ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮ್ಯಾಕ್ಸ್‌ವೆಲ್ ಮೇಲೆ ಕೊಹ್ಲಿ ಬೀರಿದ ಪರಿಣಾಮವನ್ನು ವಿವರಿಸಿದ ಬ್ರೇಟ್ ಲೀ

IPL 2021: Brett Lee says Virat Kohli a great asset for Glenn Maxwell at RCB

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಿಂಚುತ್ತಿದ್ದರೂ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್‌ಗೆ ಬಂದಾಗ ಪ್ರತಿ ಬಾರಿಯೂ ನೀರಸ ಪ್ರದರ್ಶನವನ್ನೇ ನೀಡುತ್ತಿದ್ದರು. ಕಳೆದ ಆವೃತ್ತಿಯಲ್ಲಂತೂ ಪಂಜಾಬ್ ಪರವಾಗಿ ಆಘಾತಕಾರಿ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಆದರೆ ಈ ಬಾರಿ ಆರ್‌ಸಿಬಿ ಪಾಳಯವನ್ನು ಸೇರಿಕೊಂಡಿರುವ ಮ್ಯಾಕ್ಸ್‌ವೆಲ್ ಎರಡು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಮ್ಯಾಕ್ಸ್‌ವೆಲ್ ಯಶಸ್ಸಿನ ಹಿಂದೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

"ಈ ಆವೃತ್ತಿಯಲ್ಲಿ ಹೊಸ ತಂಡದ ಪರವಾಗಿ ಆಡುತ್ತಿರುವುದು ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ನಿಜವಾಗಿಯೂ ಸಹಾಯವಾಗುತ್ತಿದೆ. ಎರಡು ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡರೆ ವಿರಾಟ್ ಕೊಹ್ಲಿ ಜೊತೆಗೆ ಅದ್ಭುತವಾಗಿ ಆಡಿದ್ದಾರೆ. ಹಾಗಾಗಿ ವಿರಾಟ್ ಕೊಹ್ಲಿ ಮ್ಯಾಕ್ಸ್‌ವೆಲ್ ಪಾಲಿಗೆ ದೊಡ್ಡ ಶಕ್ತಿಯಾಗಿದ್ದಾರೆ ಎನಿಸುತ್ತದೆ" ಎಂದು ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್‌ಸಿಬಿ!ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್‌ಸಿಬಿ!

"ವಿರಾಟ್ ಕೊಹ್ಲಿ ಮ್ಯಾಕ್ಸ್‌ವೆಲ್ ಅವರ ಏಕಾಗ್ರತೆಯನ್ನು ಮರಳುವಂತೆ ಮಾಡಿದ್ದಾರೆ. ಅವರ ಎದೆ ಬಡಿತವನ್ನು ಕಡಿಮೆಯಾಗುವಂತೆ ಮಾಡಿದ್ದಾರೆ. ಮ್ಯಾಕ್ಸ್‌ವೆಲ್‌ಗೆ ಕೊಹ್ಲಿ ಅತ್ಯುತ್ತಮ ಜೊತೆಗಾರನಾಗಿದ್ದಾರೆ. ಹೀಗಾಗಿ ಟೂರ್ನಿಯಲ್ಲಿ ಅತ್ಯುತ್ತಮ ಮನಸ್ಥಿತಿಯನ್ನು ಅವರು ವ್ಯಕ್ತಪಡಿಸಿದ್ದು ಟೂರ್ನಿಯನ್ನು ಅದ್ಭುತವಾಗಿ ಆರಂಭಿಸಿದ್ದಾರೆ" ಎಂದು ಮ್ಯಾಕ್ಸ್‌ವೆಲ್ ಮೇಲೆ ವಿರಾಟ್ ಕೊಹ್ಲಿ ಬೀರಿದ ಪರಿಣಾಮವನ್ನು ಬ್ರೇಟ್ ಲೀ ವಿವರಿಸಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 41 ಎಸೆತಗಳಲ್ಲಿ 59 ರನ್‌ ಬಾರಿಸಿ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ನೀಡಿದರು. ಎಂಎ ಚಿದಂಬರಂ ಸ್ಟೇಡಿಂನ ಕಠಿಣವಾದ ಪಿಚ್‌ನಲ್ಲಿ ಆರ್‌ಸಿಬಿ ತಂಡದ ಪ್ರಮುಖ ಆಟಗಾರರು ಶೀಘ್ರವಾಗಿ ವಿಕೆಟ್ ಕಳೆದುಕೊಂಡರೂ ಮ್ಯಾಕ್ಸ್‌ವೆಲ್ ಇನ್ನಿಂಗ್ಸ್ ತಂಡವ ಮೊತ್ತವನ್ನು ಉತ್ತಮಗೊಳಿಸಲು ಕಾರಣವಾಗಿತ್ತು.

ಐಪಿಎಲ್ 2021: ಹೈದರಾಬಾದ್ ವಿರುದ್ಧ ಬೆಂಗಳೂರಿಗೆ ರೋಚಕ ಜಯಐಪಿಎಲ್ 2021: ಹೈದರಾಬಾದ್ ವಿರುದ್ಧ ಬೆಂಗಳೂರಿಗೆ ರೋಚಕ ಜಯ

ಗ್ಲೆನ್ ಮ್ಯಾಕ್ಸ್‌ವೆಲ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬಾರಿಸಿದ ಅರ್ಧ ಶತಕ ಕಳೆದ ನಾಲ್ಕು ಆವೃತ್ತಿಗಳಲ್ಲಿ ಬಂದ ಮೊದಲ 50+ ರನ್ ಆಗಿದೆ. ಇದು ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್‌ನಲ್ಲಿ ಬಾರಿಸಿದ ಕೇವಲ 7ನೇ ಅರ್ಧ ಶತಕವಾಗಿದೆ.

Story first published: Thursday, April 15, 2021, 10:13 [IST]
Other articles published on Apr 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X