Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಧೋನಿಯಿಂದ ಚೆನ್ನೈ ಜರ್ಸಿ ಸ್ವೀಕರಿಸಿದ ಚೇತೇಶ್ವರ್ ಪೂಜಾರ

IPL 2021: Cheteshwar Pujara receives CSK jersey from captain MS Dhoni

ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಚೇತೇಶ್ವರ್ ಪೂಜಾರಾ ಹೊಸ ಸೇರ್ಪಡೆಯಾಗಿದ್ದಾರೆ. ನಾಯಕ ಎಂಎಸ್ ಧೋನಿ ತಂಡದ ಜರ್ಸಿಯನ್ನು ಪೂಜಾರಾಗೆ ನೀಡುವ ಮೂಲಕ ಅಧಿಕೃತ ಕಿಟ್‌ಅನ್ನು ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೂಜಾರ ಅತ್ಯುತ್ತಮ ಆವೃತ್ತಿಗೆ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಟೀಮ್ ಇಂಡಿಯಾದ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿರುವ ಚೇತೇಶ್ವರ್ ಪೂಜಾರ ರಕ್ಷಣಾತ್ಮಕ ಆಟಕ್ಕೆ ಹೆಚ್ಚು ಖ್ಯಾತರಾಗಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಪೂಜಾರ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 50 ಲಕ್ಷ ಮೊತ್ತಕ್ಕೆ ತನ್ನ ತೆಕ್ಕೆಗೆ ಹಾಕಿಕೊಂಡಿತ್ತು.

"ಎಂಎಸ್ ಧೋನಿ ಅವರಿಂದ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕುಟುಂಬದಿಂದ ತಂಡದ ಅಧಿಕೃತ ಕಿಟ್ ಅನ್ನು ಸ್ವೀಕರಿಸಿರುವುದು ಸಾಕಷ್ಟು ಉತ್ಸುಕತೆ ಹಾಗೂ ಗೌರವದ ಸಂಗತಿಯಾಗಿದೆ. ಉತ್ತಮ ಆವೃತ್ತಿಗಾಗಿ ನಾನು ಎದುರು ನೋಡುತ್ತಿದ್ದೇನೆ" ಎಂದು ಟ್ವಿಟ್ಟರ್‌ನಲ್ಲಿ ಪೂಜಾರ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ತನ್ನ ಸಹ ಆಟಗಾರರೊಂದಿಗೆ ಚೇತೇಶ್ವರ್ ಪೂಜಾರ ನೆಟ್ ಅಭ್ಯಾಸದಲ್ಲಿ ತೊಡಗಿಕೊಂಡಿರುವ ವಿಡಿಯೋ ವೈರಲ್ ಆಗಿತ್ತು. ಈ ಅಭ್ಯಾಸದ ಸಂದರ್ಭದಲ್ಲಿ ಪೂಜಾರ ಸಾಕಷ್ಟು ದೊಡ್ಡ ಹೊಡೆತಗಳನ್ನು ಬಾರಿಸುವ ಮೂಲಕ ಆಕ್ರಮಣಕಾರಿಯಾಗಿ ಕಂಡುಬಂದಿದ್ದರು.

ಈ ಬಾರಿಯ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪೂಜಾರ ಅವರೊಂದಿಗೆ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಮೊಯೀನ್ ಅಲಿ, ಕರ್ನಾಟಕದ ಆಲ್‌ರೌಂಡರ್ ಕೆ ಗೌತಮ್, ತಮಿಳುನಾಡಿನ ಸಿ ಹರಿ ನಿಶಾಂತ್, ಹರಿಶಂಕರ್ ರೆಡ್ಡಿ ಮತ್ತು ಭಾಗತ್ ವರ್ಮ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿತ್ತು. ಜೊತೆಗೆ ಅನುಭವಿ ರಾಬಿನ್ ಉತ್ತಪ್ಪ ಅವರನ್ನು ಟ್ರೇಡ್ ಮೂಲಕ ತಂಡಕ್ಕೆ ಸೇರ್ಪಡೆಗೊಳಿಸಿದೆ.

Story first published: Thursday, April 8, 2021, 9:57 [IST]
Other articles published on Apr 8, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+