ಐಪಿಎಲ್ 2021: ವಾರ್ನರ್, ಸ್ಮಿತ್ ಸಹಿತ ಆಸಿಸ್ ಆಟಗಾರರು ಶೀಘ್ರ ತವರಿಗೆ ವಾಪಾಸ್ ಸಾಧ್ಯತೆ: ವರದಿ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಗೆ ಮತ್ತಷ್ಟು ಹಿನ್ನಡೆಯುಂಟಾಗುವ ಸಾಧ್ಯತೆಯಿದೆ. ಈಗಾಗಲೇ ತವರಿಗಡ ವಾಪಾಸಾಗಿರುವ ಆಸಿಸ್ ಕ್ರಿಕೆಟಿಗರ ನಂತರ ಮತ್ತಷ್ಟು ಸ್ಟಾರ್ ಆಟಗಾರರು ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಸಹಿತ ಪ್ರಮುಖ ಕ್ರಿಕೆಟಿಗರು 14ನೇ ಆವೃತ್ತಿಯ ಐಪಿಎಲ್ ತೊರೆಯುವ ಸಾಧ್ಯತೆಯಿದೆ. ಭಾರತದಿಂದ ಆಸ್ಟ್ರೇಲಿಯಾಗೆ ಪ್ರಯಾಣಿಸುವ ಎಲ್ಲಾ ವಿಮಾನಗಳನ್ನು ಸಂಪೂರ್ಣ ನಿರ್ಬಂಧಿಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಈ ನಿರ್ಧಾರಗಳನ್ನು ಆಸಿಸ್ ಕ್ರಿಕೆಟಿಗರು ತೆಗೆದುಕೊಳ್ಳುವ ಸಾಧ್ಯತೆಯಿದೆ.
ಆಸ್ಟ್ರೇಲಿಯಾ ಸರ್ಕಾರದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆಯನ್ನು ಮಂಗಳವಾರ ನಡೆಸಲಾಗಿದ್ದು ಇದರಲ್ಲಿ ಭಾರತದಿಂದ ಆಸ್ಟ್ರೇಲಿಯಾಗೆ ಪ್ರಯಾಣಿಸುವ ವಿಮಾನಗಳನ್ನು ನಿರ್ಬಂಧಿಸುವಂತಾ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದು ಆಸಿಸ್ ಕ್ರಿಕೆಟಿಗರು ತವರಿಗೆ ಶೀಘ್ರವೇ ವಾಪಾಸಾಗಲು ಕಾರಣವಾಗಬಹುದು ಎನ್ನಲಾಗಿದೆ.
ಆಸ್ಟ್ರೇಲಿಯಾದ ಮಾಧ್ಯಮ 9 ನ್ಯೂಸ್ ಈ ಬಗ್ಗೆ ವರದಿ ಮಾಡಿದೆ. "ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಸಹಿತ ಆಸ್ಟ್ರೇಲಿಯಾದ ಕ್ರಿಕೆಟಿಗರು ಗಡಿಯನ್ನು ಮುಚ್ಚುವ ಮುನ್ನ ತವರಿಗೆ ಮರಳುವ ಸಾಧ್ಯತೆಯಿದೆ" ಎಂದು ವರದಿಯಲ್ಲಿ ಹೇಳಿದೆ.
ಡೇವಿಡ್ ವಾರ್ನರ್ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದರೆ ಸ್ಟೀವ್ ಸ್ಮಿತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಆಸ್ಟ್ರೇಲಿಯಾ ಮೂಲದ ಕ್ರಿಕೆಟ್ ಆಟಗಾರರ ಜೊತೆಗೆ ಕಾಮೆಂಟೇಟರ್‌ಗಳು, ಕೋಚ್‌ಗಳು ಕೂಡ ಐಪಿಎಲ್‌ನ ಹಿನ್ನೆಲೆಯಲ್ಲಿ ಭಾರತದಲ್ಲಿ ಉಳಿದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications