ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐದು ವಿಕೆಟ್ ಪಡೆದು ಕುಂಬ್ಳೆ ಜೊತೆ ವಿಶೇಷ ಪಟ್ಟಿ ಸೇರಿದ ಅರ್ಷದೀಪ್ ಸಿಂಗ್

IPL 2021: Arshdeep Singh joins Punjab coach Anil Kumble in elite list after 5-wicket haul

ಐಪಿಎಲ್‌ನ 14ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಯುವ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಅರ್ಷದೀಪ್ ಸಿಂಗ್ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಈ ಸಾಧನೆ ಮಾಡಿದ ಕೇವಲ 2ನೇ ಬೌಲರ್ ಎನಿಸಿದ್ದಾರೆ ಅರ್ಷದೀಪ್ ಸಿಂಗ್. ಮೊದಲ ಸ್ಥಾನದಲ್ಲಿ ಪಂಜಾಬ್ ತಂಡದ ಕೋಚ್ ಆಗಿರುವ ಅನಿಲ್ ಕುಂಬ್ಳೆ ಇದ್ದಾರೆ. ಅರ್ಷದೀಪ್ ಮಂಗಳವಾರ ಪಂಜಾಬ್ ಕಿಂಗ್ಸ್ ಪರವಾಗಿ ರಾಜಸ್ತಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಮೊದಲ 5 ವಿಕೆಟ್‌ಗಳ ಗೊಂಚಲು ಪಡೆದುಕೊಂಡರು. ಈ ಪಂದ್ಯದಲ್ಲಿ ಅರ್ಷದೀಪ್ 5/32 ವಿಕೆಟ್ ಪಡೆದಿದ್ದಾರೆ.

ಐಪಿಎಲ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದ 3ನೇ ಕಿರಿಯ ಬೌಲರ್ ಎನಿಸಿದ್ದಾರೆ ಅರ್ಷದೀಪ್. ಜಯದೇವ್ ಉನದ್ಕಟ್ ಮತ್ತು ಅಲ್ಜರ್ರಿ ಜೋಸೆಫ್ 5 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿದ್ದಾರೆ. ಇನ್ನು ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ನಾಲ್ಕನೇ ಅಲ್‌ಕ್ಯಾಪ್ಡ್ ಆಟಗಾರ ಎನಿಸಿದ್ದಾರೆ.

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪಡೆ ಅದ್ಭುತ ಆರಂಭವನ್ನು ಪಡೆದುಕೊಂಡಿತು. ಲೂಯಿಸ್ ಹಾಗೂ ಜೈಸ್ವಾಲ್ ಜೋಡಿ ಮೊದಲ ವಿಕೆಟ್‌ಗೆ ಸ್ಪೋಟಕ 54 ರನ್‌ಗಳ ಕೊಡುಗೆ ನೀಡಿದ್ದಾರೆ. ಯುವ ಆಟಗಾರ ಯಶಸ್ವೀ ಜೈಸ್ವಾಲ್ ಈ ಪಂದ್ಯದಲ್ಲಿ 36 ಎಸೆತಗಳಲ್ಲಿ 49 ರನ್‌ ಬಾರಿಸುವ ಮೂಲಕ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಂತರ ಮಹಿಪಾಲ್ ಲೋಮ್ರರ್ ಕೇವಲ 17 ಎಸೆತಗಳಲ್ಲಿ 43 ರನ್ ಬಾರಿಸಿ ಮಿಂಚಿದ್ದಾರೆ. ಒಟ್ಟಾರೆಯಾಗಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ ನಿಗದಿತ 20 ಓವರ್‌ಗಳಲ್ಲಿ 185 ರನ್‌ ಬಾರಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ್ ರಾಯಲ್ಸ್ ಪರವಾಗಿ ಎವಿನ್ ಲೂಯಿಸ್ 36, ಯಶಸ್ವಿ ಜೈಸ್ವಾಲ್ 49, ಸಂಜು ಸ್ಯಾಮ್ಸನ್ 4, ಲಿಯಾಮ್ ಲಿವಿಂಗ್‌ಸ್ಟೋನ್ 25, ರಿಯಾನ್ ಪರಾಗ್ 4, ಮಹಿಪಾಲ್ ಲೋಮ್ರರ್ 43, ರಾಹುಲ್ ತೆವಾಟಿಯಾ 2, ಕ್ರಿಸ್ ಮೋರಿಸ್ 5, ಚೇತನ್ ಸಕಾರಿಯಾ 7, ಕಾರ್ತಿಕ್ ತ್ಯಾಗಿ 1 ರನ್‌ನೊಂದಿಗೆ 20 ಓವರ್‌ ಎಲ್ಲಾ ವಿಕೆಟ್ ಕಳೆದು 185 ರನ್ ಬಾರಿಸಿತ್ತು.

108 ವಾಹನದಲ್ಲೇ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ತಾಯಿ | Oneindia Kannada

ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್‌ನಿಂದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಲಭಿಸಿತು. ಕೆಎಲ್ ರಾಹುಲ್ 49 (33), ಮಯಾಂಕ್ ಅಗರ್ವಾಲ್ (43), ಐಡನ್ ಮಾರ್ಕ್ರಮ್ 26, ನಿಕೋಲಸ್ ಪೂರನ್ 32 ರನ್‌ನೊಂದಿಗೆ 20 ಓವರ್‌ಗೆ 4 ವಿಕೆಟ್‌ ಕಳೆದು 183 ರನ್ ಗಳಿಸಿ ಶರಣಾಯಿತು. ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್‌ನಲ್ಲಿ ಪಂಜಾಬ್‌ನ ಅರ್ಷದೀಪ್ ಸಿಂಗ್ 32 ರನ್‌ಗೆ 5 ವಿಕೆಟ್, ಮೊಹಮ್ಮದ್ ಶಮಿ 3, ಇಶಾನ್ ಪೊರೆಲ್ 1, ಹರ್ಪ್ರೀತ್‌ ಬ್ರಾರ್ 1 ವಿಕೆಟ್ ಪಡೆದರೆ, ಪಂಜಾಬ್ ಇನ್ನಿಂಗ್ಸ್‌ನಲ್ಲಿ ರಾಜಸ್ಥಾನ್‌ನ ಚೇತನ್ ಸಕಾರಿಯಾ 1, ಕಾರ್ತಿಕ್ ತ್ಯಾಗಿ 2, ರಾಹುಲ್ ತೆವಾಟಿಯಾ 1 ವಿಕೆಟ್‌ ಪಡೆದು ಗಮನ ಸೆಳೆದರು. ಈ ಮೂಲಕ ಪಂಜಾಬ್ ಕಿಂಗ್ಸ್ ಈ ಪಂದ್ಯದಲ್ಇ ರೋಚಕ ಗೆಲುವು ಸಾಧಿಸಿದೆ.

Story first published: Wednesday, September 22, 2021, 10:06 [IST]
Other articles published on Sep 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X