ವಿಡಿಯೋ: ದುಬೈನಲ್ಲಿ ಪಂಜಾಬ್ ಹುಡುಗರ ಮುಂದೆ ಕನ್ನಡದ ಎವರ್‌ಗ್ರೀನ್ ಹಾಡು ಹಾಡಿದ ಕುಂಬ್ಳೆ

ಕ್ರಿಕೆಟ್ ಜಗತ್ತು ಕಂಡ ಖ್ಯಾತ ಕ್ರಿಕೆಟಿಗ, ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ ಕನ್ನಡದ ಕುರಿತಾಗಿ ಈಗಾಗಲೇ ಸಾಕಷ್ಟು ಬಾರಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಅನೇಕ ಬಾರಿ ತಮ್ಮ ಸಹ ಆಟಗಾರನಾದ ಮತ್ತೊರ್ವ ಕನ್ನಡಿಗ ರಾಹುಲ್ ದ್ರಾವಿಡ್ ಜೊತೆ ಪಂದ್ಯದ ವೇಳೆ ಕನ್ನಡದಲ್ಲಿಯೇ ಮಾತನಾಡುವುದರ ಮೂಲಕ ಕನ್ನಡಿಗರ ಮನಸ್ಸನ್ನು ಗೆಲ್ಲುತ್ತಿದ್ದ ಅನಿಲ್ ಕುಂಬ್ಳೆ ಇದೀಗ ಮತ್ತೊಮ್ಮೆ ಕನ್ನಡಿಗರ ಹೃದಯವನ್ನು ಗೆದ್ದಿದ್ದಾರೆ.

ರೋಹಿತ್ ಶರ್ಮಾ ನಾಯಕನಾಗಿದ್ರೆ ಇಷ್ಟೆಲ್ಲ ಆಗ್ತಾ ಇರಲಿಲ್ಲ; ಅವಕಾಶ ಸಿಗದ ಕುಲ್‌ದೀಪ್ ಯಾದವ್ ಆಕ್ರೋಶರೋಹಿತ್ ಶರ್ಮಾ ನಾಯಕನಾಗಿದ್ರೆ ಇಷ್ಟೆಲ್ಲ ಆಗ್ತಾ ಇರಲಿಲ್ಲ; ಅವಕಾಶ ಸಿಗದ ಕುಲ್‌ದೀಪ್ ಯಾದವ್ ಆಕ್ರೋಶ

ಹೌದು, ಸೆಪ್ಟೆಂಬರ್ 19ರಿಂದ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ಎಲ್ಲಾ ತಂಡದ ಆಟಗಾರರು ಈಗಾಗಲೇ ದುಬೈ ತಲುಪಿದ್ದು ತರಬೇತಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಹೀಗೆ ಕ್ರಿಕೆಟ್ ತರಬೇತಿ ನೀಡುವುದರ ನಡುವೆ ಆಟಗಾರರಿಗೆ ಮನರಂಜನೆಯನ್ನು ನೀಡುವ ಉದ್ದೇಶದಿಂದ ಪಂಜಾಬ್ ಕಿಂಗ್ಸ್ ಸಂಜೆ ಸಮಯದ ಮನರಂಜನಾ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಹೀಗೆ ದುಬೈ ನೆಲದಲ್ಲಿ ಮನರಂಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಂಜಾಬ್ ಕಿಂಗ್ಸ್ ತಂಡದ ಹೆಡ್ ಕೋಚ್ ಅನಿಲ್ ಕುಂಬ್ಳೆ ಕನ್ನಡದ ಖ್ಯಾತ ಚಲನಚಿತ್ರ ಗೀತೆಯಾದ 'ಮಾಮರವೆಲ್ಲೋ ಕೋಗಿಲೆಯೆಲ್ಲೋ' ಹಾಡನ್ನು ಹಾಡುವುದರ ಮೂಲಕ ತಮ್ಮ ತಂಡದ ಆಟಗಾರರಿಗೆ ಮನರಂಜನೆಯನ್ನು ನೀಡಿದ್ದಾರೆ. ಅನಿಲ್ ಕುಂಬ್ಳೆ ಕನ್ನಡದ ಖ್ಯಾತ ಗೀತೆಯನ್ನು ಹಾಡಿರುವ ವಿಡಿಯೋ ಮುಂದೆ ಇದೆ ನೋಡಿ..

https://www.youtube.com/watch?v=IZ0mLifu0s8

ಅನಿಲ್ ಕುಂಬ್ಳೆ ಮಾಮರವೆಲ್ಲೋ ಕೋಗಿಲೆಯೆಲ್ಲೋ ಹಾಡನ್ನು ಹಾಡಿರುವ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ವ್ಯಕ್ತಿಯೋರ್ವರು ಅಪ್ ಲೋಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದರಲ್ಲಿಯೂ ಅನಿಲ್ ಕುಂಬ್ಳೆ ಹಾಡಿದ ಕನ್ನಡ ಹಾಡನ್ನು ಕೇಳಿದ ಕನ್ನಡಿಗರು ಕುಂಬ್ಳೆ ಕನ್ನಡ ಪ್ರೀತಿಗೆ ಮನಸೋತಿದ್ದಾರೆ.

ಇನ್ನು ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಪಂದ್ಯವೊಂದು ಮುಗಿದ ನಂತರ ಸುದ್ದಿಗೋಷ್ಠಿಯೊಂದರಲ್ಲಿ ಪಾಲ್ಗೊಂಡಿದ್ದ ಅನಿಲ್ ಕುಂಬ್ಳೆ ಪತ್ರಕರ್ತರು ಇಂಗ್ಲಿಷ್ ಭಾಷೆಯಲ್ಲಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಕೂಡ ಕನ್ನಡದಲ್ಲಿಯೇ ಉತ್ತರಿಸುವುದರ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದರು.

ಐಪಿಎಲ್ ಪುನರಾರಂಭ ಯಾವಾಗ?

ಐಪಿಎಲ್ ಪುನರಾರಂಭ ಯಾವಾಗ?

ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 29 ಪಂದ್ಯಗಳು ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿದ್ದವು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಕೂಡಲೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತೀರ್ಮಾನವನ್ನು ಕೈಗೊಂಡಿತ್ತು.

ಹೀಗೆ ಮಧ್ಯಂತರದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ನಿರ್ಧಾರವನ್ನು ಮಾಡಿತ್ತು. ಬಿಸಿಸಿಐ ನಿರ್ಧರಿಸಿದಂತೆಯೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಾಕಿ ಉಳಿದಿರುವ 31 ಪಂದ್ಯಗಳು ಇದೇ ಸೆಪ್ಟೆಂಬರ್ 19ರಿಂದ ಮುಂದುವರೆಯಲಿವೆ.

ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಸ್ಥಾನ

ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಸ್ಥಾನ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲಾರ್ಧದಲ್ಲಿ 8 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿ, 5 ಪಂದ್ಯಗಳಲ್ಲಿ ಸೋತು, 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದೆ.

IPL ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಸಕ್ಸಸ್ ವಿರಾಟ್ ಮತ್ತು ABD ಗೆ‌ ಇನ್ನೂ ಸಿಕ್ಕಿಲ್ಲ | Oneindia Kannada
ಐಪಿಎಲ್ ದ್ವಿತೀಯಾರ್ಧದಲ್ಲಿ ಪಂಜಾಬ್ ಕಿಂಗ್ಸ್ ಮೊದಲನೇ ಸೆಣಸಾಟ

ಐಪಿಎಲ್ ದ್ವಿತೀಯಾರ್ಧದಲ್ಲಿ ಪಂಜಾಬ್ ಕಿಂಗ್ಸ್ ಮೊದಲನೇ ಸೆಣಸಾಟ

ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧ ಆರಂಭವಾಗಲಿದ್ದು, ಪಂಜಾಬ್ ಕಿಂಗ್ಸ್ ದ್ವಿತೀಯಾರ್ಧದಲ್ಲಿ ತನ್ನ ಮೊದಲನೇ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೆಪ್ಟೆಂಬರ್ 21ರ ಮಂಗಳವಾರದಂದು ಆಡಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, September 14, 2021, 19:56 [IST]
Other articles published on Sep 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X