Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ರಾಹುಲ್ ಅಬ್ಬರ, ಚೆನ್ನೈ ಸೂಪರ್ ಕಿಂಗ್ಸ್‌ ಸದೆಬಡಿದ ಪಂಜಾಬ್ ಕಿಂಗ್ಸ್

IPL 2021: Chennai Super Kings vs Punjab Kings, 53rd Match, Report

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಗುರುವಾರ (ಅಕ್ಟೋಬರ್ 7) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 6 ವಿಕೆಟ್ ಸುಲಭ ಜಯ ಗಳಿಸಿದೆ. ನಾಯಕ ಕೆಎಲ್ ರಾಹುಲ್ ಸ್ಫೋಟಕ ಅರ್ಧ ಶತಕದೊಂದಿಗೆ ಪಂಜಾಬ್ ಸುಲಭವಾಗಿ ಪಂದ್ಯ ಗೆದ್ದಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ ಸೂಪರ್ ಕಿಂಗ್ಸ್‌, ಋತುರಾಜ್ ಗಾಯಕ್ವಾಡ್‌ 12, ಫಾಫ್ ಡು ಪ್ಲೆಸಿಸ್ 76, ರಾಬಿನ್ ಉತ್ತಪ್ಪ 2, ಮೊಯೀನ್ ಅಲಿ 0, ಅಂಬಟಿ ರಾಯುಡು 4, ಎಂಎಸ್ ಧೋನಿ 12, ರವೀಂದ್ರ ಜಡೇಜಾ 15, ಡ್ವೇನ್ ಬ್ರಾವೋ 4 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 134 ರನ್ ಗಳಿಸಿತು.

ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, Live ಸ್ಕೋರ್‌

1
50858

ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್, ಕೆಎಲ್ ರಾಹುಲ್ 98 (42 ಎಸೆತ), ಮಯಾಂಕ್ ಅಗರ್ವಾಲ್ 12, ಐಡೆನ್ ಮಾರ್ಕ್ರಮ್ 13, ಸರ್ಫರಾಜ್ ಖಾನ್ 0, ಶಾರುಖ್ ಖಾನ್ 8, ಮೊಯಿಸ್ ಹೆನ್ರಿಕ್ಸ್ 3 ರನ್‌ನೊಂದಿಗೆ 13 ಓವರ್‌ಗೆ 4 ವಿಕೆಟ್‌ ಕಳೆದು 139 ರನ್ ಗಳಿಸಿ ಗೆಲುವನ್ನಾಚರಿಸಿತು.

ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್‌ನಲ್ಲಿ ಪಂಜಾಬ್‌ ಕಿಂಗ್ಸ್‌ನ ಮೊಹಮ್ಮದ್ ಶಮಿ 1, ಅರ್ಷದೀಪ್ ಸಿಂಗ್ 2, ಕ್ರಿಸ್ ಜೋರ್ಡನ್ 2, ರವಿ ಬಿಷ್ಣೋಯ್ 1 ವಿಕೆಟ್ ಪಡೆದರೆ, ಪಂಜಾಬ್ ಕಿಂಗ್ಸ್‌ ಇನ್ನಿಂಗ್ಸ್‌ನಲ್ಲಿ ಚೆನ್ನೈಯ ದೀಪಕ್ ಚಾಹರ್ 1, ಶಾರ್ದೂಲ್ ಠಾಕೂರ್ 3 ವಿಕೆಟ್‌ನಿಂದ ಗಮನ ಸೆಳೆದರು.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆಎಲ್ ರಾಹುಲ್ (ಸಿ & ವಿಕೆ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ಸರ್ಫರಾಜ್ ಖಾನ್, ಶಾರುಖ್ ಖಾನ್, ಮೊಯಿಸ್ ಹೆನ್ರಿಕ್ಸ್, ಕ್ರಿಸ್ ಜೋರ್ಡಾನ್, ಹರಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.
ಬೆಂಚ್: ಆದಿಲ್ ರಶೀದ್, ಮನ್ ದೀಪ್ ಸಿಂಗ್, ಜಲಜ್ ಸಕ್ಸೇನಾ, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಸೌರಭ್ ಕುಮಾರ್, ಇಶಾನ್ ಪೊರೆಲ್, ಉತ್ಕರ್ಷ ಸಿಂಗ್, ದರ್ಶನ್ ನಲ್ಕಂಡೆ, ಪ್ರಭಸಿಮ್ರಾನ್ ಸಿಂಗ್, ನಾಥನ್ ಎಲ್ಲಿಸ್, ಮುರುಗನ್ ಅಶ್ವಿನ್, ನಿಕೋಲಸ್ ಪೂರನ್.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ಸಿ & ವಿಕೆ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಝಲ್‌ವುಡ್.
ಬೆಂಚ್: ಸುರೇಶ್ ರೈನಾ, ಚೇತೇಶ್ವರ ಪೂಜಾರ, ಕರ್ಣ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಭಗತ್ ವರ್ಮ.

Story first published: Friday, October 8, 2021, 10:00 [IST]
Other articles published on Oct 8, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+