ಐಪಿಎಲ್‌ನಲ್ಲಿ ಮತ್ತೊಂದು ಬೃಹತ್ ದಾಖಲೆ ಬರೆದ ಕ್ರಿಸ್ ಗೇಲ್

ಪಂಜಾಬ್ ಕಿಂಗ್ಸ್ ತಂಡದ ಸ್ಪೋಟಕ ಆಟಗಾರ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಬೃಹತ್ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಿಗ್ಗಜ ಕ್ರಿಕೆಟಿಗ ಸ್ಪೋಟಕ ಆಟವನ್ನು ಪ್ರದರ್ಶಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ 350 ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆಗೆ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ. 8ನೇ ಓವರ್ ಎಸೆದ ಬೆನ್ ಸ್ಟೋಕ್ಸ್ ಎಸೆತವನ್ನು ಡೀಪ್ ಲೆಗ್‌ಸ್ಕ್ವೇರ್‌ನತ್ತ ಬಾರಿಸಿದ ಬೃಹತ್ ಸಿಕ್ಸರ್ ಬಾರಿಸುವ ಮೂಲಕ ಗೇಲ್ ಈ ಸಾಧನೆಯನ್ನು ಮಾಡಿದ್ದಾರೆ.
ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್
ಐಪಿಎಲ್‌ನಲ್ಲಿ ಸಿಕ್ಸರ್ ಬಾರಿಸಿದ ಪಟ್ಟಿಯಲ್ಲಿ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿರುವುದಲ್ಲದೆ ದೊಡ್ಡ ಅಂತರವನ್ನು ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ಎಬಿ ಡಿವಿಲಿಯರ್ಸ್ 237 ಸಿಕ್ಸರ್ ಸಿಡಿಸಿದ್ದಾರೆ. ಈ ಅಂತರ ಕ್ರಿಸ್ ಗೇಲ್ ಅವರ ಅಬ್ಬರದ ಆಟಕ್ಕೆ ಸಾಕ್ಷಿಯಾಗಿದೆ. ಇನ್ನು ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಗೇಲ್ 1009 ಸಿಕ್ಸರ್ ಬಾರಿಸಿದ್ದಾರೆ. ಟಿ20 ಮಾದರಿಯಲ್ಲಿ ಸಾವಿರಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಏಕೈಕ ಕ್ರಿಕೆಟಿಗ ಎನಿಸಿದ್ದಾರೆ ಕ್ರಿಸ್ ಗೇಲ್.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ತಮ್ಮ ಸಹಜ ಅಬ್ಬರದ ಪ್ರದರ್ಶನವನ್ನು ನೀಡಿದ್ದಾರೆ. 28 ಎಸೆತಗಳನ್ನು ಎದುರಿಸಿದ ಕ್ರಿಸ್ ಗೇಲ್ 40 ರನ್ ಬಾರಿಸಿ ಔಟಾದರು. ಈ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ಸೇರಿತ್ತು. 10ನೇ ಓವರ್‌ನಲ್ಲಿ ರಿಯಾನ್ ಪರಾಗ್‌ಗೆ ವಿಕೆಟ್ ಒಪ್ಪಿಸಿ ಗೇಲ್ ಹೊರನಡೆದರು.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಕ್ರಿಸ್ ಗೇಲ್ 40 ರನ್‌ಗಳ ಕೊಡುಗೆಯನ್ನು ಹೊರತುಪಡಿಸಿ ನಾಯಕ ಕೆಎಲ್ ರಾಹುಲ್ 91 ರನ್‌ಗಳಿಸಿ ಔಟಾದರೆ ದೀಪಕ್ ಹೂಡ ಸ್ಪೋಟಕ 64 ರನ್ ಸಿಡಿಸಿದರು. ನಿಗದಿತ 20 ಓವರ್‌ಗಳಲ್ಲಿ ಪಂಜಾಬ್ 221 ರನ್‌ಗಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications