ಐಪಿಎಲ್: ಪ್ಲೇಆಫ್ ಪ್ರವೇಶಿಸಲು ಉಳಿದ ಪಂದ್ಯಗಳಲ್ಲಿ ಯಾವ ತಂಡಗಳು ಎಷ್ಟು ಪಂದ್ಯ ಗೆಲ್ಲಲೇಬೇಕು?

ಕಳೆದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 29 ಪಂದ್ಯಗಳು ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣದಿಂದಾಗಿ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಲಾಗಿತ್ತು.
ಹೀಗೆ ಮುಂದೂಡಲ್ಪಟ್ಟಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿದೆ. ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸೆಪ್ಟೆಂಬರ್ 27ರ ಭಾನುವಾರದಂದು ಸಂಜೆ 7.30ಕ್ಕೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಮುಗಿದ ನಂತರ ಟೂರ್ನಿಯ ಒಟ್ಟು 39 ಪಂದ್ಯಗಳು ಸಂಪೂರ್ಣವಾಗಿ ಮುಗಿದಿವೆ.
ಹೀಗೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 39 ಪಂದ್ಯಗಳು ಮುಗಿದ ನಂತರ ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 16 ಅಂಕಗಳ ಜತೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ 16 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದೆ, 12 ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತೃತೀಯ ಸ್ಥಾನದಲ್ಲಿದ್ದು, ತಲಾ 8 ಅಂಕಗಳನ್ನು ಪಡೆದಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಕ್ರಮವಾಗಿ 4, 5, 6 ಮತ್ತು 7ನೇ ಸ್ಥಾನಗಳನ್ನು ಪಡೆದುಕೊಂಡಿವೆ ಹಾಗೂ ಕೇವಲ 2 ಅಂಕಗಳನ್ನು ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂತಿಮ ಸ್ಥಾನವನ್ನು ಪಡೆದಿದೆ.
ಹೀಗೆ ಅಂಕಪಟ್ಟಿಯಲ್ಲಿ (ಸೆಪ್ಟೆಂಬರ್ 27ರ ಸಮಯಕ್ಕೆ) ವಿವಿಧ ಸ್ಥಾನಗಳನ್ನು ಪಡೆದುಕೊಂಡಿರುವ ಎಲ್ಲಾ 8 ತಂಡಗಳು ಪ್ಲೇ ಆಫ್ ಪ್ರವೇಶಿಸಲು ಇನ್ನು ಎಷ್ಟು ಪಂದ್ಯಗಳಲ್ಲಿ ಜಯಗಳಿಸಬೇಕಿದೆ ಎನ್ನುವುದರ ಮಾಹಿತಿ ಮುಂದೆ ಇದೆ ಓದಿ..

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್
ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳೆರಡೂ ತಲಾ 10 ಪಂದ್ಯಗಳನ್ನಾಡಿದ್ದು ತಲಾ 8 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಹೀಗೆ ಈ ಎರಡೂ ತಂಡಗಳು ಸಹ 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಯಾವುದೇ ಕಾರಣಕ್ಕೂ ಪ್ಲೇ ಆಫ್ ಹಂತವನ್ನು ಪ್ರವೇಶಿಸುವಲ್ಲಿ ವಿಫಲವಾಗುವುದಿಲ್ಲ. ಹೀಗಾಗಿ ಈ ಎರಡೂ ತಂಡಗಳು ಸಹ ಪ್ಲೇ ಆಫ್ ಹಂತವನ್ನು ಪ್ರವೇಶಿಸುವುದು ಖಚಿತವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್
ಇತ್ತೀಚೆಗಷ್ಟೇ ಮುಂಬೈ ವಿರುದ್ಧ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಜಯ ಗಳಿಸಿದ್ದು, 4 ಪಂದ್ಯಗಳಲ್ಲಿ ಸೋಲುಂಡಿದೆ. ಈ ಮೂಲಕ 12 ಅಂಕಗಳನ್ನು ಪಡೆದುಕೊಂಡಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ಉಳಿದಿರುವ ತನ್ನ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಗೆಲ್ಲಲೇಬೇಕಿದೆ.
ಇನ್ನು ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಜಯಗಳಿಸಿ, 6 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ಅಂಕಗಳನ್ನು ಪಡೆದಿದ್ದು ಉತ್ತಮ ರನ್ ರೇಟ್ ಇರುವ ಕಾರಣ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದು ಈ ತಂಡ ಪ್ಲೇ ಆಫ್ ಸುತ್ತನ್ನು ಪ್ರವೇಶಿಸಬೇಕೆಂದರೆ ಉಳಿದಿರುವ ತನ್ನ 4 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಜಯವನ್ನು ಸಾಧಿಸಲೇಬೇಕಿದೆ.

ಉಳಿದ ತಂಡಗಳ ಕಥೆಯೇನು?
ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನಗಳನ್ನು ಅಲಂಕರಿಸಿರುವ ತಂಡಗಳನ್ನು ಹೊರತುಪಡಿಸಿ ಉಳಿದ 4 ತಂಡಗಳು ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ಎಷ್ಟು ಪಂದ್ಯಗಳನ್ನು ಗೆಲ್ಲಬೇಕಿದೆ ಎನ್ನುವುದರ ಮಾಹಿತಿ ಈ ಕೆಳಕಂಡಂತಿದೆ ನೋಡಿ..
* ಟೂರ್ನಿಯಲ್ಲಿ ಇದುವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 6 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ತಂಡ ಪ್ಲೇಆಫ್ ಸುತ್ತನ್ನು ಪ್ರವೇಶಿಸಬೇಕೆಂದರೆ ಉಳಿದಿರುವ ತನ್ನ 4 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆಲ್ಲಲೇಬೇಕಿದೆ.
* ಟೂರ್ನಿಯಲ್ಲಿ ಇದುವರೆಗೂ ಒಟ್ಟು 9 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ತಂಡ ಪ್ಲೇಆಫ್ ಸುತ್ತನ್ನು ಪ್ರವೇಶಿಸಬೇಕೆಂದರೆ ಉಳಿದಿರುವ ತನ್ನ 5 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆಲ್ಲಲೇಬೇಕಿದೆ.
* ಟೂರ್ನಿಯಲ್ಲಿ ಇದುವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ತಂಡ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 6 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ತಂಡ ಪ್ಲೇಆಫ್ ಸುತ್ತನ್ನು ಪ್ರವೇಶಿಸಬೇಕೆಂದರೆ ಉಳಿದಿರುವ ತನ್ನ 4 ಪಂದ್ಯಗಳಲ್ಲಿ 4 ಪಂದ್ಯಗಳನ್ನೂ ಗೆಲ್ಲಲೇಬೇಕಿದೆ.
* ಟೂರ್ನಿಯಲ್ಲಿ ಇದುವರೆಗೂ ಒಟ್ಟು 9 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, 8 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ತಂಡ ಪ್ಲೇಆಫ್ ಸುತ್ತನ್ನು ಪ್ರವೇಶಿಸಬೇಕೆಂದರೆ ಉಳಿದಿರುವ ತನ್ನ 5 ಪಂದ್ಯಗಳಲ್ಲಿ 5 ಪಂದ್ಯಗಳನ್ನೂ ಗೆದ್ದು ಪವಾಡ ಮಾಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications