ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಯಾರು ಯಾವ ಪ್ರಶಸ್ತಿ ಗೆದ್ದಿದ್ದಾರೆ?; ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

IPL 2021 award winners: Here is the Complete list of who won what awards

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಅಕ್ಟೋಬರ್ 15ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಫೈನಲ್ ಪಂದ್ಯದ ಮೂಲಕ ಅಂತ್ಯಗೊಂಡಿದೆ. ಈ ಫೈನಲ್ ಪಂದ್ಯ ಅಕ್ಟೋಬರ್ 15ರ ಶುಕ್ರವಾರದಂದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.

'ನೀನು ಧೋನಿ ರೀತಿಯ ವಿಕೆಟ್ ಕೀಪರ್‌ ಅಲ್ಲ'; ರಿಷಭ್ ಪಂತ್‌ಗೆ ಕುಟುಕಿದ ವಿರಾಟ್ ಕೊಹ್ಲಿ!'ನೀನು ಧೋನಿ ರೀತಿಯ ವಿಕೆಟ್ ಕೀಪರ್‌ ಅಲ್ಲ'; ರಿಷಭ್ ಪಂತ್‌ಗೆ ಕುಟುಕಿದ ವಿರಾಟ್ ಕೊಹ್ಲಿ!

ಈ ಮಹತ್ವದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ ಮತ್ತು ಮೊಯಿನ್ ಅಲಿ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್‌ ಗಳಿಸಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್‌ಗಳ ಜಯ ಸಾಧಿಸುವುದರ ಮೂಲಕ ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ.

ಐಪಿಎಲ್ 2022: ರಿಷಭ್ ಪಂತ್ ಬದಲು ಈ ಆಟಗಾರ ಡೆಲ್ಲಿ ಕ್ಯಾಪಿಟಲ್ಸ್ ನಾಯಕನಾಗಬೇಕು: ಗಂಭೀರ್ಐಪಿಎಲ್ 2022: ರಿಷಭ್ ಪಂತ್ ಬದಲು ಈ ಆಟಗಾರ ಡೆಲ್ಲಿ ಕ್ಯಾಪಿಟಲ್ಸ್ ನಾಯಕನಾಗಬೇಕು: ಗಂಭೀರ್

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೆಲ ನೂತನ ಆಟಗಾರರು ತಮ್ಮ ಪ್ರತಿಭೆಯನ್ನು ಹೊರಹಾಕಿದರೆ, ಇನ್ನೂ ಕೆಲ ಅಂತರರಾಷ್ಟ್ರೀಯ ಕ್ರಿಕೆಟಿಗರು ಉತ್ತಮ ಫಾರ್ಮ್ ಕಂಡುಕೊಳ್ಳುವುದರ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಹಲವಾರು ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿಕೊಳ್ಳಲು ಸರಿಯಾದ ವೇದಿಕೆ ಎಂಬುದನ್ನು ಈ ಹಿಂದೆ ಸಾಕಷ್ಟು ಬಾರಿ ನಿರೂಪಿಸಿದೆ. ಈ ಮಾತು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಸಹ ಸಾಬೀತಾಗಿದ್ದು ವಿವಿಧ ತಂಡಗಳ ಹಲವಾರು ಯುವ ಕ್ರಿಕೆಟಿಗರು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ತಾವು ನೀಡಿದ ಉತ್ತಮ ಪ್ರದರ್ಶನಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದು, ಟೂರ್ನಿ ಮುಗಿದ ನಂತರ ಯಾವ ಆಟಗಾರರು ಯಾವ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಎಂಬುದರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ ನೋಡಿ.

ಅಧಿಕ ರನ್ ಬಾರಿಸಿದ ಮತ್ತು ಅಧಿಕ ವಿಕೆಟ್ ಪಡೆದ ಆಟಗಾರರು

ಅಧಿಕ ರನ್ ಬಾರಿಸಿದ ಮತ್ತು ಅಧಿಕ ವಿಕೆಟ್ ಪಡೆದ ಆಟಗಾರರು

ಐಪಿಎಲ್ ಟೂರ್ನಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಮತ್ತು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಿಗೆ ಪರ್ಪಲ್ ಕ್ಯಾಪ್ ನೀಡಿ ಗೌರವಿಸಲಾಗುತ್ತದೆ. ಇನ್ನು ಈ ಬಾರಿ ಈ ಗೌರವವನ್ನು ಪಡೆದುಕೊಂಡ ಆಟಗಾರರ ವಿವರ ಈ ಕೆಳಕಂಡಂತಿದೆ.

ಆರೆಂಜ್ ಕ್ಯಾಪ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳನ್ನಾಡಿದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ 635 ರನ್ ಬಾರಿಸುವುದರ ಮೂಲಕ ಆರೆಂಜ್ ಕ್ಯಾಪ್ ವಿಜೇತರಾಗಿದ್ದಾರೆ.

ಪರ್ಪಲ್ ಕ್ಯಾಪ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಆಟಗಾರ ಹರ್ಷಲ್ ಪಟೇಲ್ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 15 ಪಂದ್ಯಗಳನ್ನಾಡಿದ್ದು 32 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಪರ್ಪಲ್ ಕ್ಯಾಪ್ ವಿಜೇತರಾಗಿದ್ದಾರೆ.

ಟ್ರೋಫಿ ವಿಜೇತ ಮತ್ತು ರನ್ನರ್ ಅಪ್ ತಂಡಗಳು

ಟ್ರೋಫಿ ವಿಜೇತ ಮತ್ತು ರನ್ನರ್ ಅಪ್ ತಂಡಗಳು

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಟ್ರೋಫಿಯನ್ನು ಗೆದ್ದಿದ್ದರೆ, ಫೈನಲ್ ಪಂದ್ಯದಲ್ಲಿ ಸೋತ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರನ್ನರ್ ಅಪ್ ಆಗಿದೆ.

IPL ಮೆಗಾ ಹರಾಜಿನಲ್ಲಿ ಧೋನಿ ಉಳಿಸಿಕೊಳ್ಳಲು CSK ಮಾಸ್ಟರ್ ಪ್ಲಾನ್ | Oneindia Kannada
ಇನ್ನುಳಿದ ಪ್ರಶಸ್ತಿ ವಿಜೇತರ ಪಟ್ಟಿ

ಇನ್ನುಳಿದ ಪ್ರಶಸ್ತಿ ವಿಜೇತರ ಪಟ್ಟಿ


ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಹೊರತುಪಡಿಸಿ ಇನ್ನೂ ಹಲವಾರು ವಿಶೇಷ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

* ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್: ಋತುರಾಜ್ ಗಾಯಕ್ವಾಡ್ ( ಚೆನ್ನೈ ಸೂಪರ್ ಕಿಂಗ್ಸ್ )

* ಪರ್ಫೆಕ್ಟ್ ಕ್ಯಾಚ್ ಆಫ್ ದಿ ಸೀಸನ್: ರವಿ ಬಿಷ್ಣೋಯಿ ( ಪಂಜಾಬ್ ಕಿಂಗ್ಸ್ )

* ಗೇಮ್ ಚೇಂಜರ್ ಆಫ್ ದಿ ಸೀಸನ್: ಹರ್ಷಲ್ ಪಟೇಲ್ ( ರಾಯಲ್ ಚಾಲೆಂಜರ್ಸ್ ಬೆಂಗಳೂರು )

* ಪವರ್ ಪ್ಲೇಯರ್ ಆಫ್ ದಿ ಸೀಸನ್: ವೆಂಕಟೇಶ್ ಐಯ್ಯರ್ ( ಕೋಲ್ಕತಾ ನೈಟ್ ರೈಡರ್ಸ್ )

* ಮೋಸ್ಟ್ ವ್ಯಾಲ್ಯುಯೆಬಲ್ ಪ್ಲೇಯರ್: ಹರ್ಷಲ್ ಪಟೇಲ್ ( ರಾಯಲ್ ಚಾಲೆಂಜರ್ಸ್ ಬೆಂಗಳೂರು )

* ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಶಿಮ್ರಾನ್ ಹೆಟ್ಮಾಯೆರ್ - 168 ಸ್ಟ್ರೈಕ್ ರೇಟ್ ( ಡೆಲ್ಲಿ ಕ್ಯಾಪಿಟಲ್ಸ್ )

* ಫೇರ್ ಪ್ಲೆ ಅವಾರ್ಡ್: ರಾಜಸ್ಥಾನ್ ರಾಯಲ್ಸ್

Story first published: Saturday, October 16, 2021, 16:36 [IST]
Other articles published on Oct 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X