧನೆ ಮಾಡಲು ಅವಕಾಶ ಹೊಂದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಸ್ಪಿನ್ನರ್ ಆಗಿರುವ ಅಮಿತ್ ಮಿಶ್ರಾ ಐಪಿಎಲ್‌ನಲ್ಲಿ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಈಗ ಐತಿಹಾಸಿಕ ಸಾಧನೆಯೊಂದನ್ನು ಮಾಡುವ ಅವಕಾಶ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಈ ಅನುಭವಿ ಸ್ಪಿನ್ನರ್‌ಗೆ ಇದೆ.

ತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತುತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತು

ಮಿಶ್ರಾ ಐತಿಹಾಸಿಕ ಸಾಧನೆ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಸ್ಪಿನ್ನರ್ ಆಗಿರುವ ಅಮಿತ್ ಮಿಶ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 100ನೇ ಐಪಿಎಲ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಇದಕ್ಕಿಂತಲೂ ಹೆಚ್ಚಾಗಿ ಅಮಿತ್ ಮಿಶ್ರಾಗೆ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆಯಲು ಅದ್ಭುತ ಅವಕಾಶವಿದೆ. ಈ ದಾಖಲೆ ಬರೆಯಲು ಮಿಶ್ರಾಗೆ ಅಗತ್ಯವಿರುವುದು ಕೇವಲ 5 ವಿಕೆಟ್ ಮಾತ್ರ. ಡೆಲ್ಲಿ ಸ್ಪಿನ್ನರ್ ಅಮಿತ್ ಮಿಶ್ರಾ ಐಪಿಎಲ್‌ನಲ್ಲಿ ಈವರೆಗೆ 166 ವಿಕೆಟ್‌ಗಳನ್ನು ಸಂಪಾದಿಸಿದ್ದಾರೆ. ಮೊದಲ ಸ್ಥಾನದಲ್ಲಿ ಮಾಜಿ ವೇಹದ ಬೌಲರ್ ಲಸಿತ್ ಮಾಲಿಂಗ ಇದ್ದು 170 ವಿಕೆಟ್‌ಗಳನ್ನು ತಮ್ಮದಾಗಿಸಿದ್ದಾರೆ.

ಐಪಿಎಲ್ 2021: ಪ್ರಮುಖ ಆಟಗಾರನ ಹೊರಗಿಟ್ಟಿದ್ದಕ್ಕೆ ಅನಿಲ್ ಕುಂಬ್ಳೆ ಟ್ರೋಲ್ಐಪಿಎಲ್ 2021: ಪ್ರಮುಖ ಆಟಗಾರನ ಹೊರಗಿಟ್ಟಿದ್ದಕ್ಕೆ ಅನಿಲ್ ಕುಂಬ್ಳೆ ಟ್ರೋಲ್

ಬ್ಯಾಟಿಂಗ್ ದಾಖಲೆಗೆ ರಹಾನೆ, ಸಾಹಾ ಸಜ್ಜು: ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹಾ ಕೂಡ ಈ ಪಂದ್ಯದಲ್ಲಿ ಪ್ರಮುಖ ಮೈಲಿಗಲ್ಲೊಂದನ್ನು ನೆಡಲು ಸಜ್ಜಾಗಿದ್ದಾರೆ. ಈ ಪಂದ್ಯದಲ್ಲಿ ಸಾಹಾ 13 ರನ್‌ಗಳಿಸಿದರೆ ಐಪಿಎಲ್‌ನಲ್ಲಿ 2000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಆಟಗಾರ ಅಜಿಂಕ್ಯಾ ರಹಾನೆ 4000 ರನ್‌ಗಳಿಸಿದ ಪಟ್ಟಿಗೆ ಸೇರಿಕೊಳ್ಳಲು ಹಾತೊರೆಯುತ್ತಿದ್ದು ಈ ಪಂದ್ಯದಲ್ಲಿ 59 ರನ್‌ಗಳಿಸಿದರೆ ಈ ಸಾಧನೆ ಮಾಡಲಿದ್ದಾರೆ.

ಈ ಬಾರಿಯ ಐಪಿಎಲ್‌ ಟೂರ್ನಿಯ ಮಧ್ಯದಲ್ಲೇ ಕೊಹ್ಲಿ ಕೈಬಿಟ್ಟು ಹೊಸ ನಾಯಕನನ್ನು ಆರಿಸಲಿದೆ ಆರ್‌ಸಿಬಿ!?ಈ ಬಾರಿಯ ಐಪಿಎಲ್‌ ಟೂರ್ನಿಯ ಮಧ್ಯದಲ್ಲೇ ಕೊಹ್ಲಿ ಕೈಬಿಟ್ಟು ಹೊಸ ನಾಯಕನನ್ನು ಆರಿಸಲಿದೆ ಆರ್‌ಸಿಬಿ!?

ಡೆಲ್ಲಿ vs ಹೈದರಾಬಾದ್ ಪ್ರಿವ್ಯೂ: ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಅಂಕಪಟ್ಟಿಯಲ್ಲಿ ಸದ್ಯ 2ನೇ ಸ್ಥಾನದಲ್ಲಿದೆ. ಆಡಿದ 8 ಅಂಕಗಳ ಪೈಕಿ 12 ಅಂಕ ಸಂಪಾದಿಸಿರುವ ಡೆಲ್ಲಿ ಪ್ಲೇಆಫ್‌ಗೆ ಪ್ರವೇಶಿಸುವ ಹಾದಿಯಲ್ಲಿ ಬಹಳ ಸನಿಹದಲ್ಲಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಥೀತಿ ಶೋಚನೀಯವಾಗಿದೆ. ಈ ಬಾರಿಯ ಐಪಿಎಲ್‌ನ ಮೊದಲಾರ್ಧದಲ್ಲಿ ಆಡಿದ 7 ಪಂದ್ಯಗಳ ಪೈಕಿ 6ರಲ್ಲಿ ಸೋಲು ಕಂಡಿದೆ. ಹೀಗಾಗಿ ಮುಂದಿನ ಎಲ್ಲಾ ಪಂದ್ಯಗಳಲ್ಲಿ ಕೂಡ ಗೆದ್ದರೆ ಮಾತ್ರವೇ ಟೂರ್ನಿಯಲ್ಲಿ ಹೈದರಾಬಾದ್ ಮುಂದುವರಿಯಲು ಸಾಧ್ಯಯವಾಗಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಸ್ಕ್ವಾಡ್

ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್ / ನಾಯಕ), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ,ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಸ್ಟೀವನ್ ಸ್ಮಿತ್, ಸ್ಯಾಮ್ ಬಿಲ್ಲಿಂಗ್ಸ್, ಲುಕ್ಮನ್ ಮೇರಿವಾಲಾ, ಟಾಮ್ ಕುರ್ರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ರಿಪಾಲ್ ಪಟೇಲ್

ಮತ್ತದೇ ಕಥೆ; ರಾಜಸ್ಥಾನ್ ವಿರುದ್ಧದ ಸೋಲಿಗೆ ಕಾರಣ ಯಾರೆಂಬುದನ್ನು ತಿಳಿಸಿದ ಕೆಎಲ್ ರಾಹುಲ್ಮತ್ತದೇ ಕಥೆ; ರಾಜಸ್ಥಾನ್ ವಿರುದ್ಧದ ಸೋಲಿಗೆ ಕಾರಣ ಯಾರೆಂಬುದನ್ನು ತಿಳಿಸಿದ ಕೆಎಲ್ ರಾಹುಲ್

ಸನ್ ರೈಸರ್ಸ್ ಹೈದರಾಬಾದ್ (ಸಂಪೂರ್ಣ ಸ್ಕ್ವಾಡ್

ಟೀಮ್ ಇಂಡಿಯಾದಲ್ಲಿ ರಿಷಬ್ ಪಂತ್ ಜವಾಬ್ದಾರಿ ಬಗ್ಗೆ ಹೇಳಿದ ರಿಕಿ ಪಾಂಟಿಂಗ್ | Oneindia Kannada

ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಜೇಸನ್ ಹೋಲ್ಡರ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಸಂದೀಪ್ ಶರ್ಮಾ, ಶ್ರೀವತ್ಸ ಗೋಸ್ವಾಮಿ, ಸಿದ್ದಾರ್ಥ್ ಕೌಲ್, ಕೇದರ್ ಜಾಧವ್, ಮೊಹಮ್ಮದ್ ನಬಿ , ಜೇಸನ್ ರಾಯ್,ವಿರಾಟ್ ಸಿಂಗ್, ಶಹಬಾಜ್ ನದೀಮ್, ಬೆಸಿಲ್ ಥಂಪಿ, ಜಗದೀಶ ಸುಚಿತ್, ಖಲೀಲ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಅಭಿಷೇಕ್ ಶರ್ಮಾ, ಪ್ರಿಯಂ ಗರ್ಗ್, ಶೆರ್ಫೇನ್ ರುದರ್‌ಫೋರ್ಡ್

Story first published: Wednesday, September 22, 2021, 17:51 [IST]
Other articles published on Sep 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X