ಇಂಥ ಕಳಪೆ ಆಟಗಾರನನ್ನು ಟೀಮ್ ಇಂಡಿಯಾಗೆ ಹೇಗೆ ತಗೊಂಡ್ರು?; ವೀಕ್ಷಕರ ಪ್ರಶ್ನೆ

ಶಿವಂ ದುಬೆ 2019ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ಮೂಲಕ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದರು. 2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 4 ಪಂದ್ಯಗಳನ್ನಾಡಿದ್ದ ಶಿವಂ ದುಬೆ ಬ್ಯಾಟಿಂಗ್‌ನಲ್ಲಿ ಗಳಿಸಿದ್ದು ಕೇವಲ 40 ರನ್ ಹಾಗೂ ಬೌಲಿಂಗ್‌ನಲ್ಲಿ ಯಾವುದೇ ವಿಕೆಟ್ ಕೂಡ ಪಡೆದಿದರಲಿಲ್ಲ. ತದನಂತರ 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೆಚ್ಚಿನ ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದ ಶಿವಂ ದುಬೆ ಮತ್ತೊಮ್ಮೆ ನಿರಾಸೆ ಮೂಡಿಸಿದರು. 2020ರಲ್ಲಿ 11 ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದ ಶಿವಂ ದುಬೆ ಬ್ಯಾಟಿಂಗ್‌ನಲ್ಲಿ ಗಳಿಸಿದ್ದು ಕೇವಲ 129 ರನ್ ಮತ್ತು ಬೌಲಿಂಗ್‌ನಲ್ಲಿ ಪಡೆದದ್ದು ಕೇವಲ 4 ವಿಕೆಟ್‍ಗಳು.

ಹೀಗೆ ಎರಡು ಆವೃತ್ತಿಗಳಲ್ಲಿಯೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಲಾಭದಾಯಕವಾಗುವಂತಹ ಆಟವನ್ನೇನೂ ಆಡದ ಶಿವಂ ದುಬೆ ಅವರನ್ನು ಪ್ರಸ್ತುತ ಸಾಲಿನ ಹರಾಜಿನ ವೇಳೆ ರಾಯಲ್ ಚ್ಯಾಲೆಂಜರ್ಸ್ ಬೆಂಗಳೂರು ತಂಡದಿಂದ ಕೈಬಿಡಲಾಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೈಬಿಟ್ಟ ಶಿವಂ ದುಬೆ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿತು. ಈ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ 6 ಪಂದ್ಯಗಳನ್ನಾಡಿರುವ ಶಿವಂ ದುಬೆ ಗಳಿಸಿರುವುದು 145 ರನ್. ಈ ಬಾರಿಯೂ ಸಹ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದ ಶಿವಂ ದುಬೆ ಗುರುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರ ಟೀಕೆಗೆ ಗುರಿಯಾಗಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿವಂ ದುಬೆ 31 ಎಸೆತಗಳಲ್ಲಿ 35 ರನ್ ಬಾರಿಸಿ ಔಟ್ ಆದರು. ಶಿವಂ ದುಬೆಯ ಈ ಇನ್ನಿಂಗ್ಸ್ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್ ಮತ್ತು ಟೀಕೆಗಳು ವ್ಯಕ್ತವಾಗುತ್ತಿದ್ದು ಇಷ್ಟೊಂದು ನಿಧಾನಗತಿಯ ಬ್ಯಾಟಿಂಗ್ ಮಾಡಿದ ಆಟಗಾರನನ್ನು ಟೀಮ್ ಇಂಡಿಯಾಗೆ ಹೇಗೆ ಆಯ್ಕೆ ಮಾಡಲಾಯಿತು ಎಂದು ಕಾಲೆಳೆಯಲಾಗುತ್ತಿದೆ. ನಾಲ್ಕನೇ ಕ್ರಮಾಂಕದಲ್ಲಿ ಶಿವಂ ದುಬೆ ಅವರನ್ನು ಕಳುಹಿಸುವ ಬದಲು ಡೇವಿಡ್ ಮಿಲ್ಲರ್ ಅಥವಾ ರಿಯಾನ್ ಪರಾಗ್ ಅವರನ್ನು ಕಳುಹಿಸಿದ್ದರೆ ತಂಡದ ಮೊತ್ತ ಇನ್ನಷ್ಟು ಹೆಚ್ಚುತ್ತಿತ್ತು ಎಂದು ಕ್ರೀಡಾಭಿಮಾನಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.

ಟೀಮ್ ಇಂಡಿಯಾ ಪರ ಶಿವಂ ದುಬೆ ಆಡಿರುವ ಪಂದ್ಯಗಳಲ್ಲಿಯೂ ಸಹ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಿಲ್ಲ. ಇತ್ತ ಐಪಿಎಲ್ ಟೂರ್ನಿಗಳಲ್ಲಿಯೂ ಸಹ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿರುವ ದುಬೆ ಅವರನ್ನು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಟೀಮ್ ಇಂಡಿಯಾ ಪರ ಆಡಲು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಯಿತು ಎಂದು ನೆಟ್ಟಿಗರು ಪ್ರಶ್ನೆ ಹಾಕುತ್ತಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Thursday, April 29, 2021, 19:43 [IST]
Other articles published on Apr 29, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X