ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲಲಿರುವ ತಂಡವನ್ನು ಹೆಸರಿಸಿದ ಕೆವಿನ್ ಪೀಟರ್ಸನ್

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಇದೇ ಸೆಪ್ಟೆಂಬರ್ 19ರಿಂದ ಕಳೆದ ಬಾರಿಯಂತೆ ಯುಎಇಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು ಟೂರ್ನಿಯ ಪುನರ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಷ್ಟೇ ಅಲ್ಲದೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಮೊದಲಾರ್ಧದಲ್ಲಿ ಭಾಗವಹಿಸಿದ್ದ ವಿವಿಧ ತಂಡಗಳ ಕೆಲ ಆಟಗಾರರು ದ್ವಿತೀಯಾರ್ಧದಲ್ಲಿ ನಡೆಯಲಿರುವ ಪಂದ್ಯಗಳಿಂದ ಹಿಂದೆ ಸರಿದಿದ್ದು ಅಂತಹ ಆಟಗಾರರ ಬದಲಾಗಿ ನೂತನ ಆಟಗಾರನನ್ನು ವಿವಿಧ ತಂಡಗಳು ಆಯ್ಕೆ ಮಾಡಿಕೊಂಡಿವೆ.
ಹೀಗಾಗಿ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧ ಮೊದಲನೇ ಭಾಗಕ್ಕಿಂತ ತುಂಬಾ ವಿಭಿನ್ನವಾಗಿರಲಿದ್ದು ಯಾವ ತಂಡಗಳು ಯಾವ ರೀತಿಯ ಪ್ರದರ್ಶನವನ್ನು ನೀಡಬಹುದು ಎಂಬುದನ್ನು ಹಿರಿಯ ಆಟಗಾರರು ಮತ್ತು ಕ್ರಿಕೆಟ್ ಪಂಡಿತರು ಊಹಿಸತೊಡಗಿದ್ದಾರೆ. ಇದೀಗ ಈ ಕುರಿತು ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಕೂಡ ಪ್ರತಿಕ್ರಿಯಿಸಿದ್ದು ಯುಎಇಯಲ್ಲಿ ಮುಂದುವರಿಯಲಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾವ ತಂಡಕ್ಕೆ ಟ್ರೋಫಿ ಗೆಲ್ಲುವ ಅವಕಾಶ ಹೆಚ್ಚಿದೆ ಎಂಬುದನ್ನು ಈ ಕೆಳಕಂಡಂತೆ ವ್ಯಕ್ತಪಡಿಸಿದ್ದಾರೆ.

ಈ ತಂಡಕ್ಕೆ ಮತ್ತೊಂದು ಐಪಿಎಲ್ ಟ್ರೋಫಿ ಗೆಲ್ಲುವ ಅವಕಾಶವಿದೆ ಎಂದ ಕೆವಿನ್ ಪೀಟರ್ಸನ್
ಇದೇ ತಿಂಗಳ 19ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಪುನಾರಂಭವಾಗುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಿಜೇತ ತಂಡವಾಗಿ ಹೊರ ಹೊಮ್ಮುವ ಸಾಧ್ಯತೆಗಳು ಹೆಚ್ಚಿವೆ ಎಂದು ಕೆವಿನ್ ಪೀಟರ್ಸನ್ ಭವಿಷ್ಯ ನುಡಿದಿದ್ದಾರೆ.

ಮೊದಲ ಭಾಗದಲ್ಲಿ ಚೆನ್ನೈ ಅತ್ಯದ್ಭುತ ಪ್ರದರ್ಶನ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದಾಗ ಚೆನ್ನೈ ತಂಡದಲ್ಲಿ ವಯಸ್ಸಾದ ಆಟಗಾರರೇ ಹೆಚ್ಚಿದ್ದಾರೆ, ಇಂತಹ ಆಟಗಾರರಿರುವ ಚೆನ್ನೈ ತಂಡ ಪಂದ್ಯಗಳನ್ನು ಗೆಲ್ಲುವುದು ಕಷ್ಟ ಎಂದು ಎಲ್ಲರೂ ಕಾಲೆಳೆದಿದ್ದರು. ಆದರೆ ಚೆನ್ನೈ ತಂಡದ ಆಟಗಾರರು ಆ ಟೀಕೆಗಳಿಗೆಲ್ಲಾ ಪಂದ್ಯಗಳನ್ನು ಗೆಲ್ಲುವುದರ ಮೂಲಕ ಉತ್ತರವನ್ನು ನೀಡಿ ಉತ್ತಮ ಪ್ರದರ್ಶನವನ್ನು ನೀಡಿದ್ದರು ಎಂದು ಕೆವಿನ್ ಪೀಟರ್ಸನ್ ಶ್ಲಾಘಿಸಿದ್ದಾರೆ. ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಮಾತ್ರ ಸೋಲುಂಡು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಉತ್ತಮ ಸ್ಥಾನದಲ್ಲಿದೆ.

ಈ 4 ತಿಂಗಳುಗಳ ಅಂತರ ಪ್ರಭಾವ ಬೀರಬಹುದು
ಇನ್ನೂ ಮುಂದುವರಿದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕುರಿತು ಮಾತನಾಡಿರುವ ಕೆವಿನ್ ಪೀಟರ್ಸನ್ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಉತ್ತಮ ಪ್ರದರ್ಶನವನ್ನು ನೀಡಿದ್ದರು, ಆದರೆ ಇದೀಗ 4 ತಿಂಗಳುಗಳ ನಂತರ ದ್ವಿತೀಯಾರ್ಧ ಪ್ರಾರಂಭವಾಗುತ್ತಿದ್ದು ಆಟಗಾರರು ಹಿಂದಿನ ರೀತಿಯ ಉತ್ತಮ ಪ್ರದರ್ಶನ ನೀಡಲಿದ್ದಾರಾ ಅಥವಾ ಈ 4 ತಿಂಗಳುಗಳ ಅಂತರ ಆಟಗಾರರ ಪ್ರದರ್ಶನದ ಮೇಲೆ ಪ್ರಭಾವವನ್ನು ಬೀರಲಿದೆಯಾ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಒಂದುವೇಳೆ ಮೊದಲಾರ್ಧದಲ್ಲಿ ನೀಡಿದ ಪ್ರದರ್ಶನದ ರೀತಿಯೇ ದ್ವಿತೀಯಾರ್ಧದಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಪ್ರದರ್ಶನವನ್ನು ನೀಡಿದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೆವಿನ್ ಪೀಟರ್ಸನ್ ಭವಿಷ್ಯ ನುಡಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications