ಐಪಿಎಲ್ 2021: ಪ್ಲೇಆಫ್ಸ್‌ಗೆ ಪ್ರವೇಶಿಸಿದ ಮೊದಲ ತಂಡ ಚೆನ್ನೈ ಸೂಪರ್ ಕಿಂಗ್ಸ್

ಶಾರ್ಜಾ: ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲಿ ಪ್ಲೇ ಆಫ್ಸ್‌ಗೆ ಪ್ರವೇಶಿಸಿದ ಮೊದಲ ತಂಡವಾಗಿ ಗಮನ ಸೆಳೆದಿದೆ. ಕಳೆದ ಸೀಸನ್‌ನಲ್ಲಿ ಲೀಗ್ ಹಂತದಲ್ಲೇ ಹೊರ ಬಿದ್ದು ಮುಖಭಂಗ ಅನುಭವಿಸಿದ್ದ ಸಿಎಸ್‌ಕೆ ಈ ಬಾರಿ ಭರ್ಜರಿ ಕಮ್‌ಬ್ಯಾಕ್ ಮಾಡಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ (ಸೆಪ್ಟೆಂಬರ್ 30) ಐಪಿಎಲ್ 44ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಸುಲಭ ಗೆಲುವು ದಾಖಲಿಸುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ಸ್‌ಗೆ ಅರ್ಹತೆ ಪಡೆದುಕೊಂಡಿದೆ. ಪಂದ್ಯದಲ್ಲಿ ಧೋನಿ ಸಿಕ್ಸ್ ಬಾರಿಸುವ ಮೂಲಕ ಗೆಲುವು ಸಾರಿದ್ದರು.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಎಸ್‌ಆರ್‌ಎಚ್, ಜೇಸನ್ ರಾಯ್ 2, ವೃದ್ಧಿಮಾನ್ ಸಹಾ 44, ಕೇನ್ ವಿಲಿಯಮ್ಸನ್ 11, ಪ್ರಿಯಂ ಗರ್ಗ್ 7, ಅಭಿಷೇಕ್ ಶರ್ಮಾ 18, ಅಬ್ದುಲ್ ಸಮದ್ 18, ಜೇಸನ್ ಹೋಲ್ಡರ್ 5, ರಶೀದ್ ಖಾನ್ 17, ಭುವನೇಶ್ವರ್ ಕುಮಾರ್ 2 ರನ್‌ನೊಂದಿಗೆ 20 ಓವರ್‌ಗೆ 7 ವಿಕೆಟ್ ಕಳೆದು 134 ರನ್ ಗಳಿಸಿತ್ತು.
ಗುರಿ ಬೆನ್ನಟ್ಟಿದ ಚೆನ್ನೈ, ರುತುರಾಜ್ ಗಾಯಕವಾಡ್ 45, ಫಾಫ್ ಡು ಪ್ಲೆಸಿಸ್ 41, ಮೊಯೀನ್ ಅಲಿ 17, ಅಂಬಾಟಿ ರಾಯುಡು 17, ಸುರೇಶ್ ರೈನಾ 2, ಎಂಎಸ್ ಧೋನಿ 14 ರನ್ನೊಂದಿಗೆ 19.4 ಓವರ್‌ಗೆ 4 ವಿಕೆಟ್ ಕಳೆದು 139 ರನ್ ಗಳಿಸಿ ಗೆಲುವನ್ನಾಚರಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications