ಐಪಿಎಲ್ 2021: ಮತ್ತೊಂದು ಅದ್ಭುತ ಪ್ರದರ್ಶನದ ಮೂಲಕ ಮಿಂಚಿದ ಚೇತನ್ ಸಕಾರಿಯಾ

ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ಚೇತನ್ ಸಕಾರಿಯಾ ಮತ್ತೊಂದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೇತನ್ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ 36 ರನ್ ನೀಡಿ 3 ವಿಕೆಟ್ ಪಡೆದುಕೊಂಡಿದ್ದಾರೆ. ಈ ಮೂಲಕ ಪಂದ್ಯದಲ್ಲಿ ಆರ್‌ಆರ್ ತಂಡದ ಪರವಾಗಿ ಯಶಸ್ವೀ ಬೌಲರ್ ಎನಿಸಿದ್ದಾರೆ.
ಈ ಪಂದ್ಯದಲ್ಲಿ ಚೇತನ್ ಪಡೆದ ಮೂರು ವಿಕೆಟ್‌ಗಳು ಕೂಡ ಅತ್ಯಂತ ಮಹತ್ವದ್ದಾಗಿತ್ತು ಎಂಬುದು ಮತ್ತೊಂದು ಗಮನಾರ್ಹ ಸಂಗತಿ. ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಕೂಡ ಸಕಾರಿಯಾ ಬಲೆಗೆ ಬಿದ್ದರು. ಇದಕ್ಕೂ ಮುನ್ನ ಸಕಾರಿಯಾ ಸುರೇಶ್ ರೈನಾ ಹಾಗೂ ಅಂಬಾಟಿ ರಾಯುಡು ಅವರನ್ನು ಕೂಡ ಫೆವಿಲಿಯನ್‌ಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದರು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್ ಪಡೆಯುವ ಮೂಲಕ ಚೇತನ್ ಸಕಾರಿಯಾ ಪರ್ಲ್ ಕ್ಯಾಪ್ ರೇಸ್‌ನಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ. ಟೂರ್ನಿಯ್ಲಲಿ ಆಡಿದ ಮೂರು ಪಂದ್ಯಗಳಲ್ಲಿ ಅವರು 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದಕ್ಕೂ ಮುನ್ನ ಸಕಾರಿಯಾ ಪಂಜಾಬ್ ಕಿಂಗ್ಸ ವಿರುದ್ಧ ಆಡಿದ ಚೊಚ್ಚಲ ಪಂದ್ಯದಲ್ಲಿ 31 ರನ್‌ಗಳಿಗೆ 3 ವಿಕೆಟ್ ಕಿತ್ತು ತಂಡಕ್ಕೆ ನೆರವಾಗಿದ್ದರು. ಆ ಪಂದ್ಯದಲ್ಲೂ ನಾಯಕ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ವಿಕೆಟ್‌ಅನ್ನು ಚೇತನ್ ತಮ್ಮ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications