ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ದಾಖಲೆಗಳು: ಟಾಪ್ 5 ವೇಗದ ಶತಕವೀರರ ಪಟ್ಟಿ

IPL 2021: Batsmen With Fastest Centuries In The Tournament

ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ ಒಟ್ಟು 62 ಶತಕಗಳು 36 ಬ್ಯಾಟ್ಸ್‌ಮನ್‌ಗಳಿಂದ ಬಂದಿವೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದ ವರ್ಷದಲ್ಲೇ ( 2008) ಕೋಲ್ಕತ್ತ ನೈಟ್ ರೈಡರ್ಸ್ ಪರ ಆಡುತ್ತಿದ್ದ ಬ್ರೆಂಡನ್ ಮೆಕಲಮ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶತಕ ಬಾರಿಸಿದ್ದರು. ಬ್ರೆಂಡನ್ ಮೆಕಲಮ್ ಬಾರಿಸಿದ ಈ ಶತಕವೇ ಐಪಿಎಲ್ ಟೂರ್ನಿಯ ಚೊಚ್ಚಲ ಶತಕ. ಇದಾದ ಬಳಿಕ ಹಲವಾರು ಬ್ಯಾಟ್ಸ್‌ಮನ್‌ಗಳು ಐಪಿಎಲ್ ಟೂರ್ನಿಯಲ್ಲಿ ಶತಕ ಬಾರಿಸಿದ್ದು ಅತಿ ವೇಗವಾಗಿ ಶತಕ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿ ಈ ಇಲ್ಲಿದೆ ನೋಡಿ.

5. ಎಬಿ ಡಿವಿಲಿಯರ್ಸ್

2016ರ ಮೇ 14ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಎಬಿ ಡಿವಿಲಿಯರ್ಸ್ 43 ಎಸೆತಗಳಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶತಕವನ್ನು ಬಾರಿಸಿದ್ದರು.

4. ಆ್ಯಡಮ್ ಗಿಲ್ ಕ್ರಿಸ್ಟ್

2008ರ ಏಪ್ರಿಲ್ 27ರಂದು ಡೆಕ್ಕನ್ ಚಾರ್ಜರ್ಸ್ ಪರ ಆ್ಯಡಮ್ ಗಿಲ್ ಕ್ರಿಸ್ಟ್ 42 ಎಸೆತಗಳಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮುಂಬೈನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ಶತಕವನ್ನು ಬಾರಿಸಿದ್ದರು.

3. ಡೇವಿಡ್ ಮಿಲ್ಲರ್

2013ರ ಮೇ 6ರಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಡೇವಿಡ್ ಮಿಲ್ಲರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಬಿಂದ್ರಾ ಕ್ರೀಡಾಂಗಣದಲ್ಲಿ 38 ಎಸೆತಗಳಲ್ಲಿ ಶತಕ ಬಾರಿಸಿದ್ದರು.

2. ಯೂಸುಫ್ ಪಠಾಣ್

2010ರ ಮಾರ್ಚ್ 13ರಂದು ರಾಜಸ್ಥಾನ್ ರಾಯಲ್ಸ್ ತಂಡದ ಪರ ಯೂಸುಫ್ ಪಠಾಣ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 37 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು.

1. ಕ್ರಿಸ್ ಗೇಲ್

ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ. 2013ರ ಏಪ್ರಿಲ್ 23ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕ್ರಿಸ್ ಗೇಲ್ ಪುಣೆ ವಾರಿಯರ್ಸ್ ವಿರುದ್ಧ ಕೇವಲ 30 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು. ಆ ಪಂದ್ಯದಲ್ಲಿ ಕ್ರಿಸ್ ಗೇಲ್ ಅಜೇಯ 175 ರನ್ ಬಾರಿಸಿ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

Story first published: Wednesday, March 31, 2021, 13:47 [IST]
Other articles published on Mar 31, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X