ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 ಫೈನಲ್‌: ಚೆನ್ನೈನ ಈ ಬಲಿಷ್ಠ ತಂಡಕ್ಕೆ ಸೋಲುಣಿಸಿ ಗೆಲ್ಲುತ್ತಾ ಕೆಕೆಆರ್?

IPL 2021: Chennai Super Kings strongest playing XI prediction for the final match against KKR

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ.

ಟೂರ್ನಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸದೆಬಡಿಯುವ ಮೂಲಕ ನೇರವಾಗಿ ಫೈನಲ್ ಪಂದ್ಯವನ್ನು ಪ್ರವೇಶಿಸಿತು. ಇತ್ತ ಟೂರ್ನಿಯ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸಾಲು ಸಾಲು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಉತ್ತಮ ನೆಟ್ ರನ್ ರೇಟ್ ಪಡೆದುಕೊಂಡು ಪ್ಲೇ ಆಫ್ ಸುತ್ತಿಗೆ ಆರ್ಹತೆಯನ್ನು ಗಿಟ್ಟಿಸಿಕೊಂಡಿತು.

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಂಡಿತು. ಇನ್ನು ಕ್ವಾಲಿಫೈಯರ್ 2 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಿದ ಕೋಲ್ಕತಾ ನೈಟ್ ರೈಡರ್ಸ್ ರೋಚಕ ಜಯವನ್ನು ಸಾಧಿಸಿ ಫೈನಲ್ ಪಂದ್ಯಕ್ಕೆ ಪ್ರವೇಶವನ್ನು ಗಿಟ್ಟಿಸಿಕೊಂಡಿತು.

ಐಪಿಎಲ್: ಈ 2 ತಂಡಗಳಿಗೆ ನಾಯಕನಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ ಡೇವಿಡ್ ವಾರ್ನರ್!ಐಪಿಎಲ್: ಈ 2 ತಂಡಗಳಿಗೆ ನಾಯಕನಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ ಡೇವಿಡ್ ವಾರ್ನರ್!

ಹೀಗೆ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದಾಗ ಲೀಗ್ ಹಂತದ ಪಂದ್ಯಗಳನ್ನು ಸಾಲುಸಾಲಾಗಿ ಸೋತು ಮಂಕಾಗಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯ ಭಾಗ ಆರಂಭವಾದ ನಂತರ ಸಾಲು ಸಾಲು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಗೆಲ್ಲುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡು ಇದೀಗ ಫೈನಲ್‌ ಪಂದ್ಯವನ್ನು ಕೂಡ ಪ್ರವೇಶಿಸಿದೆ. ಅಂಕಪಟ್ಟಿಯಲ್ಲಿ ತನಗಿಂತ ಅಗ್ರಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಗೆ ಸೋಲುಣಿಸಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಫೈನಲ್ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೂ ಸೋಲುಣಿಸಲಿದೆಯಾ ಎಂಬ ಪ್ರಶ್ನೆ ಮೂಡಿದೆ.

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಸಾಕಷ್ಟು ಬಲಿಷ್ಠತೆಯಿಂದ ಕೂಡಿದ್ದು ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸುಲಭವಾಗಿ ಸೋಲೊಪ್ಪಿಕೊಳ್ಳುವುದಿಲ್ಲ ಎನ್ನಬಹುದು. ಇನ್ನು ಇಂದು ( ಅಕ್ಟೋಬರ್ 15 ) ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಟಗಾರರನ್ನೊಳಗೊಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಣಕ್ಕಿಳಿಯಲಿದ್ದು ಕೋಲ್ಕತಾ ನೈಟ್ ರೈಡರ್ಸ್ ತಂಡ ಈ ಬಲಿಷ್ಠ ತಂಡವನ್ನು ಸದೆಬಡಿಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾ

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮಹತ್ವದ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಲಿಷ್ಠ ಸಂಭಾವ್ಯ ಆಡುವ ಬಳಗ ಹೀಗಿದೆ: ಫಾಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಡ್ವೇನ್ ಬ್ರಾವೊ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್ ಮತ್ತು ಜೋಶ್ ಹೇಜಲ್ ವುಡ್

ರವಿ ಶಾಸ್ತ್ರಿ ಅವರ ಜಾಗದಲ್ಲಿ ಇನ್ಮುಂದೆ ರಾಹುಲ್ ದ್ರಾವಿಡ್ | Oneindia Kannada

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲು ಸಾಲು ಕಳಪೆ ಪ್ರದರ್ಶನವನ್ನು ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ ಸುರೇಶ್ ರೈನಾ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಫೈನಲ್ ಪಂದ್ಯದಲ್ಲಿಯೂ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಳ್ಳುವುದು ಅನುಮಾನವಾಗಿದೆ. ಕಳೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಸುರೇಶ್ ರೈನಾ ಬದಲು ಕಣಕ್ಕಿಳಿದಿದ್ದ ರಾಬಿನ್ ಉತ್ತಪ್ಪ ಆಕರ್ಷಕ ಅರ್ಧಶತಕ ಬಾರಿಸುವುದರ ಮೂಲಕ ತಂಡಕ್ಕೆ ನೆರವಾದರು. ಹೀಗಾಗಿ ಫೈನಲ್ ಪಂದ್ಯದಲ್ಲಿಯೂ ರಾಬಿನ್ ಉತ್ತಪ್ಪ ಅವರಿಗೆ ತಂಡದ ಆಡುವ ಬಳಗದಲ್ಲಿ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ.

Story first published: Friday, October 15, 2021, 15:30 [IST]
Other articles published on Oct 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X