For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 ಮುಂದೂಡಿಕೆ: ಮಾಲ್ಡೀವ್ಸ್‌ಗೆ ತೆರಳಲು ಆಸ್ಟ್ರೇಲಿಯಾ ಆಟಗಾರರು ಸಜ್ಜು

IPL 2021: Australian cricketers set to fly to the Maldives

ಐಪಿಎಲ್ ಬಯೋಬಬಲ್‌ನ ಒಳಗೆ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಳ್ಳಲು ಆರಂಭಿಸಿ ಹಿನ್ನೆಲೆಯಲ್ಲಿ ಐಪಿಎಲ್‌ಅನ್ನು ಮುಂದೂಡಲಾಗಿದೆ. ಹೀಗಾಗಿ ಆಸ್ಟ್ರೇಲಿಯಾಗೆ ತೆರಳಲು ನಿರ್ಬಂದವಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಮೂಲದ ಆಟಗಾರರು ಹಾಗೂ ಸಿಬ್ಬಂದಿಗಳು ಮಾಲ್ಡೀವ್ಸ್‌ಗೆ ತೆರಳುವ ಸಾಧ್ಯತೆ ದಟ್ಟವಾಗಿದೆ.

ಭಾರತದಲ್ಲಿ ಕೊರೊನಾ ವೈರಸ್ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಸರ್ಕಾರ್ ಭಾರತದಿಂದ ತೆರಳುವ ಎಲ್ಲಾ ನಾಗರೀಕ ವಿಮಾನಗಳಿಗೆ ನಿರ್ಬಂಧವನ್ನು ವಿಧಿಸಿದೆ. ಮೇ 15ರ ವರೆಗೆ ಈ ನಿಷೇಧ ಮುಂದುವರಿಯಲಿದ್ದು ಭಾರತದಲ್ಲಿರುವ ಆಸ್ಟ್ರೇಲಿಯಾ ಆಟಗಾರಿಗೆ ಇದು ಚಿಂತೆಗೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಮೂಲದ ಆಟಗಾರರು ಸದ್ಯಕ್ಕೆ ಮಾಲ್ಡೀವ್ಸ್ ಸುರಕ್ಷಿತ ತಾಣ ಎಂದು ನಿರ್ಧರಿಸಿದ್ದಾರೆ ಎನ್ನಲಾಗಿದ್ದು ಅಲ್ಲಿಗೆ ತೆರಳಲು ಸಜ್ಜಾಗಿದ್ದಾರೆ ಎಂಬ ಮಾಹಿತಿಗಳು ಸಜ್ಜಾಗಿದೆ. ಮಾಲ್ಡೀವ್ಸ್‌ನಲ್ಲಿ ಕಳೆದ ಎರಡು ವಾರಗಳ ಅಂತರದಲ್ಲಿ ಕೆಲವೇ ನೂರು ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಆಟಗಾರರು ಹಾಗೂ ಇತರ ಸಿಬ್ಬಂದಿಗಳು ಮಾಲ್ಡೀವ್ಸ್‌ಗೆ ಪ್ರಯಾಣಿಸುವ ಸಾಧ್ಯತೆಯಿದೆ.

ಸದ್ಯ ಆಸ್ಟ್ರೇಲಿಯಾ ಮೂಲದ ಕಾಮೆಂಟೇಟರ್ ಐಪಿಎಲ್ ಮುಂದೂಡುವ ಕೆಲವೇ ಗಂಟೆಗಳ ಮುನ್ನ ಭಾರತವನ್ನು ತೊರೆದು ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಈಗ ಉಳಿದ ಆಟಗಾರರು ಹಾಗೂ ಸಿಬ್ಬಂದಿಗಳು ಕೂಡ ಇದೇ ಹಾದಿ ಹಿಡಿಯುವ ಸಾಧ್ಯತೆಯಿದೆ. ಬಳಿಕ ಸರ್ಕಾರದ ತೀರ್ಮಾನ ಹಾಗೂ ಪರಿಸ್ಥಿತಿಗಳನ್ನು ನೋಡಿ ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆಯಿದೆ.

Story first published: Wednesday, May 5, 2021, 9:57 [IST]
Other articles published on May 5, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+