ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

CSK vs SRH: ಮುಂದುವರೆದ ಚೆನ್ನೈ ಗೆಲುವಿನ ನಾಗಾಲೋಟ, ಮತ್ತೆ ಮುಗ್ಗರಿಸಿದ ಹೈದರಾಬಾದ್

IPL 2021: Chennai Super Kings won against Sunrisers Hyderabad by 6 wickets

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 44ನೇ ಪಂದ್ಯ ಇಂದು ( ಸೆಪ್ಟೆಂಬರ್ 30 ) ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡುವುದರ ಮೂಲಕ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 135 ರನ್‌ಗಳ ಸಾಧಾರಣ ಗುರಿಯನ್ನು ನೀಡಿತ್ತು.

ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡಿದ ಈ ಅಲ್ಪ ಮೊತ್ತದ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿ ಬೆನ್ನತ್ತುವುದರ ಮೂಲಕ ಟೂರ್ನಿಯಲ್ಲಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಬಂದ ಋತುರಾಜ್ ಗಾಯಕ್ವಾಡ್ ಮತ್ತು ಫಾಫ್ ಡು ಪ್ಲೆಸಿಸ್ 75 ರನ್‌ಗಳ ಜತೆಯಾಟವನ್ನಾಡುವುದರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ರುತುರಾಜ್ ಗಾಯಕ್ವಾಡ್ 38 ಎಸೆತಗಳಲ್ಲಿ 45 ರನ್ ಬಾರಿಸಿ ಔಟ್ ಆದ ನಂತರ ಕಣಕ್ಕಿಳಿದ ಮೊಯಿನ್ ಅಲಿ 17, ಸುರೇಶ್ ರೈನಾ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದರ ಬೆನ್ನಲ್ಲೇ ಉತ್ತಮ ಆರಂಭ ನೀಡಿದ್ದ ಫಾಫ್ ಡು ಪ್ಲೆಸಿಸ್ ಕೂಡ 41 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಕಣಕ್ಕಿಳಿದ ಅಂಬಾಟಿ ರಾಯುಡು ಅಜೇಯ 17 ಮತ್ತು ಎಂಎಸ್ ಧೋನಿ ಅಜೇಯ 14 ರನ್ ಗಳಿಸುವುದರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೊನೆಯ ಘಟ್ಟದಲ್ಲಿ ಗೆಲುವಿನ ದಡ ಮುಟ್ಟಿತು. ಅಂತಿಮ ಓವರ್‌ನಲ್ಲಿ 3 ಎಸೆತಗಳಿಗೆ 2 ರನ್ ಬೇಕಾಗಿದ್ದಾಗ ಎಂಎಸ್ ಧೋನಿ ಸಿಕ್ಸರ್ ಬಾರಿಸುವುದರ ಮೂಲಕ ಚೆನ್ನೈ ಗೆಲುವಿನ ನಗೆ ಬೀರಿತು. 19.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ 139 ರನ್ ಗಳಿಸುವುದರ ಮೂಲಕ 6 ವಿಕೆಟ್‍ಗಳ ಜಯ ಸಾಧಿಸಿತು. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ತನ್ನ 9ನೇ ಗೆಲುವನ್ನು ಸಾಧಿಸುವುದರ ಮೂಲಕ 18 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಕೊಹ್ಲಿ ನಾಯಕತ್ವದ ವಿರುದ್ಧ ಅಶ್ವಿನ್ ಬಿಸಿಸಿಐಗೆ ದೂರು ನೀಡಿದ್ದು ನಿಜಾನಾ?; ಕೊನೆಗೂ ಮೌನ ಮುರಿದ ಅಶ್ವಿನ್ಕೊಹ್ಲಿ ನಾಯಕತ್ವದ ವಿರುದ್ಧ ಅಶ್ವಿನ್ ಬಿಸಿಸಿಐಗೆ ದೂರು ನೀಡಿದ್ದು ನಿಜಾನಾ?; ಕೊನೆಗೂ ಮೌನ ಮುರಿದ ಅಶ್ವಿನ್

ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಜೇಸನ್ ಹೋಲ್ಡರ್ 3 ಮತ್ತು ರಶೀದ್ ಖಾನ್ 1 ವಿಕೆಟ್ ಪಡೆದರು.

ಸನ್ ರೈಸರ್ಸ್ ತಂಡದ ಇನ್ನಿಂಗ್ಸ್‌:

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿತು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿ ವಿಶ್ವಾಸವನ್ನು ಮೂಡಿಸಿದ್ದ ಜೇಸನ್ ರಾಯ್ ಈ ಪಂದ್ಯದಲ್ಲಿ ಕೇವಲ 2 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ಮತ್ತೊಂದೆಡೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ವೃದ್ಧಿಮಾನ್ ಸಹಾ 44 ರನ್ ಗಳಿಸಿದರು, ನಾಯಕ ಕೇನ್ ವಿಲಿಯಮ್ಸನ್ 11 ರನ್ ಗಳಿಸಿ ಮತ್ತೊಮ್ಮೆ ವಿಫಲರಾದರು, ಇನ್ನುಳಿದಂತೆ ಪ್ರಿಯಮ್ ಗಾರ್ಗ್ 7, ಅಭಿಷೇಕ್ ಶರ್ಮಾ 18, ಅಬ್ದುಲ್ ಸಮದ್ 18, ಜೇಸನ್ ಹೋಲ್ಡರ್ 5, ಭುವನೇಶ್ವರ್ ಕುಮಾರ್ ಅಜೇಯ 2 ಮತ್ತು ರಶೀದ್ ಖಾನ್ ಅಜೇಯ 17 ರನ್ ಗಳಿಸುವುದರ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿ, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 135 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು.

ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!

ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್:

Dhoni ಪಂದ್ಯ ಮುಗಿದ ಬಳಿಕ Afghanistan ಆಟಗಾರನಿಗೆ ಕೊಟ್ಟಿದ್ದೇನು | Oneindia Kannada

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್‌ಗಳು ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್‌ಗಳ ಮೇಲೆ ಆರಂಭದಿಂದಲೂ ಒತ್ತಡವನ್ನು ಹೇರುತ್ತಾ ಬಂದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೋಶ್ ಹೇಜಲ್ ವುಡ್ 3 ವಿಕೆಟ್, ಡ್ವೇನ್ ಬ್ರಾವೊ 2 ವಿಕೆಟ್ ಮತ್ತು ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಅಲ್ಪ ಮೊತ್ತಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

Story first published: Friday, October 1, 2021, 10:26 [IST]
Other articles published on Oct 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X